News Kannada
Friday, December 02 2022

ಕರ್ನಾಟಕ

ನಾಳೆ ಬಿಟ್ಟಂಗಾಲದಲ್ಲಿ ರಾಜ್ಯ ಮಟ್ಟದ ಜೇಸಿ ಕೆಸರು ಗದ್ದೆ ಕ್ರೀಡೋತ್ಸವ

Photo Credit :

ನಾಳೆ ಬಿಟ್ಟಂಗಾಲದಲ್ಲಿ ರಾಜ್ಯ ಮಟ್ಟದ ಜೇಸಿ ಕೆಸರು ಗದ್ದೆ ಕ್ರೀಡೋತ್ಸವ

ಮಡಿಕೇರಿ: ಜೆ.ಸಿ.ಐ ಪೊನ್ನಂಪೇಟೆ ನಿಸರ್ಗ ಘಟಕದ ಆಶ್ರಯದಲ್ಲಿ ಪ್ರಾಯೋಜಕರ ನೆರವಿನಲ್ಲಿ ಇದೇ ತಿಂಗಳ 30ರಂದು ಭಾನುವಾರ(ನಾಳೆ) ಬಿಟ್ಟಂಗಾಲದಲ್ಲಿ ನಡೆಯಲಿರುವ 5ನೇ ವರ್ಷದ ರಾಜ್ಯ ಮಟ್ಟದ ನಿಸರ್ಗ ಜೇಸಿ ಕೆಸರು ಗದ್ದೆ ಕ್ರೀಡೋತ್ಸವ 2017ಕ್ಕೆ ಸಿದ್ದತೆಗಳು ಭರದಿಂದ ಸಾಗುತ್ತಿದೆ.

ಕ್ರೀಡೋತ್ಸವ ಆಯೋಜನೆಗಾಗಿ ಕಳೆದ 1 ತಿಂಗಳಿನಿಂದ ಕಾರ್ಯ ನಿರ್ವಹಿಸುತ್ತಿರುವ ಪೊನ್ನಂಪೇಟೆಯ ನಿಸರ್ಗ ಜೇಸಿಸ್ ತಂಡ, ಇದೀಗ ಕ್ರೀಡಾಕೂಟದ ಅಂತಿಮ ಹಂತದ ಸಿದ್ದತೆಯಲ್ಲಿ ತೊಡಗಿದೆ ಎಂದು ಜೆ.ಸಿ.ಐ ಪೊನ್ನಂಪೇಟೆ ನಿಸರ್ಗ ಘಟಕದ ಅಧ್ಯಕ್ಷರಾದ ಎ.ಎಸ್.ಟಾಟು ಮೊಣ್ಣಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕ್ರೀಡೋತ್ಸವ ಜರುಗುವ ವಿರಾಜಪೇಟೆ-ಗೋಣಿಕೊಪ್ಪಲು ಮುಖ್ಯ ರಸ್ತೆ ಬದಿಯಲ್ಲಿರುವ ಬಿಟ್ಟಂಗಾಲದ ನಿವೃತ ಮೇ.ಜ. ಕುಪ್ಪಂಡ ಪಿ.ನಂಜಪ್ಪ ಅವರ ಭತ್ತದ ಗದ್ದೆಯನ್ನು ಇದೀಗ ಸಜ್ಜುಗೊಳಿಸಲಾಗಿದ್ದು, ಅಂತಿಮ ಹಂತದ ಸಿದ್ದತಾ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಕಳೆದ 4 ವರ್ಷಗಳಿಂದ ಘಟಕದ ವತಿಯಿಂದ ಆಯೋಜಿಸುತ್ತಿರುವ ಕೆಸರುಗದ್ದೆ ಕ್ರೀಡೋತ್ಸವ ಪೂರ್ಣವಾಗಿ ಪ್ರಾಯೋಜಕ ದಾನಿಗಳ ನೆರವಿನಿಂದಲೆ ನಡೆಯುತ್ತಿದ್ದು, ಗ್ರಾಮೀಣ ಕ್ರೀಡೆಗೆ ಪ್ರೋತ್ಸಾಹ ನೀಡುವ ಹಿನ್ನಲೆಯಲ್ಲಿ ಆಯೋಜಿಸಲಾಗುವ ಈ ಕೆಸರುಗದ್ದೆ ಕ್ರೀಡಾಕೂಟಕ್ಕೆ ಪ್ರಾಯೋಜಕರು ಘಟಕದೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದು ಎ.ಎಸ್.ಟಾಟು ಮೊಣ್ಣಪ್ಪ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಕ್ರೀಡೋತ್ಸವದ ಕುರಿತು ಹೇಳಿಕೆ ನೀಡಿರುವ ಯೋಜನಾ ನಿರ್ದೇಶಕರಾದ ಕುಪ್ಪಂಡ ದಿಲನ್ ಬೋಪಣ್ಣ ಅವರು, ಕೆಸರು ಗದ್ದೆ ಪುಟ್ಬಾಲ್ ಪಂದ್ಯಾವಳಿಗೆ ಗರಿಷ್ಠ 48 ತಂಡಗಳಿಗೆ ಮಾತ್ರ ಅವಕಾಶವಿರುತ್ತದೆ. ಮೊದಲು ಹೆಸರು ನೋಂದಾಯಿಸಿಕೊಳ್ಳುವ 48 ತಂಡಗಳಿಗೆ ಆದ್ಯತೆ ನೀಡಲಾಗುವುದು. ಪಾಲ್ಗೊಳ್ಳುವ ಪುಟ್ಬಾಲ್ ತಂಡಗಳು ಜು. 30ರಂದು ಬೆಳಿಗ್ಗೆ 9 ಗಂಟೆಯ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಪುಟ್ಬಾಲ್ ವಿನ್ನರ್ಸ್ ತಂಡಕ್ಕೆ ರೂ.15,000 ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ, ರನ್ನರ್ಸ್ ತಂಡಕ್ಕೆ ರೂ.10,000 ನಗದು ಜೊತೆಗೆ ಟ್ರೋಫಿ ನೀಡಲಾಗುವುದು. ಪುಟ್ಬಾಲ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟಗಾರರೊಬ್ಬರನ್ನು ಗುರುತಿಸಿ ಅವರಿಗೆ ವಿಶೇಷ ಟ್ರೋಫಿಯನ್ನು ನೀಡಿ ಗೌರವಿಸಲಾಗುವುದು. ಅಲ್ಲದೇ ವಿನ್ನರ್ಸ್ ಮತ್ತು ರನ್ನರ್ಸ್ ತಂಡದ ಎಲ್ಲ ಆಟಗಾರರಿಗೂ ವೈಯಕ್ತಿಕ ಟ್ರೋಫಿ ನೀಡಲಾಗುವುದು.

ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯ ವಿನ್ನರ್ಸ್ ತಂಡಕ್ಕೆ ಆಕರ್ಷಕ ಪಾರಿತೋಷಕದೊಂದಿಗೆ ರೂ.15.000ನಗದು ಬಹುಮಾನ, ರನ್ನರ್ಸ್ ತಂಡಕ್ಕೆ ಪಾರಿತೋಷಕದೊಂದಿಗೆ ರೂ. 10,000 ನಗದು ಬಹುಮಾನ ನೀಡಲಾಗುವುದು. ಪಾಲ್ಗೊಳ್ಳುವ ತಂಡಗಳು ಬೆಳಗ್ಗೆ 9.30ರ ಒಳಗಾಗಿ ಸ್ಥಳದಲ್ಲಿ ಹಾಜರಿರಬೇಕಾಗಿರುವುದು ಕಡ್ಡಾಯವಾಗಿದೆ. ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯ ವಿನ್ನರ್ಸ್ ಮತ್ತು ರನ್ನರ್ಸ್ ತಂಡಕ್ಕೆ ನಗದು ಬಹುಮಾನದೊಂದಿಗೆ ಆಕರ್ಷಕ ಪಾರಿತೋಷಕ ನೀಡಲಾಗುವುದು. ಪುಟ್ಬಾಲ್ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳಿಗೆ ತಲಾ ರೂ.500ನ್ನು ನೋಂದಣಿ ಶುಲ್ಕವಾಗಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಗ್ಗ ಜಗ್ಗಾಟ ಸ್ಪರ್ಧೆಗೆ ರಾಜ್ಯ ಕೆಲವು ಪ್ರತಿಷ್ಟಿತ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮಂಡ್ಯ ಮತ್ತು ಕೊಡಗು ಪೊಲೀಸ್ ತಂಡ ಹಗ್ಗಜಗ್ಗಾಟ ಸ್ಪರ್ಧೇಯಲ್ಲಿ ಪಾಲ್ಗೊಳ್ಳುವುದು ಬಹುತೇಕ ಖಚಿತವಾಗಿದೆ. ವಿವಿಧ ವಿಭಾಗದ ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಸ್ಪರ್ಧೆಗಳು ಬೆಳಗ್ಗೆ 10.00 ಗಂಟೆಯ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

See also  ಚಿತ್ರದುರ್ಗಾದಲ್ಲಿ ಮಾನವ ರಹಿತ ಲಘು ವಿಮಾನ ಪತನ

ಕೆಸರು ಗದ್ದೆ ಓಟದ ಸ್ಪರ್ಧೆ ಒಟ್ಟು 8 ವಿಭಾಗಗಳಲ್ಲಿ ನಡೆಯಲಿದೆ. 1ರಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳ ಸಬ್ ಜುನಿಯರ್ ಬಾಲಕ ಬಾಲಕಿಯರ ತಂಡಗಳಿಗೆ, 6ರಿಂದ9ನೇ ತರಗತಿವರೆಗಿನ ವಿದ್ಯಾರ್ಥಿಗಳ ಜುನಿಯರ್ ಬಾಲಕ ಬಾಲಕಿಯರ ತಂಡಗಳಿಗೆ, 10ರಿಂದ ದ್ವಿತೀಯ ಪಿ.ಯು.ಸಿ ತರಗತಿವರೆಗಿನ ವಿದ್ಯಾರ್ಥಿಗಳ ಸಿನಿಯರ್ ಬಾಲಕ ಬಾಲಕಿಯರ ತಂಡಗಳಿಗೆ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಪುರುಷ ಮತ್ತು ಮಹಿಳೆಯರ ಮುಕ್ತ ತಂಡಗಳಿಗೆ ಪ್ರತ್ಯೇಕವಾಗಿ ಓಟದ ಸ್ಪರ್ಧೆ ಆಯೋಜಿಸಲಾಗಿದೆ.

ಎಲ್ಲಾ ವಿಭಾಗದ ವಿಜೇತರಿಗೆ ಪ್ರಥಮ, ದ್ವೀತಿಯ, ಮತ್ತು ತೃತೀಯ ಮಟ್ಟದಲ್ಲಿ ನಗದು ಬಹುಮಾನ, ಪದಕ ಸೇರಿದಂತೆ ಪ್ರಶಸ್ತಿ ಪತ್ರವನ್ನು ನೀಡಲಾಗುವುದು. ಪುರುಷ ಮತ್ತು ಮಹಿಳೆಯರ ಮುಕ್ತ ಓಟದ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ, ಪದಕ ಮತ್ತು ಪ್ರಶಸ್ತಿ ಪತ್ರದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ದಿಲನ್ ಬೋಪಣ್ಣ ಮಾಹಿತಿ ನೀಡಿದ್ದಾರೆ. 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು