News Kannada
Thursday, September 29 2022

ಕರ್ನಾಟಕ

ಶಿಕಾರಿಪುರದಲ್ಲಿ ಮೃತಪಟ್ಟವರಲ್ಲಿ ಇಬ್ಬರು ಮಾಗಡಿಯವರು! - 1 min read

Photo Credit :

  ಶಿಕಾರಿಪುರದಲ್ಲಿ ಮೃತಪಟ್ಟವರಲ್ಲಿ ಇಬ್ಬರು ಮಾಗಡಿಯವರು!

ಮಾಗಡಿ: ಶಿವಮೊಗ್ಗದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಏಳು ಮಂದಿ ಪೈಕಿ ಇಬ್ಬರು ಮಾಗಡಿಯವರಾಗಿದ್ದಾರೆ. ಸ್ನೇಹಿತರ ಮದುವೆಗೆಂದು ಕಾರಿನಲ್ಲಿ ಶಿವಮೊಗ್ಗಕ್ಕೆ ಹೋಗುತ್ತಿದ್ದಾಗ ಶಿಕಾರಿಪುರ ಬಳಿ ಮರದ ದಿಮ್ಮಿ ಹೊತ್ತೊಯ್ಯುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು  ಕಾರಿನಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಮೃತಪಟ್ಟಿದ್ದರು. ಈ ಪೈಕಿ ಮಾಗಡಿ ತಾಲೂಕಿ  ವೀರೇಗೌಡನದೊಡ್ಡಿಯ ಸದಾಶಿವಯ್ಯನವರ ಪುತ್ರರಾದ ಮಧು (25) ಮತ್ತು ಪ್ರವೀಣ್ (29) ಇಬ್ಬರು ಸೇರಿದ್ದಾರೆ.

ಇವರಿಬ್ಬರಲ್ಲಿ ಒಬ್ಬ ಬೆಂಗಳೂರಿನಲ್ಲಿ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರೆ, ಮತ್ತೊಬ್ಬ ಸಿನಿಮಾ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದನು. ಸ್ನೇಹಿತರ ಮದುವೆಗಾಗಿ ಬುಧವಾರ ರಾತ್ರಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ಶಿಕಾರಿಪುರ ಬಳಿ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಶಿವಮೊಗ್ಗದಿಂದ ವೀರೇಗೌಡನದೊಡ್ಡಿಗೆ ತರಲಾಗಿದ್ದು ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

See also  ಕರ್ನಾಟಕದಲ್ಲಿ ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಹೊಸ ಕಾನೂನು ತರಲು ಯೋಜನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು