News Kannada
Friday, December 02 2022

ಕರ್ನಾಟಕ

ನಿವೇಶನ ಮತ್ತು ವಸತಿ ಸೌಲಭ್ಯ: ಹೆಸರು ನೀಡಿದವರು ಕೇವಲ 300, ಅರ್ಹರು ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಮನವಿ

Photo Credit :

ನಿವೇಶನ ಮತ್ತು ವಸತಿ ಸೌಲಭ್ಯ: ಹೆಸರು ನೀಡಿದವರು ಕೇವಲ 300, ಅರ್ಹರು ಅರ್ಜಿ ಸಲ್ಲಿಸಲು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಮನವಿ

ಮಡಿಕೇರಿ: ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ನಿವೇಶನ ಹಾಗೂ ವಸತಿ ರಹಿತರು ಹೆಸರು ನೋಂದಾಯಿಸಿಕೊಳ್ಳುವಂತೆ ಈಗಾಗಲೇ ಪ್ರಕಟಣೆ ಹೊರಡಿಸಲಾಗಿತ್ತು, ಆದರೆ ಕೇವಲ 300 ಮಂದಿ ಮಾತ್ರ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಡಳಿತವು ನಿವೇಶನ ರಹಿತರಿಗೆ ಒಂದು ಸಾವಿರ ನಿವೇಶನ ಒದಗಿಸಲು ಮುಂದಾಗಿದೆ. ಆದರೆ ನಿವೇಶನ ಹಾಗೂ ವಸತಿ ರಹಿತರು ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದ್ದರೂ ಮುಂದೆ ಬರುತ್ತಿಲ್ಲ. ಈ ರೀತಿ ಆದರೆ ಹೇಗೆ ಎಂದು ಜಿಲ್ಲಾಧಿಕಾರಿ ಪ್ರಶ್ನಿಸಿದರು.
ನಿವೇಶನ ಹಾಗೂ ವಸತಿ ರಹಿತರು ತಮ್ಮ ಹೆಸರು, ವಿಳಾಸ, ಪಡಿತರ ಚೀಟಿ ಇತರ ಯಾವುದಾದರೂ ಜಿಲ್ಲೆಯಲ್ಲಿ ವಾಸದ ದೃಡೀಕರಣದ ದಾಖಲೆಯ ಪ್ರತಿ ನೀಡಬೇಕಿದೆ. ಅದನ್ನೂ ಒದಗಿಸಲು ಸಾಧ್ಯವಿಲ್ಲದಿದ್ದರೆ ಹೇಗೆ ಎಂದು ಬೇಸರ ವ್ಯಕ್ತಪಡಿಸಿದರು. ಮುಂದಿನ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲೆಯ ಬಡವರಿಗೆ 94ಸಿ ನಡಿ ಒಂದು ಸಾವಿರಕ್ಕೂ ಹೆಚ್ಚು ಹಕ್ಕುಪತ್ರ ವಿತರಿಸಲು ಸಿದ್ಧತೆಗಳು ನಡೆದಿವೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಇತರೆ ಹಿಂದುಳಿದ ಬಡವರಿಗೆ ನಿವೇಶನ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಜಮೀನು ಗುರುತಿಸಲಾಗುತ್ತದೆ. ಮುಂದಿನ ಪೀಳಿಗೆಯಾದರೂ ಸುಧಾರಣೆ ಕಾಣಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಪರಿಶಿಷ್ಟರ ಅನುದಾನ ಸದ್ಬಳಕೆ ಮಾಡಿ: ಲೋಕೋಪಯೋಗಿ ಇಲಾಖೆ ವತಿಯಿಂದ 2016-17ನೇ ಸಾಲಿನಲ್ಲಿ ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನದಲ್ಲಿ ಯಾವ ಯಾವ ಪರಿಶಿಷ್ಟ ಕಾಲೋನಿಯಲ್ಲಿ ರಸ್ತೆ, ಚರಂಡಿ ನಿರ್ಮಾಣ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಪಡೆದುಕೊಳ್ಳುವಂತೆ ಸಮಾಜ ಕಲ್ಯಾಣಾಧಿಕಾರಿಯವರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಡಾ.ಅಂಬೇಡ್ಕರ್ ಭವನ ನಿರ್ಮಾಣ:

ಪ್ರತಿ ಹೋಬಳಿ ಕೇಂದ್ರಗಳಲ್ಲಿ ಡಾ.ಅಂಬೇಡ್ಕರ್ ಭವನ ನಿರ್ಮಾಣ ಸಂಬಂಧ ಜಾಗ ಬೇಕಿದ್ದು, ಈ ಸಂಬಂಧ ಕಂದಾಯಾಧಿಕಾರಿಗಳಿಗೆ ಕನಿಷ್ಠ 25 ರಿಂದ 50 ಸೆಂಟ್ ಜಾಗವನ್ನು ಗುರುತಿಸಲು ಸೂಚನೆ ನೀಡಿದ್ದೇನೆ. ಈ ಬಗ್ಗೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಹಾಗೆಯೇ ಆರ್ಜಿ ಗ್ರಾಮದಲ್ಲಿ ಸ್ಮಶಾನ ಭೂಮಿ ಗುರುತಿಸಿದರೂ ಇನ್ನೂ ಆರ್ಟಿಸಿ ಪಡೆಯದಿದ್ದರೆ ಹೇಗೆ ಎಂದು ಜಿಲ್ಲಾಧಿಕಾರಿ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳನ್ನು ಪ್ರಶ್ನಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ಭೂಮಿ ಸೇರಿದಂತೆ ಇತರೆ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಸಿಕೊಳ್ಳಲು ಸಮಾಜ ಕಲ್ಯಾಣಾಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಸಲಹೆ ಮಾಡಿದರು.

See also  ಆದಿವಾಸಿಗಳು ಅರಣ್ಯದಂಚಿಗೆ ಬಂದರೆ ಮೂಲಭೂತ ಸೌಲಭ್ಯ : ಅಧಿಕಾರಿಗಳ ಭರವಸೆ

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಅವರು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು ನಿವೇಶನ, ಸ್ಮಶಾನ ಭೂಮಿ ಮತ್ತಿತರವನ್ನು ಒದಗಿಸಲು ಕಂದಾಯಾಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಬೇಕು ಎಂದು ಹೇಳಿದರು.

ಸಮಿತಿ ಸದಸ್ಯರಾದ ಮುತ್ತಪ್ಪ, ಜೆ.ಪಿ.ರಾಜು ಪಳನಿ ಪ್ರಕಾಶ್, ಎಂ.ಬಿ.ಜೋಯಪ್ಪ, ಸುಕುಮಾರ್ ಅವರು ಮಾತನಾಡಿ ಸರ್ಕಾರ ಪರಿಶಿಷ್ಟರಿಗಾಗಿ ಮೀಸಲಿರಿಸಿರುವ ಅನುದಾನವನ್ನು ಪರಿಣಾಮಕಾರಿಯಾಗಿ ತಲುಪಿಸಬೇಕು ಎಂದರು.

ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಅವರು ಹಾರಂಗಿ ಹಿನ್ನೀರಿನ ಪ್ರದೇಶದಲ್ಲಿ ಹಿಂದುಳಿದ ಸಮುದಾಯಕ್ಕೆ ಸೇರಿದ ಕುಟುಂಬಗಳು ಟೆಂಟ್ನಲ್ಲಿ ವಾಸ ಮಾಡುತ್ತಿದ್ದಾರೆ. ಇವರಿಗೆ ನಿವೇಶನ ಒದಗಿಸುವಂತೆ ಜಿಲ್ಲಾಧಿಕಾರಿ ಅವರಲ್ಲಿ ಮನವಿ ಮಾಡಿದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಯಾದೇವಿ ಗಲಗಲಿ, ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ತಾ.ಪಂ.ಇಒ ಪಡ್ನೇಕರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ರಾಮೇಗೌಡ, ಚನ್ನಬಸವಯ್ಯ, ಮಂಜುನಾಥ, ಜಗದೀಶ್ ಇತರರು ಹಾಜರಿದ್ದರು. ಫೋಟೋ :: ಡಿಸಿ ಮೀಟಿಂಗ್

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು