News Kannada
Thursday, October 06 2022

ಕರ್ನಾಟಕ

ನಕಲಿ ದಾಖಲೆ ನೀಡಿ ಸಾಲ ಪಡೆದ ವ್ಯಕ್ತಿಯ ಬಂಧನ - 1 min read

Photo Credit :

ನಕಲಿ ದಾಖಲೆ ನೀಡಿ ಸಾಲ ಪಡೆದ ವ್ಯಕ್ತಿಯ ಬಂಧನ

ಕಾಸರಗೋಡು: ನಕಲಿ ದಾಖಲೆ ನೀಡಿ ಬ್ಯಾಂಕ್ ನಿಂದ ಎರಡೂವರೆ ಲಕ್ಷ ರೂ . ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕೊಳತ್ತೂರು ಕೇಳೊಟ್ ನ ಪ್ರದೀಪ್ ( ೩೧) ಎಂದು ಗುರುತಿಸಲಾಗಿದೆ. ೨೦೧೪ ರ ಏಪ್ರಿಲ್ ನಲ್ಲಿ ಈತ ನಕಲಿ ಹಕ್ಕು ಪತ್ರವನ್ನು ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದನು.

ತಾಯಿಯ ಹೆಸರಿನಲ್ಲಿರುವ ಒಂದೂವರೆ ಎಕರೆ ಸ್ಥಳದ ಹಕ್ಕು ಪತ್ರ ವನ್ನು ಬ್ಯಾಂಕ್ ಗೆ ಸಲ್ಲಿಸಲಾಗಿತ್ತು. ಆದರೆ ಸಾಲ ಮರುಪಾವತಿಸದ ಹಿನ್ನಲೆಯಲ್ಲಿ ಕಾನೂನು ಕ್ರಮ ದಂತೆ ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದು ಗ್ರಾಮ ಕಚೇರಿಯಲ್ಲಿ ಪರಿಶೀಲನೆ ನಡೆಸಿದಾಗ ನಕಲಿ ಎಂದು ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾ ಬ್ಯಾಂಕ್ ಮೆನೇಜರ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು, ಈ ಬಗ್ಗೆ ತನಿಖೆ ನಡೆಸುವಂತೆ ತಹಶೀಲ್ದಾರ್ ಗೆ ಆದೇಶಿಸಿದ್ದರು.

ಈ ನಡುವೆ ಪ್ರದೀಪ್ ತಲೆಮರೆಸಿಕೊಂಡಿದ್ದು ಬುಧವಾರ ಈತ ಊರಿಗೆ ಬಂದಿರುವುದಾಗಿ ಲಭಿಸಿದ ಮಾಹಿತಿಯಂತೆ ಈತನನ್ನು ಬಂಧಿಸಲಾಗಿದೆ.

 

See also  ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು