ಕಾಸರಗೋಡು: ಕಣ್ಣೂರಿನ ಬಿಜೆಪಿ ಕಚೇರಿಯಲ್ಲಿ ಮಾರಕಾಸ್ತ್ರ ಮತ್ತು ಸ್ಟೀಲ್ ಬಾಂಬ್ ಗಳ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಿಜೆಪಿ ಕಚೇರಿ ಮೇಲೆ ಪೊಲೀಸರು ಇಂದು ದಾಳಿ ನಡೆಸಿದಾಗ ತಲವಾರು, ಬಾಂಬ್, ಸೈಕಲ್ ಚೈನ್ ಮತ್ತಿತರ ಮಾರಕಾಸ್ತ್ರಗಳು ಪತ್ತೆಯಾಗಿವೆ. ಕಳೆದ ರವಿವಾರ ಸಿಪಿಎಂ ಕಾರ್ಯಕರ್ತನೊಬ್ಬನ ಮೇಲೆ ಕಚ್ಚಾ ಬಾಂಬ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರು ಬಿಜೆಪಿ ಕಚೇರಿಯ ಮೇಲೆ ದಾಳಿ ನಡೆಸಿದಾಗ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಈ ಸಂಬಂಧ ಓರ್ವ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿ ದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ