News Kannada
Wednesday, September 28 2022

ಕರ್ನಾಟಕ

ಶ್ರೀ ಸಿದ್ದೇಶ್ವರ ದೇಗುಲದಲ್ಲಿ ಮಳೆಗಾಗಿ ಪ್ರಾರ್ಥನೆ - 1 min read

Photo Credit :

ಶ್ರೀ ಸಿದ್ದೇಶ್ವರ ದೇಗುಲದಲ್ಲಿ ಮಳೆಗಾಗಿ ಪ್ರಾರ್ಥನೆ

ಹಾಸನ: ಮಳೆಯಿಲ್ಲದೆ ಕಂಗಾಲಾಗಿರುವುದರಿಂದ ಮಳೆ ಬಂದು ಸಂಕಷ್ಟ ನೀಗಲೆಂದು ನಗರದ ಗೌರಿಕೊಪ್ಪಲುನಲ್ಲಿರುವ ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ 101 ಎಲೆಯ ಎಡೆಯಿಟ್ಟು ದೇವರಿಗೆ ಅರ್ಪಿಸುವ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು.

ದೇಗುಲಕ್ಕೆ ಭೇಟಿ ನೀಡಿದ ಶಾಸಕ ಹೆಚ್.ಎಸ್. ಪ್ರಕಾಶ್, ನಗರಸಭೆ ಅಧ್ಯಕ್ಷ ಹೆಚ್.ಎಸ್. ಅನಿಲ್ ಕುಮಾರ್, ಜಿಪಂ ಸದಸ್ಯ ಸ್ವರೂಪ್ ಅವರು ಕೂಡ ವಿಶೇಷ ಪೂಜೆ ಸಲ್ಲಿಸಿದರು.

ಬೆಳಿಗ್ಗೆಯಿಂದಲೇ ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ಈ ಸಂದರ್ಭ ಪಾಲ್ಗೊಂಡಿದ್ದ ಭಕ್ತರು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿ ಮಳೆ ಸುರಿದು ಸುಭೀಕ್ಷೆಯುಂಟಾಗಲಿ ಎಂದು ಪ್ರಾರ್ಥಿಸಿದರು.

ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶಾಸಕ ಹೆಚ್.ಎಸ್. ಪ್ರಕಾಶ್ ಮಾತನಾಡಿ, ಎಷ್ಟೇ ವಿಜ್ಞಾನ ಬೆಳೆದರೂ ವೈಜ್ಞಾನಿಕ ಈ ಕಾಲದಲ್ಲೂ ಮಳೆಗಾಗಿ ಪ್ರಾರ್ಥಿಸುವುದು ಅನಿವಾರ್ಯವಾಗಿದೆ. ಹಿಂದೆ ಮಳೆಗಾಗಿ ಇಂತಹ ಸಂಪ್ರದಾಯ ಮಾಡಲಾಗುತ್ತಿತ್ತು. ಆಗ ಮಳೆ ಸುರಿಯುತ್ತಿದ್ದ ನಿದರ್ಶನಗಳಿವೆ. ಕಳೆದ ಎರಡು ವರ್ಷಗಳಿಂದ ರಾಜ್ಯ ಮತ್ತು ಜಿಲ್ಲೆಯಲ್ಲಿ ಬರಗಾಲದ ಛಾಯೆ ಎದುರಾಗಿದ್ದು,. ಅದನ್ನು ಹೋಗಲಾಡಿಸಿ ಮಳೆ ಬರುವುದರ ಮೂಲಕ ನೀರಿನ ಸಮಸ್ಯೆ ನಿವಾರಣೆಯಾಗಿ ರೈತಾಪಿ ಜನ ಸೇರಿದಂತೆ ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾಗಿ ಹೇಳಿದರು.

ಪೂಜಾ ಕಾರ್ಯಕ್ರಮದಲ್ಲಿ ಸತ್ಯಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮ ಮೋಹನ್ಕುಮಾರ್, ಕಿರಣ್, ದರ್ಶನ್ಬಾಬು, ಹೆಚ್ಡಿಸಿಸಿ ಬ್ಯಾಂಕ್ ಹಾಗೂ ಎಪಿಎಂಸಿ ನಿರ್ದೇಶಕ ಬಿದರಿಕೆರೆ ಜಯರಾಂ ಇನ್ನಿತರರು ಪಾಲ್ಗೊಂಡಿದ್ದರು. 

See also  ರೈತ ಮಹಿಳೆಯ ನಿಂದಿಸಿದ ಸಿಎಂ: ಬಿಜೆಪಿಯಿಂದ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು