News Kannada
Thursday, December 08 2022

ಕರ್ನಾಟಕ

ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

Photo Credit :

ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ಕೆರೆ-ಕಟ್ಟೆಗಳಿಗೆ ನಾಲೆಗಳ ಮೂಲಕ ನೀರು ಹರಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕಾರ್ಯಕರ್ತ ಎಸ್. ಶಿವಕುಮಾರ್ ಆರಾಧ್ಯ ಇತರರು ನಾಲೆಯಲ್ಲಿ ನೀರು ಹರಿಸುವಂತೆ ಒತ್ತಾಯಿಸಿ ಮೈಮೇಲೆ ಸಗಣಿ ಸುರಿದುಕೊಂಡು ಪ್ರತಿಭಟನೆ ನಡೆಸಿದರು.

ಕನ್ನಂಬಾಡಿ ಅಣೆಕಟ್ಟೆಯಲ್ಲಿ 90 ಅಡಿ ನೀರು ಸಂಗ್ರಹವಾಗಿದ್ದರೂ, ಮಂಡ್ಯ ಭಾಗದ ರೈತರಿಗೆ ನೀರು ನೀಡದೆ ಅಪಾರ ಪ್ರಮಾಣದ ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಇದು ಜಿಲ್ಲೆಯ ರೈತರನ್ನು ಆತಂಕಕ್ಕೆ ಎಡೆಮಾಡಿಕೊಟ್ಟಿದೆ ಎಂದು ದೂರಿದರು.

ಜನ ಜಾನುವಾರುಗಳಿಗೆ ನೀರು ಮೇವಿಲ್ಲದೆ ರೈತರು ತಮ್ಮ ಜಾನುವಾರುಗಳನ್ನು ಪುಡಿಗಾಸಿಗೆ ಮಾರುವಂತಹ ಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ರೈತರು ಕೃಷಿ ತೊರೆದು ನಗರಗಳಿಗೆ ವಲಸೆ ಹೋಗುವ ಸ್ಥಿತಿ ನಿಮರ್ಾಣವಾಗಿದೆ. ರೈತರ ಮಕ್ಕಳು ಶಾಲಾ ಕಾಲೇಜುಗಳಲ್ಲಿ ಶುಲ್ಕ ಪಾವತಿ ಮಾಡಲಾಗದೆ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಸ್ಥಗಿತಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಸರ್ಕಾರ ಕೂಡಲೇ ಕನ್ನಂಬಾಡಿ ಕಟ್ಟೆಯಿಂದ ಮಂಡ್ಯ ಜಿಲ್ಲೆಯಲ್ಲಿ ಎಲ್ಲಾ ಕೆರೆ-ಕಟ್ಟೆಗಳನ್ನು ತುಂಬಿಸುವಂತೆ ಒತ್ತಾಯಿಸಿದರು. ಮುಖಂಡರಾದ ಕೆ.ಸಿ.ಪ್ರಸನ್ನಕುಮಾರ್, ಎಚ್.ರಾಜು, ಸಿ.ಟಿ.ಮಂಜುನಾಥ್, ಎಂ.ಸಿ.ಶಿವನಂಜೇಗೌಡ, ಶಿವಣ್ಣ, ಬೋರೇಗೌಡ, ಎಂ.ಕೆ.ಮಂಜುನಾಥ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

See also  ತೆರೆದ ಹಾಸನಾಂಬೆ ಬಾಗಿಲು: ಹರಿದು ಬಂದ ಭಕ್ತ ಸಾಗರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು