News Kannada
Friday, September 30 2022

ಕರ್ನಾಟಕ

ಕೊಡವ ಭಾಷೆ, ಕಲೆಗಾಗಿ ದುಡಿದವರಿಗೆ ಸನ್ಮಾನ - 1 min read

Photo Credit :

ಕೊಡವ ಭಾಷೆ, ಕಲೆಗಾಗಿ ದುಡಿದವರಿಗೆ ಸನ್ಮಾನ

ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ 2015-16 ಮತ್ತು 2016-17ನೇ ಸಾಲಿನ ಗೌರವ ಪ್ರಶಸ್ತಿ ಮತ್ತು 2015-16ನೇ ಸಾಲಿನ ಪುಸ್ತಕ ಪ್ರಶಸ್ತಿಯನ್ನು ಕೊಡವ ಕಲೆ, ಸಾಹಿತ್ಯ, ಸಂಸ್ಕೃತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವರಿಗೆ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಬಾಳೆಕುಟ್ಟಿರ ಪಿ.ಈರಪ್ಪ, ಚೌರೀರ ಸೋಮಯ್ಯ ತಿಮ್ಮಯ್ಯ, ಕುಡಿಯರ ಸಿ.ದೇವಕ್ಕಿ, ಪುಗ್ಗೇರ ಪೂವಮ್ಮ, ಕುಟ್ಟಂಡ ರಾಜರಾಂ ಗಣಪತಿ, ಬೀಕಚಂಡ ಎಂ.ಬಿದ್ದಪ್ಪ, ಉತ್ತುಕುಟ್ಟಡ ಸಿ.ತಿಮ್ಮ, ಪೊನ್ನೀರ ಗಗನ್, ಬಲ್ಯಮಿದೇರಿರ ಸಿ.ನಾಣಯ್ಯ ಇವರಿಗೆ ಗೌರವ ಪ್ರಶಸ್ತಿ ನೀಡಲಾಯಿತು.

ಬೊವ್ವೇರಿಯಂಡ ಉತ್ತಯ್ಯ, ಮೊಣ್ಣಂಡ ಶೋಭ ಸುಬ್ಬಯ್ಯ, ಐತಿಚಂಡ ರಮೇಶ್ ಉತ್ತಪ್ಪ, ಅಮ್ಮಣಿಚಂಡ ಪ್ರವೀಣ್ ಚಂಗಪ್ಪ ಮತ್ತು ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಇವರಿಗೆ ಪುಸ್ತಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಮಾತನಾಡಿ ಕೊಡಗಿನ ಸಾಹಿತ್ಯ, ಸಂಸ್ಕೃತಿ, ಕಲೆಯ ಹಿರಿಮೆ ಹೆಚ್ಚಿಸುವಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ಉತ್ತಮ ಕಾರ್ಯನಿರ್ವಹಿಸುತ್ತಿದ್ದು, ಅಕಾಡಮಿಗೆ ಎಲ್ಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಅಕಾಡೆಮಿ ಮಹತ್ತರ ಪಾತ್ರ ವಹಿಸುತ್ತಿದೆ. ಆ ನಿಟ್ಟಿನಲ್ಲಿ ಕೊಡವ ಸಾಹಿತ್ಯ, ಸಂಸ್ಕೃತಿ, ಕಲೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಹಿರಿಯ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಅಕಾಡೆಮಿ ವತಿಯಿಂದ ದೇಶ ವಿದೇಶಗಳಲ್ಲಿ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಹಳ್ಳಿಯಿಂದ ದೆಹಲಿಯವರೆಗೆ ಕೊಡಗಿನ ಸಾಹಿತ್ಯ, ಸಂಸ್ಕೃತಿ, ಕಲೆಗಳು ಫಸರಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಅವರು ಹೇಳಿದರು. ಕೊಡಗು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದ್ದು, ದೇಶಕ್ಕೆ ಹಲವು ಕೊಡುಗೆ ನೀಡಿದೆ. ಆ ನಿಟ್ಟಿನಲ್ಲಿ ಅಕಾಡೆಮಿಗೆ ಒಂದು ಕೋಟಿ ರೂ.ನಷ್ಟು ಹಣ ಬಿಡುಗಡೆ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ ಅವರು ಮಾತನಾಡಿ ಕಳೆದ ಮೂರು ವರ್ಷದಲ್ಲಿ ಅಕಾಡೆಮಿ ಮೂಲಕ ಕೊಡವ ಸಂಸ್ಕೃತಿ, ಕಲೆಗೆ ಸಂಬಂಧಿಸಿದಂತೆ ಹಲವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ,  ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ, ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎ.ಸಿ.ದೇವಯ್ಯ ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಲೋಕೇಶ್ ಸಾಗರ್,  ಕ.ಸಾ.ಪ.ಜಿಲ್ಲಾ ಘಟಕದ ಅಧ್ಯಕ್ಷರಾದ ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎ.ಸಿ.ದೇವಯ್ಯ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೂಕೊಂಡ ಪಿ.ಸುಬ್ರಮಣಿ ಇತರರು ಇದ್ದರು.

See also  ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಡಾ.ಉಮೇಶ್ ಜಾಧವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು