News Kannada
Thursday, September 29 2022

ಕರ್ನಾಟಕ

ಪರಿಶಿಷ್ಟ ಜಾತಿಯವರಿಗೂ ನಿವೇಶನ ನೀಡಿ: ಹೆಚ್.ಎಸ್.ಮುತ್ತಪ್ಪ ಒತ್ತಾಯ - 1 min read

Photo Credit :

ಪರಿಶಿಷ್ಟ ಜಾತಿಯವರಿಗೂ ನಿವೇಶನ ನೀಡಿ: ಹೆಚ್.ಎಸ್.ಮುತ್ತಪ್ಪ ಒತ್ತಾಯ

ಮಡಿಕೇರಿ: ಕಾಫಿ ತೋಟಗಳ ಲೈನ್ಮನೆಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ನಿವೇಶನ ಮತ್ತು ವಸತಿ ನೀಡಲು ಜಿಲ್ಲಾಡಳಿತ ಮುಂದಾಗಿರುವುದು ಸ್ವಾಗತಾರ್ಹ. ಆದರೆ ಲೈನ್ಮನೆಗಳಲ್ಲಿ ವಾಸವಿರುವ ಪರಿಶಿಷ್ಟ ಜಾತಿಯವರಿಗೂ ಇದೇ ಸೌಲಭ್ಯವನ್ನು ನೀಡಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಬಹುಜನ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರಾದ ಹೆಚ್.ಎಸ್.ಮುತ್ತಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದವರಂತೆ ಕೊಡಗಿನ ಕಾಫಿ ತೋಟಗಳ ಲೈನ್ಮನೆಗಳಲ್ಲಿ ತಲತಲಾಂತರದಿಂದ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಸಾವಿರಾರು ಕುಟುಂಬಗಳಿದ್ದು, ಅವರು ಕೂಡ ನಿವೇಶನ ಹಾಗೂ ವಸತಿ ರಹಿತರಾಗಿದ್ದಾರೆ. ಆದ್ದರಿಂದ ಅವರಿಗೂ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

ಮತ್ತೊಂದೆಡೆ 94ಸಿ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು ಸಮರ್ಪಕವಾಗಿ ವಿಲೇವಾರಿಯಾಗದೆ ಬಡ ಜನರು ಸಂಕಷ್ಟಕ್ಕೆ ಸಿಲುಕಿದ್ದು, ಇದು ಅಧಿಕಾರಿಗಳ ನಿರ್ಲಕ್ಷ್ಯವೋ ಅಥವಾ ರಾಜಕಾರಣವೋ ಎಂಬ ಶಂಕೆ ಮೂಡುತ್ತಿದೆ. ಈ ಹಿನ್ನೆಲೆಯಲ್ಲಿ ಅಂತಹ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಲು ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.

ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಕಾಲೋನಿಗಳು ಅಭಿವೃದ್ಧಿಯಾಗದೆ ರಸ್ತೆ, ಮೋರಿ, ಚರಂಡಿ ವ್ಯವಸ್ಥೆ ಇನ್ನಿತರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಪರಿಶಿಷ್ಟರಿಗೆ ಮೀಸಲಾದ ಅನುದಾನಗಳು ಕಾಲೋನಿಗಳಿಗೆ ತಲುಪುತ್ತಿಲ್ಲ ಎಂದು ಮುತ್ತಪ್ಪ ಆರೋಪಿಸಿದರು.

ಗರಗಂದೂರಿನ ‘ಎ’ ಮಲ್ಲಿಕಾರ್ಜುನ ಕಾಲೋನಿ, ಐಗೂರಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರಿನ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ಸಂಚಾರಕ್ಕೆ ಯೋಗ್ಯವಾಗಿಲ್ಲ. ಈ ರಸ್ತೆಯ ಅಭಿವೃದ್ಧಿಗೆ ಅಲ್ಪಸ್ವಲ್ಪ ಅನುದಾನವನ್ನು ಮಾತ್ರ ಮೀಸಲಿಡಲಾಗುತ್ತಿದ್ದು, ಆ ಹಣವನ್ನೂ ಸಮರ್ಪಕವಾಗಿ ಬಳಕೆ ಮಾಡುತ್ತಿಲ್ಲ ಎಂದರು. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ-ಪಂಗಡದವರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಂಬಂಧಿಸಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಮುತ್ತಪ್ಪ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎ.ಗಣೇಶ್ ಹಾಜರಿದ್ದರು.

See also  ಕೊಡಗಿನಲ್ಲಿ ಭಯ ಹುಟ್ಟಿಸಿದ ಹುಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು