News Kannada
Friday, October 07 2022

ಕರ್ನಾಟಕ

ಜಿಲ್ಲಾಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಕನ್ನಡಸೇನೆ ಮನವಿ - 1 min read

Photo Credit :

ಜಿಲ್ಲಾಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಕನ್ನಡಸೇನೆ ಮನವಿ

ಚಿಕ್ಕಮಗಳೂರು: ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆಯಿಲ್ಲದೆ ಆಗಿರುವ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಕನ್ನಡಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾ ಸರ್ಜನ್ ಡಾ.ದೊಡ್ಡಮಲ್ಲಪ್ಪರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಆಸ್ಪತ್ರೆಗೆ ತೆರಳಿ ಮಾತನಾಡಿ, ಇಲ್ಲಿ ಬರುವ ರೋಗಿಗಳಿಗೆ ಸಮರ್ಪಕವಾದ ಚಿಕಿತ್ಸೆ ಸಿಗದೆ ಕೆಲವರು ತೀವ್ರ ತೊಂದರೆ ಅನುಭವಿಸಿದ್ದಾರೆ. ಓರ್ವ ರೋಗಿ ಆಸ್ಪತ್ರೆಯಲ್ಲಿ ದಾಖಲಾದ ಸಂದರ್ಭದಲ್ಲಿ ಡ್ರಿಪ್ಸ್ ಅಥವಾ ಆಕ್ಸಿಜನ್ ಹಾಕಿರುವಾಗ ಅವರ ಬಳಿ ಯಾವುದೇ ಸಿಬ್ಬಂದಿ ಇಲ್ಲದೆ ಒಮ್ಮೆ ಒಂದು ಮಗು ಪ್ರಾಣ ಕಳಕೊಂಡಿದೆ. ಇದು ಎಲ್ಲರ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ ಎಂದು ದೂರಿದರು.

ಆಸ್ಪತ್ರೆ ಚೆನ್ನಾಗಿದೆ, ವೈದ್ಯರು ಕೆಲಸ ಮಾಡುತ್ತಿದ್ದಾರೆ. ಆದರೆ ಅದರ ನಿರ್ವಹಣೆ ನಿರಂತರವಾಗಿರಬೇಕು. ಜೊತೆಗೆ ಶಿಫ್ಟ್ ಕ್ರಮ ಇರುವುದರಿಂದ ಸಿಬ್ಬಂದಿ ಕೊರತೆ ಇರದ ಹಾಗೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ. ಬಡವರಿಗೆ ತೊಂದರೆಯಾದಾಗ ಸರ್ಕಾರಿ ಆಸ್ಪತ್ರೆಯೆ ದೇವಾಲಯವಾಗಿರುತ್ತದೆ. ವೈದ್ಯರನ್ನು ದೇವರೆಂದು ನಂಬಿ ರೋಗಿಗಳು ಬಂದಿರುತ್ತಾರೆ. ಕೆಲವೊಮ್ಮೆ ವೈದ್ಯರು, ಸಿಬ್ಬಂದಿ ಬೇಜವಾಬ್ದಾರಿಯಿಂದ ಅಚಾತುರ್ಯವಾದಾಗ ರೋಗಿ ಕುಟುಂಬವೇ ಬೀದಿ ಪಾಲಾಗುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಬೇಕು. ಮೂಲಭೂತ ಸೌಕರ್ಯದ ಸಮಸ್ಯೆ ಅಥವಾ ಇಲ್ಲಿನ ಕೊರತೆ ಪರಿಹಾರವಾಗದಿದ್ದರೆ ಮುಂದೆ ಹೋರಾಟದ ಹಾದಿ ನಿಶ್ಚಿತ ಎಂದು ಎಚ್ಚರಿಸಿದರು.

See also  ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾಗೆ ಎರಡನೇ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು