ಮಂಡ್ಯ: ದೇವಾಲಯಗಳ ಹುಂಡಿಗಳಿಗೆ ಕನ್ನ ಹಾಕುವ ಕಳ್ಳರ ಸಂಖ್ಯೆ ಹೆಚ್ಚಾಗುತ್ತಿದ್ದು ಮಂಡ್ಯ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಆಗಾಗ್ಗೆ ದೇವಾಲಯಗಳ ಹುಂಡಿಗಳನ್ನು ಒಡೆದ ಕಾಣಿಕೆ ಹಣವನ್ನು ದೋಚುತ್ತಿರುವುದು ಆತಂಕವನ್ನುಂಟು ಮಾಡಿದೆ.
ಶುಕ್ರವಾರ ರಾತ್ರಿ ಪಾಂಡವಪುರ ತಾಲೂಕಿನ ಕೆರೆತೊಣ್ಣೂರು-ಲಕ್ಷ್ಮೀಸಾಗರ ಸಮೀಪವಿರುವ ಶ್ರೀನಿಕುಂಭಿಣಿ(ಕುಂಬಳದೇವಿ) ದೇವಸ್ಥಾನದ ಬಾಗಿಲು ಮುರಿದು ಕಳ್ಳರು ಹುಂಡಿ ಹೊಡೆದು ಹುಂಡಿಯಲ್ಲಿದ್ದ ಲಕ್ಷಾಂತರ ನಗದು ಹಣ ಹಾಗೂ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾರೆ. ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ದೇವಸ್ಥಾನದ ಒಳಗಿದ್ದ ಎರಡು ಹುಂಡಿಯನ್ನು ಒಡೆದು ಅದರಲಿದ್ದ ಹಣ ಹಾಗೂ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಶನಿವಾರ ಬೆಳಿಗ್ಗೆ ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನು ತೆಗೆಯಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿತ್ತು. ಆದರೆ ಶನಿವಾರ ಬೆಳಿಗ್ಗೆ ಜಮೀನುಗಳಿಗೆ ಆಗಮಿಸಿದ ಗ್ರಾಮಸ್ಥರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ವಿಷಯ ತಿಳಿದ ಪಟ್ಟಣದ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕಾಗಿಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪಾಂಡವಪುರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.