News Kannada
Friday, December 02 2022

ಕರ್ನಾಟಕ

ತಿ.ನರಸೀಪುರದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಭಾರೀ ವಿರೋಧ

Photo Credit :

ತಿ.ನರಸೀಪುರದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಭಾರೀ ವಿರೋಧ

ತಿ.ನರಸೀಪುರ: ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಸಮುದಾಯವನ್ನು ಒಡೆಯಲು ವ್ಯವಸ್ಥಿತವಾಗಿ ಹುನ್ನಾರ ನಡೆಯುತ್ತಿರುವುದನ್ನು ಖಂಡಿಸಿ ತಿ.ನರಸೀಪುರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

ತಾಲೂಕಿನ ವೀರಶೈವ ಲಿಂಗಾಯತ ಸಮಾನ ಮನಸ್ಕರ ವೇದಿಕೆ, ವೀರಶೈವ ಮಹಾಸಭಾ, ಮಹಾಸಭಾ ಯುವ ಘಟಕ, ತಾಲೂಕು ಶರಣ ಸಾಹಿತ್ಯ ಪರಿಷತ್ ಹಾಗೂ ವೀರಶೈವ ಸೇವಾ ಸಮಾಜ ಸಂಘದ ಸಂಯುಕ್ತ ಆಶ್ರಯದಲ್ಲಿ ಜಮಾವಣೆಗೊಂಡಿದ್ದ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಯುವಕರು ತಿ.ನರಸೀಪುರದಲ್ಲಿ ವಿದ್ಯೋದಯ ಕಾಲೇಜು ವೃತ್ತದಲ್ಲಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ರಾಜ್ಯದಲ್ಲಿ ಸಮುದಾಯವನ್ನು ಒಡೆಯುವ ಷಡ್ಯಂತ್ರ ನಡೆಯುತ್ತಿದ್ದು ಅದನ್ನು ಖಂಡಿಸುವುದಾಗಿ ಹೇಳಿದರು.

ಬಳಿಕ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ವೀರಶೈವ ಲಿಂಗಾಯತರನ್ನು ಒಡೆಯುವ ಕುತಂತ್ರಿಗಳ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಕಾಲೇಜು ಜೋಡಿ ರಸ್ತೆ, ಲಿಂಕ್ ರಸ್ತೆ ಹಾಗೂ ಪುರಸಭೆ ರಸ್ತೆಗಳ ಮೂಲಕ ತಾಲೂಕು ಕಚೆೇರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿರಸ್ತೇದಾರ್ ಪ್ರಭುರಾಜ್ ಅವರ ಮೂಲಕ ಮನವಿ ಪತ್ರವನ್ನು ಸಲ್ಲಿಸಿದರು.

ಬಳಿಕ ವಿವಿಧ ವೃತ್ತಗಳಲ್ಲಿ ಪಟಾಕಿಯನ್ನು ಸಿಡಿಸಿ ವೀರಶೈವರಿಗೆ ಪ್ರತ್ಯೇಕ ಧರ್ಮದ ಅವಶ್ಯಕತೆಯಿಲ್ಲ. ನಾವೆಲ್ಲರೂ ಒಂದೇ ಎಂಬ ಸಂದೇಶದೊಂದಿಗೆ ಬಲ ಪ್ರದರ್ಶನ ಮಾಡಿದರು. ಪ್ರತಿಭಟನೆ ನೇತೃತ್ವವನ್ನು ವಹಿಸಿದ್ದ ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಹೆಚ್ಚುವರಿ ಆಯುಕ್ತ ಹೆಳವರಹುಂಡಿ ಸಿದ್ಧಪ್ಪ ಮಾತನಾಡಿ, ಸಮಾಜದ ಎಲ್ಲಾ ವರ್ಗಗಳು ಮತ್ತು ವಿವಿಧ ಧರ್ಮದ ಜನರೊಂದಿಗೆ ಸಾಮರಸ್ಯದಿಂದ ಬದುಕುತ್ತಿರುವ ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಬೇಕಿಲ್ಲ. ಒಂದೇ ನಾಣ್ಯದ ಎರಡು ಮುಖಗಳಂತಿರುವ ವೀರಶೈವ ಲಿಂಗಾಯತರ ನಡುವೆ ಭಿನ್ನಬೇಧವ ಮಾಡುವ ಮೂಲಕ ಸಮುದಾಯವನ್ನು ಸಾಮಾಜಿಕವಾಗಿ ಒಡೆಯುವ ಕಾರ್ಯಕ್ಕೆ ಕೈ ಹಾಕಲಾಗುತ್ತಿದೆ. ಸಮುದಾಯದ ಜನರು ಜಾಗೃತರಾಗಿ ಪ್ರತ್ಯೇಕ ಧರ್ಮವನ್ನು ವಿರೋಧಿಸುವಲ್ಲಿ ಒಗ್ಗಟ್ಟನ್ನು ಪ್ರದರ್ಶಿಸಬೇಕು. ಸಮುದಾಯವನ್ನು ಛಿದ್ರಗೊಳಿಸಲಿಕ್ಕೆ ಅವಕಾಶ ನೀಡಬಾರದೆಂದು ಕರೆ ನೀಡಿದರು.

See also  ಶೀಘ್ರದಲ್ಲೇ ಅಯೋದ್ಯೆ ತೀರ್ಪು: ದೇಶದಾದ್ಯಂತ ಬಿಗಿ ಬಂದೋಬಸ್ತ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು