News Kannada
Wednesday, October 05 2022

ಕರ್ನಾಟಕ

ಬರಿಗಾಲಲ್ಲಿ ಮೂರು ಸಾವಿರ ಅಡಿ ಬೆಟ್ಟ ಏರಿದರೆ ಮಾತ್ರ ಈ ದೇವಿ ದರ್ಶನ - 1 min read

Photo Credit :

ಬರಿಗಾಲಲ್ಲಿ ಮೂರು ಸಾವಿರ ಅಡಿ ಬೆಟ್ಟ ಏರಿದರೆ ಮಾತ್ರ ಈ ದೇವಿ ದರ್ಶನ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಾನಾ ರೀತಿಯ ವಿಶಿಷ್ಟ, ವಿಶೇಷ ಹಬ್ಬ ಹರಿದಿನಗಳ ಆಚರಣೆಗಳನ್ನು ಕಾಣಬಹುದು. ಇಂತಹಾ ಆಚರಣೆಗಳ ಸಾಲಿಗೆ ಸೇರಿರುವುದೇ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರೋ ದೇವಿರಮ್ಮ ಜಾತ್ರಾ ಮಹೋತ್ಸವ. ಸುಮಾರು 3000 ಅಡಿಗಳಷ್ಟು ಎತ್ತರದ ಗುಡ್ಡದಲ್ಲಿ ಪೂಜಿಸಲ್ಪಡೋ ದೇವಿರಮ್ಮನನ್ನು ನೋಡಲು ಭಕ್ತರು ತುದಿಗಾಲಲ್ಲಿ ನಿಂತಿದ್ದಾರೆ.

ದೇವಿರಮ್ಮ ಜಾತ್ರಾ ಮಹೋತ್ಸವಕ್ಕೆ ಉಳಿದಿರೋದು ಇನ್ನು ಒಂದು ದಿನ ಬಾಕಿ ಮಾತ್ರ. ವರ್ಷಗೊಮ್ಮೆ ದರ್ಶನ ನೀಡೋ ದೇವಿರಮ್ಮ ಜಾತ್ರಾ ಮಹೋತ್ಸವದ ತಯಾರಿ ಹೇಗಿದೆ ನೋಡೋಣ ಬನ್ನಿ, ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ. ಹೌದು ಇದು ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿರೋ ಬಿಂಡಿಗ ದೇವಿರಮ್ಮ ದೇವಾಲಯ. ದೀಪಾವಳಿ ಅಂಗವಾಗಿ ಮೂರು ದಿನಗಳ ಕಾಲ ಈ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತೇ. 3000 ಅಡಿಗಳಷ್ಟು ಎತ್ತರ ಗುಡ್ಡದಲ್ಲಿರೋ ದೇವಿರಮ್ಮ ವರ್ಷಗೊಮ್ಮೆ ಮಾತ್ರ ಜನರಿಗೆ ದರ್ಶನ ನೀಡೋದು. ಮತ್ತೊಂದು ವಿಶೇಷ ಅಂದ್ರೆ 3000 ಅಡಿ ಎತ್ತರವಿರೋ ಈ ಬೆಟ್ಟವನ್ನ ಭಕ್ತಾದಿಗಳು ಬರಿಗಾಲಲ್ಲೇ ಬೆಟ್ಟವೇರೋದು.

ಮೂರು ದಿನಗಳ ಕಾಲ ನಡೆಯೋ ದೇವರಮ್ಮ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ ನಡೆಸಲಾಗಿದೆ. ಅಕ್ಟೋಬರ್ 18 ಅಂದ್ರೆ ನರಕ ಚತುರ್ದಶಿಯಂದು ದೇವಿರಮ್ಮನ ಬೆಟ್ಟದಲ್ಲಿ ವಿಶೇಷ ಪೂಜೆ, ಹೋಮ ಹವನಗಳನ್ನ ದೇವಿಗೆ ಸಲ್ಲಿಸಿ ಬೆಳಗಿನ ಜಾವ 4 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತೆ. ಸಮುದ್ರಮಟ್ಟದಿಂದ ಸುಮಾರು 3000 ಅಡಿ ಎತ್ತದಲ್ಲಿರೋ ದೇವಿರಮ್ಮನ ಬೆಟ್ಟದಲ್ಲಿ ವರ್ಷದಲ್ಲಿ ಒಮ್ಮೆ ಮಾತ್ರ ಪೂಜೆ ನಡೆಯೋದು. ಈ ಬೆಟ್ಟಕ್ಕೆ ಯಾವುದೇ ರಸ್ತೆ ಸಂಪರ್ಕವೂ ಇಲ್ಲ. ಇದರಿಂದಾಗಿ ಬೆಟ್ಟಗುಡ್ಡಗಳನ್ನು ಅಲೆದಾಡಿಕೊಂಡೆ ಬರಬೇಕು. ಜೊತೆಗೆ ಬೆಟ್ಟ ಏರುವಾಗ ಯಾವುದೇ ಆಹಾರವನ್ನು ಸ್ವೀಕರಿಸುವಂತಿಲ್ಲ.

ಕಾಲಿಗೆ ಚಪ್ಪಲಿಯನ್ನು ಹಾಕುವಂತಿಲ್ಲ. ದೇವರಿಗೆ ಪೂಜೆ ಸಲ್ಲಿಸಿದ ನಂತರ ಈ ಬೆಟ್ಟದಲ್ಲಿ ಸಂಜೆ ದೀಪ ಬೆಳಗಿದ ನಂತರವೇ ಊಟ. ರಾಜ್ಯ ಹೊರರಾಜ್ಯಗಳಿಂದ ಆಗಮಿಸೋ ಭಕ್ತಾದಿಗಳಿಗೆ ಸಕಲ ಸಿದ್ದತೆ ಜಿಲ್ಲಾಡಳಿತ ಹಾಗೂ ದೇವಾಲಯ ಸಮಿತಿ ವ್ಯವಸ್ಥೆಯನ್ನು ನಿರ್ವಹಿಸಿಕೊಂಡಿದ್ದಾರೆ. ಕಳೆದ ಬಾರಿ 80 ಸಾವಿರಕ್ಕೂ ಅಧಿಕ ಭಕ್ತಾದಿಗಳು ಬೆಟ್ಟದಲ್ಲಿ ದೇವಿಯ ದರ್ಶನ ಪಡೆದಿದ್ರು. ಈ ಬಾರಿ 1 ಲಕ್ಷಕ್ಕೂ ಅಧಿಕ ಮಂದಿ ದೇವಿಯ ದರ್ಶನ ಪಡೆಯುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ದೀಪಾವಳಿಯ ದಿನದಂದು ಆರಂಭಗೊಳ್ಳೋ ದೇವಿರಮ್ಮ ಜಾತ್ರೆ ಮಹೋತ್ಸವಕ್ಕೆ ಕ್ಷಣಗಣನೇ ಆರಂಭಗೊಂಡಿದೆ. ವರ್ಷಗೊಮ್ಮೆ ದರ್ಶನ ನೀಡೋ ದೇವಿರಮ್ಮ ದೇವಿಯ ದರ್ಶನಕ್ಕೆ ಜನರು ಕಾತುರದಿಂದ ಕಾದುಕೂತಿದ್ದಾರೆ.

See also  ಅತಿವೃಷ್ಟಿ ಹಾನಿ ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ ಮಣವಟ್ಟಿರ ಕುಟುಂಬಸ್ಥರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು