News Kannada
Friday, December 02 2022

ಕರ್ನಾಟಕ

ಕೊಡಗಿನಲ್ಲಿ ಬಂಟಿಂಗ್ಸ್, ಪ್ಲೆಕ್ಸ್ ಅಳವಡಿಕೆಗೆ ಅನುಮತಿ ಕಡ್ಡಾಯ

Photo Credit :

ಕೊಡಗಿನಲ್ಲಿ ಬಂಟಿಂಗ್ಸ್, ಪ್ಲೆಕ್ಸ್ ಅಳವಡಿಕೆಗೆ ಅನುಮತಿ ಕಡ್ಡಾಯ

ಮಡಿಕೇರಿ: ಗೌರಿ ಗಣೇಶ ಹಬ್ಬದ ಸಂದರ್ಭ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಬಂಟಿಂಗ್ಸ್, ಪ್ಲೆಕ್ಸ್ ಗಳನ್ನು ಅಳವಡಿಸುವ ಸಂಬಂಧ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ಜೊತೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮಾತನಾಡಿ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮಕೈಗೊಳ್ಳಲಿದ್ದು, ಅದಕ್ಕಾಗಿ ನಗರಸಭೆ, ಮೂರು ಪಟ್ಟಣ ಪಂಚಾಯಿತಿ ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬ್ಯಾನರ್, ಬಂಟಿಂಗ್ಸ್ ಅಳವಡಿಸುವ ಸಂಬಂಧ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆಯುವ ಮೊದಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ಹೇಳಿದರು. ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ ಯಾವ ರೀತಿ ಮಾಡಬೇಕು ಮತ್ತು ಮಾಡಬಾರದು ಎಂಬ ಬಗ್ಗೆ ಕೆಲವು ನಿಬಂಧನೆಗಳನ್ನು ನೀಡಲಿದೆ. ಅದರಂತೆ ನಡೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ಅಗತ್ಯ ಜಾಗೃತಿಯನ್ನು ಮೂಡಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗಣೇಶ ಪ್ರತಿಷ್ಠಾಪನೆ, ಮೆರವಣಿಗೆ ವಿಸರ್ಜನೆ ಸಂದರ್ಭದಲ್ಲಿ ಯಾವ ಮಾರ್ಗದಲ್ಲಿ ತೆರಳುತ್ತಾರೆ. ಸಮಯ ಮತ್ತಿತರ ಬಗ್ಗೆ ಮಾಹಿತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಹೇಳಿದರು. ಆಟೋಗಳಲ್ಲಿ, ಗೂಡ್ಸ್ ವಾಹನಗಳಲ್ಲಿ ಬಾವುಟಗಳನ್ನು ಅಳವಡಿಸಿಕೊಂಡು ಓಡಾಡಬಾರದು. ಇಂತಹದು ಕಂಡುಬಂದರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಹಾಗೆಯೇ ನಗರದಲ್ಲಿರುವ ಮಹಾನ್ ವೀರಸೇನಾನಿಗಳ ಪ್ರತಿಮೆಗಳ ಸುತ್ತ ಬ್ಯಾನರ್, ಬಂಟಿಂಗ್ಸ್ ಗಳನ್ನು ಅಳವಡಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಾರ್ವಜನಿಕರಿಗೆ ಸೇವೆ ನೀಡಿದರೆ ಸಾಕು. ಅದನ್ನು ಬಿಟ್ಟು ಬಾವುಟಗಳನ್ನು ಅಳವಡಿಸಿಕೊಂಡು ಓಡಾಡುವುದು ಸರಿಯೇ ಎಂದು ಜಿಲ್ಲಾಧಿಕಾರಿ ಅವರು ಪ್ರಶ್ನಿಸಿದರು. ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಪರಿಸರ ಸ್ನೇಹಿ ಗಣಪ ಪ್ರತಿಷ್ಠಾಪನೆ ಮಾಡುವ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ರಾಸಾಯನಿಕ ಗಣಪ ಬಳಸದೆ, ಮಣ್ಣಿನ ಗಣಪ ಪ್ರತಿಷ್ಠಾಪನೆ ಮಾಡಬೇಕಿದೆ, ಆ ದಿಸೆಯಲ್ಲಿ ಪರಿಸರ ಮಾಲೀನ್ಯ ನಿಯಂತ್ರಣ ಮಂಡಳಿಯೊಂದಿಗೆ ಅಗತ್ಯ ಅರಿವು ಮೂಡಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು.

See also  ವರದಕ್ಷಿಣೆ ಕಿರುಕುಳ: ಗೃಹಿಣಿ ನೇಣಿಗೆ ಶರಣು

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಪೌರಾಯುಕ್ತರಾದ ಬಿ.ಶುಭ, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಜಿ.ಪಂ. ಉಪಕಾರ್ಯದರ್ಶಿ ಸಿದ್ದಲಿಂಗ ಮೂರ್ತಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ತಹಶೀಲ್ದಾರ್ರಾದ ಕುಸುಮ, ಮಹೇಶ್, ತಾ.ಪಂ. ಇಒಗಳಾದ ಜೀವನ್ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಶ್ರೀಧರ, ನಾಚಪ್ಪ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು