News Kannada
Sunday, September 25 2022

ಕರ್ನಾಟಕ

ಕರಗಡ ಕಾಮಗಾರಿ ಭ್ರಷ್ಟಾಚಾರ ವಿರುದ್ದ ತನಿಖೆಗೆ ಒತ್ತಾಯ - 1 min read

Photo Credit :

ಕರಗಡ ಕಾಮಗಾರಿ ಭ್ರಷ್ಟಾಚಾರ ವಿರುದ್ದ ತನಿಖೆಗೆ ಒತ್ತಾಯ

ಚಿಕ್ಕಮಗಳೂರು: ಕರಗಡ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ವಿರುದ್ದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ದೇವಿಕೆರೆ ಸಮೀಪ ಪ್ರತಿಭಟನೆ ನಡೆಸಿದರು.

ನಗರದಿಂದ ವಾಹನಗಳಲ್ಲಿ ತೆರಳಿದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಮುಖ್ಯ ರಸ್ತೆಯಿಂದ ದೇವಿಕೆರೆವರೆಗೆ ಮೆರವಣಿಗೆ ನಡೆಸಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ದ ಘೋಷಣೆ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಹೆಚ್.ದೇವರಾಜ್ ಮಾತನಾಡಿ, 16 ರಿಂದ 20 ಕೋಟಿ ರೂ. ವ್ಯಯಿಸಿ ಮಾಡಲಾಗಿರುವ ಕರಗಡ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕ ಮತ್ತು ಕಳಪೆಯಾಗಿದೆ. ಸದಾ ಬರಗಾಲದ ದವಡೆಗೆ ತುತ್ತಾಗುವ ಜಿಲ್ಲೆಯ ಬಯಲು ಪ್ರದೇಶಕ್ಕೆ ನೀರುಣಿಸುವ ಮಹತ್ವಾಕಾಂಕ್ಷೆಯಿಂದ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸರ್ಕಾರ ಕರಗಡ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ್ದು ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಸಿದೆ ಎಂದು ದೂರಿದರು.

ಕರಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿಯಲ್ಲಿ ಶಾಸಕ ಸಿ.ಟಿ.ರವಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರು ಬಹಳಷ್ಟು ಹಣವನ್ನು ಕೊಳ್ಳೆ ಹೊಡೆದಿದ್ದಾರೆ. ಅನನುಭವಿ ಕಂಟ್ರಾಕ್ಟರ್ ಗೆ ಗುತ್ತಿಗೆ ನೀಡುವ ಮೂಲಕ ಕಳಪೆ ಕಾಮಗಾರಿಗೆ ಕಾರಣರಾಗಿದ್ದಾರೆ. ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರದ ಹೊಣೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಹೊರಬೇಕು. ಶಾಸಕ ಸಿ.ಟಿ.ರವಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ಅವೈಜ್ಞಾನಿಕ, ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರ ನಡೆಸುವ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿ ಬಯಲು ಸೀಮೆಯ ರೈತರ ಬದುಕಿನ ಜೊತೆ ಚೆಲ್ಲಾಟವಾಡುತ್ತಿವೆ ಎಂದು ದೂರಿದ ಅವರು, ಈಗ ನಡೆದಿರುವ ಕಾಮಗಾರಿ ಅಪೂರ್ಣವಾಗಿರುವ ಹಿನ್ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿಗೆ ಹಣ ಬಿಡುಗಡೆ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

See also  ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಕೋವಿಗಳಿಗೆ ವಿಶೇಷ ಪೂಜೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು