News Kannada
Wednesday, November 30 2022

ಕರ್ನಾಟಕ

ಕೆ.ಆರ್.ಪೇಟೆಯಲ್ಲಿ ಕಾರ್ಮಿಕ ನೇಣಿಗೆ ಶರಣು - 1 min read

Photo Credit :

ಕೆ.ಆರ್.ಪೇಟೆಯಲ್ಲಿ ಕಾರ್ಮಿಕ ನೇಣಿಗೆ ಶರಣು

ಕೆ.ಆರ್.ಪೇಟೆ: ಇಟ್ಟಿಗೆ ಕಾರ್ಖನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಮಾತ್ರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು, ತನಿಖೆಗೆ ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹುಸ್ಕೂರು ಗ್ರಾಮದ ಸಂಜು (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ಕೆಲಸದ ನಿಮಿತ್ತ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಿ.ಬಾಚಹಳ್ಳಿ ಗ್ರಾಮದಲ್ಲಿ ಇದ್ದನು.

ಇದೇ ಗ್ರಾಮದಲ್ಲಿ ಎರಡು ವರ್ಷಗಳಿಂದ ಆತ ಇಟ್ಟಿಗೆ ಕಾರ್ಖನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದನು. ವಾರಕ್ಕೋ ತಿಂಗಳಿಗೋ ಮನೆಗೆ ಹೋಗಿ ಬರುತ್ತಿದ್ದನು. ಹೀಗಿರುವಾಗ ಈತ ಇತರರು ಮಲಗಿದ್ದ ಸಂದರ್ಭದಲ್ಲಿ ತನ್ನ ಮಲಗುವ ಕೋಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ನಡುವೆ ಹೆತ್ತವರು ಆತ್ಮಹತ್ಯೆ ಬಗ್ಗೆ ಸಂಶಯ ವ್ಯಕ್ತಪಡಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಪೊಲೀಸರ ತನಿಖೆ ಬಳಿಕ ನೈಜಾಂಶ ಬೆಳಕಿಗೆ ಬರಬೇಕಿದೆ

See also  ಕಡಿದು ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು