News Kannada
Monday, December 05 2022

ಕರ್ನಾಟಕ

ಮಲೆ ಮಹದೇಶ್ವರ ಸನ್ನಿಧಿಯಲ್ಲೇ ತುಂಡುಡುಗೆ ನೃತ್ಯ

Photo Credit :

ಮಲೆ ಮಹದೇಶ್ವರ ಸನ್ನಿಧಿಯಲ್ಲೇ ತುಂಡುಡುಗೆ ನೃತ್ಯ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗಣಪತಿ ವಿಸರ್ಜನೆಯ ಪ್ರಯುಕ್ತ ಸೋಮವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ಹುಡುಗಿಯರು ತುಂಡುಡುಗೆ ಧರಿಸಿ ನತರ್ಿಸಿದ ಘಟನೆ ಬೆಳಕಿಗೆ ಬಂದಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಚಾಮರಾಜನಗರ ಜಿಲ್ಲೆಯ ಮಹದೇಶ್ವರಬೆಟ್ಟ ನೌಕರರ ಸಂಘ ಹಾಗೂ ಪ್ರಾಧಿಕಾರದ ವತಿಯಿಂದ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ಬೆಂಗಳೂರಿನಿಂದ ಬಂದಿದ್ದ ಹುಡುಗಿಯರು ತುಂಡುಡುಗೆ ತೊಟ್ಟು ಅಶ್ಲೀಲವಾಗಿ ಕುಣಿದು ಕುಪ್ಪಳಿಸಿದ್ದಾರೆ. ಇದರಿಂದ ಸಾವಿರಾರು ಮಾದಪ್ಪನ ಭಕ್ತರು ಕಾರ್ಯಕ್ರಮದ ಆಯೋಜಕರಿಗೆ ಹಿಡಿಶಾಪ ಹಾಕುವಂತಾಗಿದೆ.

ಕಳೆದ ನಾಲ್ಕು ವರ್ಷಗಳಿಂದ ಗಣಪತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿರುವ ನೌಕರರ ಸಂಘ ಹಿಂದೆಂದೂ ಈ ರೀತಿ ಅರೆಬೆತ್ತಲೆಯಾಗಿ ಕುಣಿಸಿರಲಿಲ್ಲ. ಆದರೆ ಈ ಬಾರಿ ಮಾತ್ರ ನೌಕರರ ಸಂಘ ಹಾಗೂ ಪ್ರಾಧಿಕಾರದ ವತಿಯಿಂದ ನಡೆದ ಈ ಕಾರ್ಯಕ್ರಮ ಮಲೈ ಮಾದಪ್ಪನ ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ.

ಮಲೈ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಉಪ ಕಾರ್ಯದರ್ಶಿ ಬಸವರಾಜು ನೇತೃತ್ವದಲ್ಲಿ ಮಾದಪ್ಪನ ದೇವಸ್ಥಾನದ ಆವರಣದಲ್ಲೇ ನಡೆದ ಈ ನೃತ್ಯ ಮಲೈ ಮಹದೇಶ್ವರ ಬೆಟ್ಟದ ಪ್ರಸಿದ್ಧಿಗೆ ಕಳಂಕ ತಂದಂತಾಗಿದ್ದು, ಆಯೋಜಕರ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ರಾಮು ಅವರಿಗೆ ಒತ್ತಾಯಿಸಿದ್ದಾರೆ.

See also  ಹಾವೇರಿ: ವೈದ್ಯೆ, ಶಿಕ್ಷಕ, ಪೊಲೀಸ್, ನ್ಯಾಯವಾದಿ, ಆಶಾ ಕಾರ್ಯಕರ್ತೆ, ಚಾಲಕ ಸೇರಿದಂತೆ 15 ಜನರಿಗೆ ಕೋವಿಡ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು