News Kannada
Friday, September 30 2022

ಕರ್ನಾಟಕ

ಅತ್ತಿಂಗೆರೆ ಸರ್ಕಾರಿ ಶಾಲೆಯಲ್ಲಿ ಪಾಠ ಕಲಿಯೋಕೆ ಭಯ! - 1 min read

Photo Credit :

ಅತ್ತಿಂಗೆರೆ ಸರ್ಕಾರಿ ಶಾಲೆಯಲ್ಲಿ ಪಾಠ ಕಲಿಯೋಕೆ ಭಯ!

ಮಾಗಡಿ: ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡುವ ಸರ್ಕಾರ ಈಗಿರುವ ಶಾಲೆಗಳತ್ತ ಗಮನಹರಿಸದ ಕಾರಣದಿಂದಾಗಿ ಬಹಳಷ್ಟು ಶಾಲೆಗಳ ಕಟ್ಟಡಗಳು ಶಿಥಿಲಗೊಂಡು ಇಂದೋ, ನಾಳೆಯೋ ಬೀಳುವ ಮಟ್ಟಕ್ಕೆ ಬಂದು ತಲುಪಿದೆ.

ಬಹಳಷ್ಟು ಪೋಷಕರು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ನೋಡಿ ಭಯಗೊಂಡು ಖಾಸಗಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುತ್ತಿದ್ದಾರೆ. ಇವತ್ತು ಹೆಚ್ಚಿನ ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆಯ ಕಟ್ಟಡ, ಶಿಕ್ಷಕರ ಕೊರತೆ ಮತ್ತು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ಹೀಗಾಗಿ ಬಿಸಿಯೂಟ, ಕ್ಷೀರಭಾಗ್ಯ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡಿದರೂ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ.

ರಾಜ್ಯದಲ್ಲಿ ಕಟ್ಟಡಗಳು ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಗಳ ದೊಡ್ಡ ಪಟ್ಟಿಯೇ ಇದ್ದು ಅಂತಹ ಶಾಲೆಗಳ ಪಟ್ಟಿಗೆ ಮಾಗಡಿ ತಾಲೂಕಿನ ಅತ್ತಿಂಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯೂ ಸೇರ್ಪಡೆಯಾಗುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಹಲವು ವರ್ಷಗಳ ಹಿಂದೆ ಕಿರಿಯ ಪ್ರಾಥಮಿಕ ಶಾಲೆಯನ್ನು ಅತ್ತಿಂಗೆರೆ ಗ್ರಾಮದಲ್ಲಿ ತೆರೆಯಲಾಗಿದ್ದು, ಪ್ರಸ್ತುತ ಸುಮಾರು 52 ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಶಾಲೆಯ ಪಾಠ ಪ್ರವಚನಕ್ಕೆ ಅನುಕೂಲವಾಗುವಂತೆ ಕಳೆದ 12 ವರ್ಷಗಳ ಹಿಂದೆ ಶಾಲಾ ಕಟ್ಟಡವನ್ನು ನಿರ್ಮಿಸಲಾಗಿದೆ. ಆದರೆ ಕಟ್ಟಡ ಅದಾಗಲೇ ಶಿಥಿಲಾವಸ್ಥೆಗೆ ತಲುಪಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕಟ್ಟಡದ ಮೇಲ್ಛಾವಣಿ ಕಿತ್ತು ಬೀಳುತ್ತಿದೆ. ಶಾಲಾ ಅವಧಿಯಲ್ಲಿ ಬಿದ್ದರೆ ಏನು ಮಾಡುವುದು ಎಂಬ ಭಯದಲ್ಲಿ ಶಿಕ್ಷಕರು ಪಾಠ ಮಾಡಿದರೆ, ಮಕ್ಕಳು ಕೂಡ ಭಯದಲ್ಲೇ ಕುಳಿತು ಪಾಠ ಕೇಳುವಂತಾಗಿದೆ. ಈಗಾಗಲೇ ಕಟ್ಟಡದ ಮೇಲ್ಛಾವಣಿ ಕಿತ್ತು ಬಂದು ಕಬ್ಬಿಣದ ಕಂಬಿಗಳು ಕಾಣುತ್ತಿದ್ದು, ಮಳೆ ಬಂದರಂತು ಛಾವಣಿಯಿಂದ ನೀರು ಸೋರುತ್ತ್ತದೆ.  ಗೋಡೆಗಳು ಬಿರುಕು ಬಿಟ್ಟಿದ್ದು ಭಯ ಕಾಡುತ್ತಿದೆ.

ಶಾಲೆಯ ಕಟ್ಟಡದ ದುಸ್ಥಿತಿಯನ್ನು ಕಂಡ ಗ್ರಾಮಸ್ಥರು ಶಾಲಾ ಕಟ್ಟಡ ವಿದ್ಯಾರ್ಥಿಗಳಿಗೆ ಕ್ಷೇಮವಲ್ಲ. ಆದ್ದರಿಂದ ಬೇರೆಡೆಗೆ ಸ್ಥಳಾಂತರಿಸಿ ಎಂಬ ಒತ್ತಾಯವನ್ನು ಮಾಡುತ್ತಾ ಬಂದಿದ್ದಾರೆ. ಶಾಲಾ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ ಕುರಿತಂತೆ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಬಿಇಒ ಅವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಮುಖ್ಯ ಶಿಕ್ಷಕರ ಅಳಲಾಗಿದೆ. ಈ ಶಾಲೆಯತ್ತ ಸ್ಥಳೀಯ ಪ್ರತಿನಿಧಿಗಳು ಗಮನಹರಿಸಿದಂತೆ ಕಂಡು ಬಂದಿಲ್ಲ. ಪರಿಣಾಮ ಶಿಥಿಲಾವಸ್ಥೆಯ ಕಟ್ಟಡದಲ್ಲಿ ಭಯದಲ್ಲೇ ಶಿಕ್ಷಕರು ಪಾಠ ಮಾಡುವ ಮತ್ತು ವಿದ್ಯಾರ್ಥಿಗಳು ಕಲಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

See also  ನೇಪಥ್ಯಕ್ಕೆ ಸರಿದ ಕೊಡಗಿನ ಏಲಕ್ಕಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು