News Kannada
Friday, October 07 2022

ಕರ್ನಾಟಕ

ಕೊಡಗಿನಲ್ಲಿ ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಎಸ್ಪಿಗೆ ದೂರು - 1 min read

Photo Credit :

ಕೊಡಗಿನಲ್ಲಿ ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಎಸ್ಪಿಗೆ ದೂರು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿರುವ ಪ್ರತಿ ಗ್ರಾಮ ಪಂಚಾಯಿತಿಗಳ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಗಳು ನಡೆಯುತ್ತಿದ್ದು, ಪೊಲೀಸರು ಕ್ರಮ ಕೈಗೊಳ್ಳದ ಬಗ್ಗೆ ಮತ್ತು ಸಿಬ್ಬಂದಿಗಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರು ನೀಡಲಾಗಿದ್ದು ಸ್ಪಂದನೆ ಸಿಗದಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಗ್ರಾಮಪಂಚಾಯತ್ ನೌಕರರ ಸಂಘ (ಸಿ.ಐ.ಟಿ.ಯು ಸಂಯೋಜಿತ) ಜಿಲ್ಲಾ ಸಮಿತಿ ಎಚ್ಚರಿಸಿದೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಪಿ. ಆರ್. ಭರತ್ ಮಾತನಾಡಿ, ಕೊಡಗಿನಲ್ಲಿ 104 ಗ್ರಾ.ಪಂ ಗಳಲ್ಲಿ ಸುಮಾರು ಒಂದು ಸಾವಿರದಷ್ಟು ಕಾರ್ಮಿಕ ಸಿಬ್ಬಂದಿ ವಿವಿಧ ಹುದ್ದೆಗಳಾದ ಬಿಲ್ಕಲೆಕ್ಟರ್, ನೀರು ನಿರ್ವಾಹಕ, ಕಂಪ್ಯೂಟರ್ ಆಪರೇಟರ್, ಸ್ವಚ್ಛತಾಗಾರರು ಮತ್ತು ಕಚೇರಿ ಸಹಾಯಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಿಲ್ಲ್ ಕಲೆಕ್ಟರ್, ನೀರು ನಿರ್ವಾಹಕರು, ಸ್ವಚ್ಛತಾ ಗಾರರ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಗಳು ನಡೆಯುತ್ತಿರುವುದು ಮುಂದುವರೆಯುತ್ತಿದೆ. ಗೋಣಿಕೊಪ್ಪಲು ಗ್ರಾ.ಪಂ.ನ ಬಿಲ್ಕಲೆಕ್ಟರ್ ಸುಬ್ರಮಣಿ ಎಂಬುವವರಿಗೆ ಪಂಚಾಯಿತಿ ಕಚೇರಿಯೊಳಗೆ ಕಾರ್ಯದರ್ಶಿ ಎದುರಿನಲ್ಲಿ ತಾಪಂ ಮಾಜಿ ಅಧ್ಯಕ್ಷೆ ರಾಣಿ ನಾರಾಯಣ್ ಅವರು ಅವಾಚ್ಯ ಶಬ್ಧಗಳಿಂದ ನಿಂದಿಸಿದಲ್ಲದೆ, ಹಲ್ಲೆ ಮಾಡಿದ್ದರೂ ಪಂಚಾಯಿತಿಯ ಕಾರ್ಯದಶರ್ಿಯಾಗಲಿ, ಪಿಡಿಓ ಆಗಲಿ, ಸ್ಥಳೀಯ ಪೊಲೀಸರಿಗೆ ದೂರು ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಅದೇ ರೀತಿ ನಾಪೋಕ್ಲು ಗ್ರಾಮಪಂಚಾಯಿತಿಯ ಬಿಲ್ ಕಲೆಕ್ಟರ್ ವೀರನ್ ಎಂಬುವವರ ಮೇಲೆ ಸ್ಥಳೀಯ ವ್ಯಾಪಾರಿ ಅಶ್ರಫ್, ಹಾಲುಗುಂದ ಗ್ರಾ.ಪಂ ನ ನೀರು ನಿರ್ವಾಹಕ ಸಿಖಂದರ್ ಮೇಲೆ, ಕೊಡಗರಲ್ಲಿ ಗ್ರಾ.ಪಂ ನೀರು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದರೂ ಹಲ್ಲೆ ಕೋರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸದೆ ನಿರ್ಲಕ್ಷ್ಯ ತೋರಿದ್ದಾರೆಂದು ಪೊಲೀಸರ ಕರ್ತವ್ಯ ವೈಖರಿ ವಿರುದ್ಧ ಕಿಡಿಕಾರಿದರು.
ಹಲ್ಲೆ ಪ್ರಕರಣಗಳು ನಡೆದಾಗ ಆಯಾ ಪಂಚಾಯಿತಿಯ ಕಾರ್ಯದರ್ಶಿಗಳು ಮತ್ತು ಪಿ.ಡಿ.ಓ ಗಳು ತಮ್ಮ ಪಂಚಾಯಿತಿಯ ಸಿಬ್ಬಂದಿಗಳ ಪರ ನಿಲ್ಲದೆ ಹಲ್ಲೆಕೋರರ ಪರ ನಿಲ್ಲುವುದನ್ನು ಖಂಡಿಸುವುದಾಗಿ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಗ್ರಾ.ಪಂ. ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರಿಗೆ ಮತ್ತು ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲು ಮಾಡಿಕೊಂಡು ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಲಿಖಿತ ದೂರು ನೀಡುವುದಾಗಿ ಭರತ್ ಅವರು ತಿಳಿಸಿದರು. ಸುದ್ದಿ ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಉಮೇಶ್ ಮತ್ತು ಪದಾಧಿಕಾರಿ ಅಣ್ಣಪ್ಪ ಉಪಸ್ಥಿತರಿದ್ದರು.  

See also  ಪ್ರಯಾಣಿಕರಿಗೆ ತಂಗುದಾಣ, ಶೌಚಾಲಯ ನಿರ್ಮಿಸಿ : ಜೋಯಪ್ಪ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು