News Kannada
Wednesday, October 05 2022

ಕರ್ನಾಟಕ

ಪೊಲೀಸರಿಂದ ದೌರ್ಜನ್ಯ ಆರೋಪ : ಪಿಎಫ್ಐ ಪ್ರತಿಭಟನೆ - 1 min read

Photo Credit :

ಪೊಲೀಸರಿಂದ ದೌರ್ಜನ್ಯ ಆರೋಪ : ಪಿಎಫ್ಐ ಪ್ರತಿಭಟನೆ

ಮಡಿಕೇರಿ: ವಿಚಾರಣೆಯ ನೆಪದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿ ದೌರ್ಜನ್ಯ ನಡೆಸುವ ಮೂಲಕ ಎರಡು ಕಿಡ್ನಿಗಳು ವೈಫಲ್ಯಗೊಳ್ಳುವುದಕ್ಕೆ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಕಾರಣಕರ್ತರಾಗಿದ್ದಾರೆ ಎಂದು ಆರೋಪಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದ ಪ್ರಮುಖರು ಹಾಗೂ ಕಾರ್ಯಕರ್ತರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದರು. ಖುರೇಷ್ ಎಂಬುವವರನ್ನು ಬಂಧಿಸಿದ ಪೊಲೀಸರು, ಕಾನೂನಿಗೆ ವಿರುದ್ಧವಾಗಿ ಸತತ ಏಳು ದಿನಗಳ ಕಾಲ ಅಕ್ರಮ ಬಂಧನದಲ್ಲಿಟ್ಟು ನಿರಂತರ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದರು. ಎರಡೂ ಕಿಡ್ನಿಗಳು ವೈಫಲ್ಯಗೊಳ್ಳುವುದಕ್ಕೆ ಕಾರಣಕರ್ತರಾಗಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಯುವಕನ ಮೇಲಿನ ದೌರ್ಜನ್ಯವನ್ನು ಖಂಡಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ಪೊಲೀಸರು ವಿನಾಕಾರಣ ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅಮಾಯಕ ಮುಸ್ಲಿಂ ಯುವಕರ ವಿರುದ್ಧ ಪೊಲೀಸರು ನಿರಂತರವಾಗಿ ದೌರ್ಜನ್ಯ ನಡೆಸುತ್ತಿದ್ದು, ಹೋರಾಟವನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯ ಸಂದರ್ಭ ಪೊಲೀಸರ ಮೇಲೆ ಹಲ್ಲೆಯಾಗಿದೆಯೆಂದು ಹಿರಿಯ ಪೊಲೀಸ್ ಅಧಿಕಾರಿಗಳು ನಿರಾಧಾರ ಹೇಳಿಕೆಯನ್ನು ನೀಡಿದ್ದಾರೆ. ಪೊಲೀಸರ ದೌರ್ಜನ್ಯಕ್ಕೆ ದೃಶ್ಯಾವಳಿಗಳು ಸಾಕ್ಷಿಯಾಗಿದ್ದು, ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳ ಮೂಲಕ ತಪ್ಪಿತಸ್ಥ ಪೊಲೀಸರನ್ನು ಪತ್ತೆ ಹಚ್ಚಿ ಅಮಾನತುಗೊಳಿಸಬೇಕು. ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿರುವ ಖುರೇಷ್ ಗೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರವನ್ನು ನೀಡಬೇಕು ಹಾಗೂ ಬಂಧಿಸಲ್ಪಟ್ಟಿರುವ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಪ್ರಮುಖರು ಒತ್ತಾಯಿಸಿದರು. ಪಿಎಫ್ಐ ಪ್ರಮುಖರಾದ ಮನ್ಸೂರ್, ಅಮಿನ್ ಮೊಹಿಸಿನ್, ಅಬ್ದುಲ್ ಅಡ್ಕಾರ್, ನೂರುದ್ದೀನ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಅಪರ ಜಿಲ್ಲಾಧಿಕಾರಿ ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

See also  ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಖಾಸಗಿ ಬಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು