News Kannada
Monday, November 28 2022

ಕರ್ನಾಟಕ

ತಮಿಳುನಾಡಿಗೆ ನೀರು: ಮಂಡ್ಯದಲ್ಲಿ ಮುಂದುವರೆದ ಪ್ರತಿಭಟನೆ - 1 min read

Photo Credit :

ತಮಿಳುನಾಡಿಗೆ ನೀರು: ಮಂಡ್ಯದಲ್ಲಿ ಮುಂದುವರೆದ ಪ್ರತಿಭಟನೆ

ಮಂಡ್ಯ: ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಬಿಡಲಾಗುತ್ತಿರುವ ಕಾವೇರಿ ನೀರು ನಿಲ್ಲಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಇದರೊಂದಿಗೆ  ಶೀಘ್ರವೇ ಮೈಷುಗರ್ ಹಾಗೂ ಸಹ ವಿದ್ಯುತ್ ಘಟಕ ಆರಂಭಿಸಬೇಕು. ವಿಶ್ವೇಶ್ವರಯ್ಯ ನಾಲೆ ಸೇರಿದಂತೆ ಎಲ್ಲ  ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಅಧ್ಯಕ್ಷ ಬೋರಾಪುರ ಶಂಕರೇಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ನಂತರ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಆಗಮಿಸಿದ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿ, ಸರ್ಕಾರ, ನೀರಾವರಿ ಇಲಾಖೆ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರಲ್ಲದೆ, ಕಳೆದ ಎರಡು ವರ್ಷಗಳಿಂದಲೂ ಸ್ಥಗಿತಗೊಂಡಿದ್ದ ಮೈಷುಗರ್ ಕಾರ್ಖಾನೆಯನ್ನು ಶೀಘ್ರ ಆರಂಭಿಸಿ ಕಬ್ಬು ಅರೆಯುವ ಆರಂಭಿಸಬೇಕು. ಸಹ ವಿದ್ಯುತ್ ಘಟಕ ಆರಂಭಿಸುವಂತೆ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಮೂರು ವರ್ಷಗಳಿಂದಲೂ ಕೃಷಿ ಚಟುವಟಿ ಮಾಡದೆ ರೈತರು ಕಂಗಾಲಾಗಿದ್ದಾರೆ. ಆಹಾರ ಉತ್ಪಾದನೆ ಸ್ಥಗಿತಗೊಂಡಿದೆ. ಕೃಷಿ ಚಟುವಟಿಕೆಗಳನ್ನು ಆರಂಭಿಸಲು ನಾಲೆಯಲ್ಲಿ ನೀರು ಹರಿಸುವಂತೆ ಆಗ್ರಹಿಸಿದರು. ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದಲೂ ಬರದ ತೀವ್ರತೆ ಹೆಚ್ಚಾಗಿದೆ. ಎಲ್ಲ ಕೆರೆ-ಕಟ್ಟೆಗಳು ಒಣಗಿ ನಿಂತಿವೆ. ಬೋರ್ವೆಲ್ ಗಳಲ್ಲೂ ನೀರಿಲ್ಲದೆ ಅಂತರ್ಜಲ ಸಂಪೂರ್ಣ ಕುಸಿದುಹೋಗಿದೆ. ಜನ ಜಾನುವಾರುಗಳ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ ಇಂತಹ ಸಂದರ್ಭದಲ್ಲಿ ಕಾವೇರಿ ಜಲಾಶಯಗಳಿಗೆ ಹರಿದುಬರುತ್ತಿರುವ ಸ್ವಲ್ಪ ಪ್ರಮಾಣದ ನೀರನ್ನು ಉಳಿಸಿಕೊಂಡು ಕೆರೆ ಕಟ್ಟೆಗಳನ್ನು ತುಂಬಿಸುವುದನ್ನು ಬಿಟ್ಟು ತಮಿಳುನಾಡಿಗೆ ಹರಿಸಲಾಗುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಕೂಡಲೇ ನೀರನ್ನು ನಿಲ್ಲಿಸುವಂತೆ ಆಗ್ರಹಿಸಿದರು.

ರೈತ ಮುಖಂಡರಾದ ಸುಧೀರ್ಕುಮಾರ್, ಚಂದ್ರಶೇಖರ್, ಬಸವರಾಜು, ಹೆಮ್ಮಿಗೆ ಚಂದ್ರಶೇಖರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

See also  ಮುಂದಿನ ಪೀಳಿಗೆ ನೆಮ್ಮದಿಯಿಂದ ಬದುಕಬೇಕಾದರೆ ಇಂದಿನ ಹಿರಿಯರು ಬದಲಾಗಬೇಕು: ಅಣ್ಣಾಮಲೈ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು