News Kannada
Wednesday, November 30 2022

ಕರ್ನಾಟಕ

ಚಾಮರಾಜನಗರದಲ್ಲಿ ಬೀಟ್ ವ್ಯವಸ್ಥೆ: ಎಸ್ಪಿ ಸಭೆ - 1 min read

Photo Credit :

ಚಾಮರಾಜನಗರದಲ್ಲಿ ಬೀಟ್ ವ್ಯವಸ್ಥೆ: ಎಸ್ಪಿ ಸಭೆ

ಚಾಮರಾಜನಗರ: ಪಟ್ಟಣದ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳು, ಕಳ್ಳತನ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಪೊಲೀಸ್ ಇಲಾಖೆಯಿಂದ ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಾರಿ ಮಾಡಿದ್ದು, ನಾಗರಿಕರು ಹೆಚ್ಚಿನ ರೀತಿಯಲ್ಲಿ ಪೊಲೀಸರಿಗೆ ಸ್ಪಂದನೆ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.

ನಗರದ ವರ್ತಕರ ಭವನದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪಟ್ಟಣ 31 ವಾರ್ಡುಗಳ ನಾಗರಿಕರು ಹಾಗೂ ಸುಧಾರಿತ ಬೀಟ್ ವ್ಯವಸ್ಥೆಯ ಕುರಿತು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾರ್ಯ ಯೋಜನೆಗಳನ್ನು ರೂಪಿಸಲಾಗಿದೆ. ಇದರ ಭಾಗವಾಗಿ ಪಟ್ಟಣದ 31 ವಾರ್ಡುಗಳಲ್ಲಿ ಪೊಲೀಸ್ ಗಸ್ತನ್ನು ಹೆಚ್ಚಿಸಿಕೊಳ್ಳಲಾಗಿದೆ.

56 ಮಂದಿ ಪೊಲೀಸರನ್ನು ಬೀಟ್ ವ್ಯವಸ್ಥೆಗೆ ನೇಮಕ ಮಾಡಿ, ಈಗಾಗಲೇ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಇದರ ಬಗ್ಗೆ ನಿಮ್ಮ ಸಲಹೆ ಸೂಚನೆಗಳನ್ನು ನೀಡಬೇಕು. ಜೊತೆಗೆ ವಾರ್ಡುವಾರು 50 ಮಂದಿ ನಾಗರೀಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದರು. ಈಗಾಗಲೇ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲು ನಗರಸಭೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಸಭೆಯಲ್ಲಿ ಅನುಮೋದನೆಯು ದೊರೆತಿದೆ. ನಗರದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳು, ಇಸ್ಪೀಟ್, ಕಳ್ಳತನ ಸೇರಿದಂತೆ ಅನೇಕ ಸಮಾಜಘಾತುಕ ಶಕ್ತಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುವ ಅಕ್ರಮ ಹಾಗೂ ಅನುಮಾನಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿದರೆ, ಘಟನೆಗಳು ನಡೆಯುವ ಮುನ್ನವೇ ಎಚ್ಚೆತ್ತುಕೊಳ್ಳಲು ಸಾಧ್ಯವಾಗುತ್ತದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು.

ಚಾ.ನಗರ ಡಿವೈಎಸ್ಪಿ ಗಂಗಾಧರಸ್ವಾಮಿ ಮಾತನಾಡಿ, ಸುಧಾರಿತ ಪೊಲೀಸ್ ಗಸ್ತು ವ್ಯವಸ್ಥೆ ಬಗ್ಗೆ ಸಾರ್ವಜನಿಕರು ಸಹಭಾಗಿತ್ವ ಮುಖ್ಯವಾಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಶ್ರಮಿಸುತ್ತಿದ್ದಾರೆ. ಇದರ ಬಗ್ಗೆ ಸಾರ್ವಜನಿಕರು ಸಲಹೆಗಳನ್ನು ನೀಡುವಂತೆ ಕೋರಿದರು.

See also  ಗುಂಡ್ಲುಪೇಟೆಯಲ್ಲಿ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರ: ಶ್ರೀನಿವಾಸ್ ಪ್ರಸಾದ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು