News Kannada
Saturday, October 01 2022

ಕರ್ನಾಟಕ

ಅಧಿಕಾರಿಗಳು ಜನಪರವಾಗಿ ಕರ್ತವ್ಯ ನಿರ್ವಹಿಸುವಂತೆ ಒತ್ತಾಯಿಸಿ ಪ್ರತಿಭಟನೆ - 1 min read

Photo Credit :

ಅಧಿಕಾರಿಗಳು ಜನಪರವಾಗಿ ಕರ್ತವ್ಯ ನಿರ್ವಹಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮೂಡಿಗೆರೆ: ತಾಲೂಕು ಕಚೇರಿಯಲ್ಲಿ ರೈತರ ಮತ್ತು ಜನಸಾಮಾನ್ಯರ ಯಾವ ಕೆಲಸವೂ ಆಗುತ್ತಿಲ್ಲ. ಅಧಿಕಾರಿಗಳು ಸಂಪೂರ್ಣವಾಗಿ ನಿಷ್ಕ್ರಿಯರಾಗಿದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಂಜುನಾಥ್ಗೌಡ ಆರೋಪಿಸಿದರು.

ತಾಲೂಕು ಕಚೇರಿ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಒತ್ತಾಯಿಸಿ ತಾಲೂಕು ಕಚೇರಿ ಎದುರು ರೈತ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಸರಕಾರ ಕಚೇರಿ ಕಾರ್ಯವಿಧಾನ ಕೈಪಿಡಿ 2005ರನ್ನು ರಚಿಸಿ ಕಚೇರಿಯಲ್ಲಿ ಅಧಿಕಾರಿಗಳು ಯಾವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ರೂಪಿಸಿದೆ. ವಿಷಯ ನಿರ್ವಾಹಕರು ಮತ್ತು ಆದೇಶ ಮಾಡುವ ಅಧಿಕಾರಿಗಳು 15 ದಿನಗಳ ಮೇಲೆ ಕಡತವನ್ನು ಇಟ್ಟುಕೊಳ್ಳಬಾರದೆಂಬ ನಿಯಮವಿದೆ. ಆದರೆ ಇಲ್ಲಿ ಅಧಿಕಾರಿಗಳದ್ದೇ ಕಾನೂನಾಗಿಬಿಟ್ಟಿದೆ. ಇಲ್ಲಿ ಹೇಳುವವರಿಲ್ಲ ಕೇಳುವವರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಅತೀ ಗಂಭೀರ ಸಮಸ್ಯೆಗಳಾದ ಶಾಲಾವನ, ಒತ್ತುವರಿ, ದಾರಿ ರಸ್ತೆ ಒತ್ತುವರಿ ಸಮಸ್ಯೆಗಳನ್ನು ತಾಲೂಕು ಕಚೇರಿಯಲ್ಲಿ ಕಡತಗಳೆ ಇಲ್ಲವೆಂದು ಸಮಸ್ಯೆ ಬಗೆಹರಿಸದೇ ವಿಳಂಬ ಮಾಡುತ್ತಿದ್ದಾರೆ. ಬಡವನದಿಣ್ಣೆ ಹರಿಜನರ ಮಶಾಣ ಒತ್ತುವರಿಯಾಗಿದೆ ಅದನ್ನು ಕೂಡಲೇ ಬಿಡಿಸಿಕೊಡಬೇಕು ಎಂದ ಅವರು, ರೈತರ ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವ ಕೆಲಸವನ್ನು ಅಧಿಕಾರಿಗಳು ಮಾಡದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

See also  ಚಿರತೆ ದಾಳಿ: ಮಹಿಳೆಗೆ ಗಂಭೀರ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು