News Kannada
Tuesday, October 04 2022

ಕರ್ನಾಟಕ

ಮಹದೇಶ್ವರಬೆಟ್ಟದಲ್ಲಿ 1.29 ಕೋಟಿ ರೂ ಸಂಗ್ರಹ - 1 min read

Photo Credit :

ಮಹದೇಶ್ವರಬೆಟ್ಟದಲ್ಲಿ 1.29 ಕೋಟಿ ರೂ ಸಂಗ್ರಹ

ಮಹದೇಶ್ವರಬೆಟ್ಟ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರಬೆಟ್ಟದ ದೇಗುಲದಲ್ಲಿ 1.29 ಕೋಟಿ ರೂ ಸಂಗ್ರಹವಾಗಿದೆ. ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಉಪಸ್ಥಿತಿಯಲ್ಲಿ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ ಕಾಣಿಕೆ ದಾಖಲೆ ಪ್ರಮಾಣದಲ್ಲಿ ಸಂಗ್ರಹವಾಗಿದೆ.

ಎಣಿಕೆ ಸಂದರ್ಭ ರೂ.  1,29,84,322( ಒಂದು ಕೋಟಿ ಇಪ್ಪತ್ತೊಂಬತ್ತು ಲಕ್ಷದ ಎಂಬತ್ತ ನಾಲ್ಕು ಸಾವಿರದ ಮೂರು ನೂರ ಇಪ್ಪತ್ತೆರಡು) ಕಾಣಿಕೆ ರೂಪದಲ್ಲಿ ದೊರೆತಿದ್ದರೆ, ಇದರ ಜೊತೆಗೆ ಚಿನ್ನದ  ಪದಾರ್ಥಗಳು 0. 071 ( ಎಪ್ಪತ್ತೊಂದು ಗ್ರಾಂ) ಮತ್ತು ಬೆಳ್ಳಿ  ಪದಾರ್ಥಗಳು 1.540(ಒಂದು ಕೆಜಿ ಐದುನೂರ ನಲವತ್ತು ಗ್ರಾಂ) ಸಂಗ್ರಹವಾಗಿದೆ.
ಈ ವೇಳೆ ಮಹದೇಶ್ವರ ಸ್ವಾಮಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಗಾಯತ್ರಿ, ಶ್ರೀ ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿ ಮ.ಮ. ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಭಾರ  ಉಪ ಕಾರ್ಯದರ್ಶಿ ಎಂ.ಬಸವರಾಜು,  ಸಹಾಯಕ ಅಭಿಯಂತ ಆರ್.ಎಸ್.ಮನುವಾಚಾರ್ಯ, ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ,  ಕಚೇರಿ ಅಧೀಕ್ಷಕ  ಬಿ.ಮಾದರಾಜು ಹಾಗೂ ದೇವಸ್ಥಾನದ ಸಿಬ್ಬಂದಿ, ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ  ಪ್ರಥಮ ದರ್ಜೆ ಸಹಾಯಕ ಮೋಹನ್ ಕುಮಾರ್ ಮತ್ತು ಷಣ್ಮುಗ ವರ್ಮ, ಆರಕ್ಷಕ ನಿರೀಕ್ಷಕರು, ಮಹದೇಶ್ವರಬೆಟ್ಟ ಹಾಗೂ ಆರಕ್ಷಕ  ಸಿಬ್ಬಂದಿ, ಎಸ್ಬಿಎಂ. ವ್ಯವಸ್ಥಾಪಕ ಸೆಂದಿಲ್ ನಾಥನ್,  ಸಿಬ್ಬಂದಿ ಇದ್ದರು.

See also  ದಲಿತ ವ್ಯಕ್ತಿಯನ್ನು ಕೊಚ್ಚಿ ಕೊಲೆ: ಶವವಿಟ್ಟು ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು