News Kannada
Friday, October 07 2022

ಕರ್ನಾಟಕ

ನೀರಿಗಾಗಿ ಗ್ರಾಮಸ್ಥರಿಂದ ಶ್ರಮದಾನ! - 1 min read

Photo Credit :

ನೀರಿಗಾಗಿ ಗ್ರಾಮಸ್ಥರಿಂದ ಶ್ರಮದಾನ!

ಹನೂರು:  ಕ್ಷೇತ್ರ ವ್ಯಾಪ್ತಿಯ ಪೊನ್ನಾಚಿ ಗ್ರಾಮ ಪಂಚಾಯಿತಿಯ ಅಸ್ತೂರು ಗ್ರಾಮದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವುದರಿಂದ ಗ್ರಾಮಸ್ಥರೇ ಶ್ರಮದಾನದ ಮೂಲಕ ಬಾವಿಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಈ ಕುರಿತಂತೆ ಮಾತನಾಡಿದ ಗ್ರಾಮದ ಮುಖಂಡರು ಬರಗಾಲ ಆವರಿಸಿರುವ ಕಾರಣ ಮಳೆಯಿಲ್ಲದೇ  ಜಾನುವಾರುಗಳು ನೀರಿಗಾಗಿ ಪರಿತಪಿಸುವ ಪರಿಸ್ಥಿತಿ ಸೃಷ್ಠಿಯಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರವಾಗಿದ್ದು, ಹಿಂದಿನ ಜಿಲ್ಲಾ ಪಂಚಾಯತ್ ಸದಸ್ಯರಾದ ಈಶ್ವರ್ ನ ಆಡಳಿತದಲ್ಲಿ ಕೋಟ್ಯಂತರ ಹಣ ಅವ್ಯವಹಾರ ಎಸಗಿದ್ದು ಸಾಮಾನ್ಯ ಜನರಿಗೆ ಕುಡಿಯುವ ನೀರು ಒದಗಿಸಲಾಗಿಲ್ಲ.

ಇದೀಗ ನೂತನವಾಗಿ ಆಯ್ಕೆಯಾಗಿರುವ ಕೌದಳ್ಳಿ ಜಿಪಂ ಸದಸ್ಯರು ಕೂಡ ಅದೇ ಹಾದಿಯಲ್ಲಿ ಸಾಗಿದ್ದಾರೆ. ಈ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಸುಮಾರು 3000 ಜನಸಂಖ್ಯೆವುಳ್ಳವರಾಗಿದ್ದು, 1000ಕ್ಕೂ ಹೆಚ್ಚು ಜಾನುವಾರುಗಳಿದ್ದು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ. ಸರ್ಕಾರದ ಹಣವೂ ಪ್ರಭಾವಿಗಳ ಕೈಸೇರುವುದು ಎಷ್ಟರ ಮಟ್ಟಿಗೆ ಸರಿ? ಈ ಬಗೆಯಾಗಿ ಹಲವಾರು ಅಧಿಕಾರಿಗಳಿಗೆ ಗಮನಹರಿಸಲು ತಿಳಿಸಿದರೂ ಅವರು ಕೇಳಿಸಿದರೂ ಕೇಳಿಸದ ಹಾಗೆ ನಟನೆ ಮಾಡುವುದು ನಮ್ಮ ದುರಾದೃಷ್ಟ. ಆದುದರಿಂದ ನಾವೇ ಶ್ರಮದಾನದ ಮೂಲಕ ಬಾವಿಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿರುವುದಾಗಿ ತಿಳಿಸಿದರು.

See also  ಪಿಡಬ್ಲ್ಯೂಡಿ ಕಚೇರಿ ಮೇಲೆ ಎಸಿಬಿ ದಾಳಿ: ಲಂಚ ಸ್ವೀಕರಿಸುತ್ತಿದ್ದ ಮ್ಯಾನೇಜರ್ ಬಲೆಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು