News Kannada
Friday, December 09 2022

ಕರ್ನಾಟಕ

ಬ್ಯಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Photo Credit :

ಬ್ಯಾರಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಡಿಕೇರಿ: ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ಬ್ಯಾರಿ ಸಮುದಾಯದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಪ್ರದಾನ ಮಾಡುವ ಸಮಾರಂಭ ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ ಆಶ್ರಯದಲ್ಲಿ ನಡೆಯಿತು.

ನಗರದ ಕ್ರಸೆಂಟ್ ಶಾಲಾ ಸಭಾಂಗಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಅರೆಭಾಷೆ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಉಮರಬ್ಬ, ಶೈಕ್ಷಣಿಕ ಸಾಧನೆಯ ಮೂಲಕ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದರು.

ವಿದ್ಯಾರ್ಥಿ ಜೀವನ ಎಂಬುವುದು ಅತಿ ಅಮೂಲ್ಯವಾದ ಘಟ್ಟವಾಗಿದ್ದು, ಪೋಷಕರು ಹಾಗೂ ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಲು ನಿಸ್ವಾರ್ಥ ಸೇವೆಯನ್ನು ಮಾಡುತ್ತಾರೆ. ಸರ್ವ ತ್ಯಾಗಗಳ ಮೂಲಕ ಶ್ರಮ ಪಡುತ್ತಾರೆ. ಪರಿಸ್ಥಿತಿ ಹೀಗಿರುವಾಗ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳದೆ ಪೋಷಕರ ಕನಸನ್ನು ನನಸು ಮಾಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕೆಂದು ಉಮರಬ್ಬ ಸಲಹೆ ನೀಡಿದರು. ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುವ ಪ್ರಯತ್ನವನ್ನು ಕೂಡ ಮಾಡಬೇಕೆಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಸುರೇಶ್, ರಾಜ್ಯ ಸರಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಮುಂದೆ ಬರುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಾ ಪುರಸ್ಕಾರಗಳ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕೆಂದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡಗು ಬ್ಯಾರೀಸ್ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷರಾದ ಶಂಷುದ್ದೀನ್ ವಿದ್ಯಾಥರ್ಿಗಳಿಗೆ ಸ್ಫೂರ್ತಿ ತುಂಬಿದರು.

ಮಂಗಳೂರಿನ ಉದ್ಯಮಿ ಹಾಗೂ ದಾನಿ ಬದ್ರುದ್ಧೀನ್, ನಿವೃತ್ತ ಅಧಿಕಾರಿ ಅಮೀರುದ್ಧಿನ್, ಕ್ರಸೆಂಟ್ ಶಾಲೆಯ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೊಹಮ್ಮದ್ ಹನೀಫ್, ಟ್ರಸ್ಟ್ನ ಉಪಾಧ್ಯಕ್ಷ ಎಂ.ಬಿ.ನಾಸಿರ್ ಉಪಸ್ಥಿತರಿದ್ದು ಮಾತನಾಡಿದರು.

See also  ಮಡಿಕೇರಿಯಲ್ಲಿ ಸೇನಾ ಭರ್ತಿ ರ್ಯಾಲಿಗೆ ಚಾಲನೆ : ನೂರಾರು ಯುವಕರು ಭಾಗಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು