News Kannada
Wednesday, October 05 2022

ಕರ್ನಾಟಕ

ದಿಡ್ಡಳ್ಳಿ ಗುಡಿಸಲುಗಳ ಮೇಲೆ ಗುಂಡು ಹಾರಿಸಿದಾತನ ಬಂಧನ - 1 min read

Photo Credit :

ದಿಡ್ಡಳ್ಳಿ ಗುಡಿಸಲುಗಳ ಮೇಲೆ ಗುಂಡು ಹಾರಿಸಿದಾತನ ಬಂಧನ

ಮಡಿಕೇರಿ: ಶಾಶ್ವತ ನಿವೇಶನಕ್ಕಾಗಿ ಆಗ್ರಹಿಸಿ ಹೋರಾಟದ ರೂಪದಲ್ಲಿ ದಿಡ್ಡಳ್ಳಿಯಲ್ಲಿ ನೆಲೆಸಿರುವ ಆದಿವಾಸಿ ಕುಟುಂಬಗಳ ಗುಡಿಸಲಿನ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ.

ಮಾಲ್ದಾರೆಯ ಗೂಡ್ಲೂರು ನಿವಾಸಿ ಎ.ಪೂಣಚ್ಚ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಕೆಲಸಕ್ಕೆ ಬರುವುದಾಗಿ ಹೇಳಿ ಸಾಲ ಪಡೆದ ಕಾರ್ಮಿಕರು ಹಣವನ್ನು ಮರುಪಾವತಿಸಲಿಲ್ಲವೆಂದು ಕುಪಿತಗೊಂಡು ಬೆದರಿಸುವ ಸಲುವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಆತ ಸಮಜಾಯಿಷಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿ ದುಷ್ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ ಬಂದೂಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಘಟನೆ ವಿವರ:
ಏ.10 ರಂದು ರಾತ್ರಿ ಮಳೆಯ ನಡುವೆಯೆ ಬೈಕ್ನಲ್ಲಿ ಆಗಮಿಸಿದ ದುಷ್ಕರ್ಮಿ ಗುಡಿಸಲೊಂದರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಮಳೆ ಸುರಿಯುತ್ತಿದ್ದ ಕಾರಣ ಅಂದು ಆ ಗುಡಿಸಲಿನಲ್ಲಿ ಯಾರೂ ಇರಲಿಲ್ಲವಾದ್ದರಿಂದ ಭಾರೀ ದುರ್ಘಟನೆ ತಪ್ಪಿದೆ. ಗುಂಡಿನ ಶಬ್ಧ ಕೇಳಿ ಸುತ್ತಮುತ್ತಲ ಆದಿವಾಸಿಗಳು ಗುಡಿಸಲಿನಿಂದ ಹೊರ ಬರುವಷ್ಟರಲ್ಲಿ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದ. ಆದರೆ ಸ್ಥಳದಲ್ಲಿ ಗುಂಡಿನ ಚಿಲ್ಲುಗಳು ದೊರಕಿವೆ.

ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ದಿಡ್ಡಳ್ಳಿಯ ಪಣಿಯರವರ ಬಸವ, ತಾನು ರಾತ್ರಿ ವೇಳೆ ಮನೆಯ ಬಳಿ ಇರುವ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬಾತ ಬೈಕ್ ನಲ್ಲಿ ಆಗಮಿಸಿ ಗುಡಿಸಲಿನತ್ತ ಗುಂಡು ಹಾರಿಸಿದ್ದ. ಈ ಶಬ್ದ ಕೇಳಿ ತಾನು ಅತ್ತ ಧಾವಿಸಿದ ಸಂದರ್ಭ ಆತ ನೇರವಾಗಿ ನನ್ನ ಮೇಲೆ ಗುಂಡು ಹಾರಿಸಲು ಯತ್ನಿಸಿದ. ತಾನು ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡಿದ್ದು, ನಂತರ ಹಾಡಿಯ ನಿವಾಸಿಗಳು ಆತನನ್ನು ಹುಡುಕುವ ಸಂದರ್ಭ ಆತ ರಾತ್ರಿ ತಲೆಮರೆಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಹಾಡಿಯ ನಿವಾಸಿ ರಂಜು ಮಾತನಾಡಿ, ಹೋರಾಟವನ್ನು ಹತ್ತಿಕ್ಕಲು ಯಾವುದೇ ರೀತಿಯ ಷಡ್ಯಂತ್ರಗಳು ನಡೆದರೂ ಶಾಶ್ವತ ಸೂರು ಸಿಗುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಹೇಳಿದರು.

ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಆದಿವಾಸಿಗಳು ಹಾಗೂ ದುರ್ಬಲರು ಸ್ವತಂತ್ರವಾಗಿ ಬದುಕಲು ಬಯಸುವುದನ್ನು ಅರಗಿಸಿಕೊಳ್ಳಲಾಗದ ಬಲಾಢ್ಯರು ದಿಡ್ಡಳ್ಳಿಯಲ್ಲಿ ನೆಲೆ ನಿಂತಿರುವ ನಿರಾಶ್ರಿತರ ಗುಡಿಸಲುಗಳ ಮೇಲೆ ಗುಂಡು ಹಾರಿಸಿ, ಹೋರಾಟವನ್ನು ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪ್ರಮುಖರಾದ ಅಮಿನ್ ಮೊಹಿಸಿನ್ ಆರೋಪಿಸಿದ್ದಾರೆ. ಪೊಲೀಸರ ಸರ್ಪಗಾವಲು ಹಾಗೂ ಗುಪ್ತಚರ ಇಲಾಖೆಯ ನಿಗಾದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಗಳನ್ನು ರಚಿಸಲಾಗಿದ್ದರೂ ಆಗಂತುಕರು ದಿಡ್ಡಳ್ಳಿಯಲ್ಲಿ ಗುಂಡಿನ ದಾಳಿ ನಡೆಸಲು ಹೇಗೆ ಸಾಧ್ಯವೆಂದು ಪ್ರಶ್ನಿಸಿದ್ದಾರೆ.

See also  ಗ್ರಾಮ ಪಂಚಾಯ್ತಿಗೆ ಅವಿರೋಧ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು