News Kannada
Thursday, December 01 2022

ಕರ್ನಾಟಕ

ತುಳು ಅಕಾಡೆಮಿಯಲ್ಲಿ ಸ್ಥಾನ ನೀಡಲು ಒತ್ತಾಯ - 1 min read

Photo Credit :

ತುಳು ಅಕಾಡೆಮಿಯಲ್ಲಿ ಸ್ಥಾನ ನೀಡಲು ಒತ್ತಾಯ

ಮಡಿಕೇರಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಬಲವನ್ನು 12 ರಿಂದ 20ಕ್ಕೆ ಏರಿಕೆ ಮಾಡುವುದರೊಂದಿಗೆ ಕೊಡಗು ಜಿಲ್ಲೆಯ ತುಳು ಭಾಷಿಕರಿಗೂ 5 ಸ್ಥಾನಗಳನ್ನು ಮೀಸಲಿಡಬೇಕೆಂದು ತುಳುವೆರ ಜನಪದ ಕೂಟದ ಜಿಲ್ಲಾ ಘಟಕ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನಪದ ಕೂಟದ ಜಿಲ್ಲಾ ಸಂಚಾಲಕರಾದ ಶ್ರೀಧರ ನೆಲ್ಲಿತ್ತಾಯ, ಕೊಡಗು ಜಿಲ್ಲೆಯಲ್ಲಿ 2 ಲಕ್ಷಕ್ಕು ಅಧಿಕ ಮಂದಿ ತುಳು ಭಾಷಿಕರಿದ್ದು, ಅಕಾಡೆಮಿಯಲ್ಲಿ 5 ಸದಸ್ಯ ಸ್ಥಾನ ನೀಡದಿದ್ದರೂ ಕನಿಷ್ಠ 2 ಸ್ಥಾನವನ್ನಾದರೂ ನೀಡಬೇಕೆಂದು ಒತ್ತಾಯಿಸಿದರು. ಕಳೆದ ಸಾಲಿನಲ್ಲಿ 10 ಸದಸ್ಯ ಬಲವಿದ್ದ ತುಳು ಸಾಹಿತ್ಯ ಅಕಾಡೆಮಿಗೆ ಈ ಬಾರಿ 2 ಸ್ಥಾನವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಆದರೆ, ತುಳು ಭಾಷಿಕರು ರಾಜ್ಯದ ಎಲ್ಲಾ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಸದಸ್ಯ ಬಲವನ್ನು 20ಕ್ಕೆ ಏರಿಕೆ ಮಾಡಬೇಕು. ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ತುಳು ಮಾತನಾಡುವ 15ಕ್ಕೂ ಹೆಚ್ಚು ಜನಾಂಗಗಳಿರುವುದರಿಂದ ಅಕಾಡೆಮಿಯಲ್ಲಿ ಜಿಲ್ಲೆಯವರಿಗೂ ಸ್ಥಾನ ನೀಡಬೇಕೆಂದು ಶ್ರೀಧರ ನೆಲ್ಲಿತ್ತಾಯ ಒತ್ತಾಯಿಸಿದರು.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸಕರ್ಾರದ ಗಮನ ಸೆಳೆಯಬೇಕೆಂದರು. ಆರು ತಿಂಗಳ ಹಿಂದೆಯೇ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ನೀಡುವಂತೆ ಸಕರ್ಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ನಮ್ಮ ಬೇಡಿಕೆಯನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ ಶ್ರೀಧರ ನೆಲ್ಲಿತ್ತಾಯ ಜನಪದ ಕೂಟದ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಇದಕ್ಕೂ ಸರ್ಕಾರ ಸ್ಪಂದಿಸದಿದ್ದಲ್ಲಿ ಕೊಡಗು ಜಿಲ್ಲೆಗೆ ಸೀಮಿತವಾಗಿ ತುಳು ಅಕಾಡೆಮಿಯನ್ನು ಸ್ಥಾಪಿಸುವುದಾಗಿ ತಿಳಿಸಿದರು.

ಒಂದು ವರ್ಷದ ಹಿಂದೆ ರಚನೆಗೊಂಡ ತುಳುವೆರ ಜನಪದ ಕೂಟದಲ್ಲಿ ಸುಮಾರು 2300 ಸದಸ್ಯರಿದ್ದು, ಸದಸ್ಯತ್ವ ಅಭಿಯಾನದ ಮೂಲಕ ಈ ಸಂಖ್ಯೆಯನ್ನು 8 ಸಾವಿರಕ್ಕೆ ಏರಿಸಲಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದರು. 13 ಹೋಬಳಿ ಘಟಕ ಹಾಗೂ ಮೂರು ತಾಲ್ಲೂಕು ಘಟಕಗಳನ್ನು ಈಗಾಗಲೆ ರಚಿಸಲಾಗಿದ್ದು, ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಸಕರ್ಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಕರ್ನಾಟಕ ನಾಟಕ ಅಕಾಡೆಮಿಗೆ ತುಳು ಭಾಷಿಕರಾದ ಮಂಜು ಕೊಡಗು ಹಾಗೂ ಪುಸ್ತಕ ಪ್ರಾಧಿಕಾರಕ್ಕೆ ಡಾ| ಕವಿತಾ ರೈ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸುವುದಾಗಿ ಶ್ರೀಧರ ನೆಲ್ಲಿತ್ತಾಯ ಇದೇ ಸಂದರ್ಭ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ಮಾತನಾಡಿ, ಅಕಾಡೆಮಿಗೆ ಜನಪ್ರತಿನಿಧಿಗಳ ಶಿಫಾರಸ್ಸಿನ ಮೇರೆ ಸದಸ್ಯರನ್ನು ಆಯ್ಕೆ ಮಾಡದೆ, ತುಳು ಭಾಷೆ, ಸಂಸ್ಕೃತಿಯ ಬಗ್ಗೆ ಹೆಚ್ಚು ಕಾಳಜಿ ಹೊಂದಿ ಅದರಲ್ಲಿ ತೊಡಗಿಸಿಕೊಂಡಿರುವವರನ್ನು ಆಯ್ಕೆ ಮಾಡಬೇಕೆಂದು ಒತ್ತಾಯಿಸಿದರು. ತುಳು ಸಾಹಿತ್ಯ ಅಕಾಡೆಮಿಗೆ ಕೇವಲ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾತ್ರ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ನೇಮಕ ಮಾಡಿ ಆದೇಶ ಹೊರಡಿಸುವುದು ಸರಿಯಾದ ಕ್ರಮವಲ್ಲವೆಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿ, ಉಪಾಧ್ಯಕ್ಷ ಆನಂದ ರಘು, ಬಿ.ಡಿ. ನಾರಾಯಣ ರೈ ಹಾಗೂ ಸಲಹೆಗಾರರಾದ ಎಂ.ಬಿ. ನಾಣಯ್ಯ ಉಪಸ್ಥಿತರಿದ್ದರು.

See also  ಜಿಂಕೆ ಬೇಟೆ: ಐವರು ಆರೋಪಿಗಳ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು