News Kannada
Monday, October 03 2022

ಕರ್ನಾಟಕ

ಕೊಡಗಿನ ಜಿಪಂ ಸಭೆಯಲ್ಲಿ ಸಮಸ್ಯೆಗಳ ಸುರಿಮಳೆ! - 1 min read

Photo Credit :

ಕೊಡಗಿನ ಜಿಪಂ ಸಭೆಯಲ್ಲಿ ಸಮಸ್ಯೆಗಳ ಸುರಿಮಳೆ!

ಮಡಿಕೇರಿ: ಮುಚ್ಚುವ ಹಂತ ತಲುಪಿದ ಸರ್ಕಾರಿ ಶಾಲೆ.. ಬೆಳಕಿಲ್ಲದೆ, ಹೊದಿಕೆಯಿಲ್ಲದೆ ಚಳಿಯಲ್ಲೇ ಬದುಕುವ ಹಾಡಿವಾಸಿಗಳು.. ಅಂಗನವಾಡಿಗೆ ಕಳಪೆ ಪದಾರ್ಥ ಸರಬರಾಜು.. ಕಾಡಾನೆ ಹಾವಳಿ.. ಇಂತಹ ಹತ್ತಾರು ಸಮಸ್ಯೆಗಳ ಸುರಿಮಳೆ ಮಡಿಕೇರಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ  ಜಿ.ಪಂ.ಅಧ್ಯಕ್ಷ ಬಿ.ಎ. ಹರೀಶ್ ಅಧ್ಯಕ್ಷತೆಯಲ್ಲಿ ನಡೆದ ಜಿ.ಪಂ.ಸಾಮಾನ್ಯ ಸಭೆಯಲ್ಲಿ ಕಂಡುಬಂತು.

ಜಿಲ್ಲೆಯ ನಾಗರಹೊಳೆ ವ್ಯಾಪ್ತಿಯ ಗೋಣಿ ಮರೂರು ಹಾಡಿಯ ಶಾಲೆಯಲ್ಲಿ 9 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಈ ಶಾಲೆಯನ್ನು ಮುಚ್ಚಲು ಮುಂದಾಗಿದ್ದಾರೆ. ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಜಿ.ಪಂ.ಸದಸ್ಯರಾದ ಬಾನಂಡ ಪ್ರಥ್ಯು ಹೇಳಿದರೆ, ಸದಸ್ಯರಾದ ಸಿ.ಕೆ.ಬೋಪಣ್ಣ ಅವರು ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ವಿಪರೀತ ಚಳಿ ಇದೆ. ಹಾಡಿಯ ಜನರು ಗುಡಿಸಿಲಿನಲ್ಲಿ ಬದುಕುತ್ತಿದ್ದಾರೆ. ಇವರಿಗೆ ಕೂಡಲೇ ಟಾರ್ಪಲ್ ವಿತರಣೆ ಮಾಡಬೇಕೆಂದರು. ಸರಿತಾ ಪೂಣಚ್ಚ ಅವರು ಸಿದ್ದಾಪುರ ಜಿ.ಪಂ.ವ್ಯಾಪ್ತಿಯ ಅವರೆಗುಂದ ಹಾಡಿಯ ಜನರು ಕತ್ತಲೆಯಲ್ಲಿ ಬದುಕು ನಡೆಸುತ್ತಿದ್ದಾರೆ. ಆದ್ದರಿಂದ ಕೂಡಲೇ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಕೆ.ವಿಜುಸುಬ್ರಮಣಿ ಅವರು ಮಾತನಾಡಿ ಜಿಲ್ಲೆಯಲ್ಲಿನ ಅಂಗನವಾಡಿಗಳಿಗೆ ಗುಣಮಟ್ಟದ ಹಾಲು ಮತ್ತು ಆಹಾರ ಪೂರೈಕೆ ಮಾಡಬೇಕು. ಮಳೆ, ಚಳಿ ವಾತಾವರಣದಲ್ಲಿ ಆಹಾರ ಪದಾರ್ಥಗಳು ಕೆಡುವ ಸಾಧ್ಯತೆ ಹೆಚ್ಚಿದೆ. ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ ಎಂದರು.

ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮೂಕೊಂಡ ಪಿ.ಸುಬ್ರಮಣಿ ಅವರು ಮಾತನಾಡಿ ಮಳೆಗಾಲ ಆರಂಭವಾಗಿದ್ದು, ತಿತಿಮತಿ, ಬಾಳೆಲೆ, ಕರಿಕೆ ಇತರೆ ಪ್ರದೇಶಗಳಲ್ಲಿ ಮಲೇರಿಯಾ, ಡೆಂಗ್ಯೂ, ಚಿಕೂನ್ಗುನ್ಯಾ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದ್ದು, ಇದನ್ನು ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.

ಪುಟ್ಟರಾಜು ಅವರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ಸಂಬಂಧಿಸಿದಂತೆ ಆಯಾಯ ಪ್ರದೇಶದ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದರೆ ಒಳ್ಳೆಯದು. ಇದರಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲವಾಗಲಿದೆ. ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್ ಮಾತನಾಡಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದರು. ಎ.ಭವ್ಯ ಅವರು ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಗಾಳಿಯಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುತ್ತಿದ್ದು, ಈ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು.

ಬಾನಂಡ ಪ್ರಥ್ಯು ಮಾತನಾಡಿ ಜಿಲ್ಲೆಯ ಅರಣ್ಯ ದಂಚಿನ ಹಾಡಿಯ ಮಕ್ಕಳು ಕಾಡಾನೆ ಹಾವಳಿಯಿಂದ ಶಾಲೆಗೆ ತೆರಳಲು ಕಷ್ಟವಾಗುತ್ತದೆ. ಆದ್ದರಿಂದ ಅರಣ್ಯ ಇಲಾಖೆ ವತಿಯಿಂದ ಆದಿವಾಸಿ ಮಕ್ಕಳು ಶಾಲೆಗೆ ತೆರಳುವಂತಾಗಲು ಬಸ್ ವ್ಯವಸ್ಥೆ ಮಾಡಬೇಕು ಎಂದರು. ಸದಸ್ಯರ ಸಮಸ್ಯೆ ಆಲಿಸಿ ಅಧ್ಯಕ್ಷರು ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

See also  ಹುತಾತ್ಮ ಯೋಧರಿಗಾಗಿ ಕಂಬನಿ ಮಿಡಿದ ಮಡಿಕೇರಿ ಜನತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು