News Kannada
Wednesday, October 05 2022

ಕರ್ನಾಟಕ

ನಿರಾಶ್ರಿತರ ಶಿಬಿರದಲ್ಲಿ 3 ವರ್ಷದ ಮಗುವಿನ ಸಾವಿಗೆ ಅಧಿಕಾರಿಯ ಬೇಜಾವ್ದಾರಿತನ ಕಾರಣ: ಆರೋಪ - 1 min read

Photo Credit :

ನಿರಾಶ್ರಿತರ ಶಿಬಿರದಲ್ಲಿ 3 ವರ್ಷದ ಮಗುವಿನ ಸಾವಿಗೆ ಅಧಿಕಾರಿಯ ಬೇಜಾವ್ದಾರಿತನ ಕಾರಣ: ಆರೋಪ

ಮಡಿಕೇರಿ: ಬಸವನಹಳ್ಳಿಯಲ್ಲಿರುವ ನಿರಾಶ್ರಿತರ ಶಿಬಿರದಲ್ಲಿ ಮೂರು ವರ್ಷ ಪ್ರಾಯದ ಲಕ್ಷ್ಮಿ ಎಂಬ ಮಗು ಮೃತಪಟ್ಟ ಪ್ರಕರಣಕ್ಕೆ ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿ ಬಿ.ಎಂ.ಪ್ರಕಾಶ್ ಅವರ ಬೇಜಾವ್ದಾರಿತನವೇ ಕಾರಣವೆಂದು ಮಹಿಳಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಜಿ.ಆರ್.ಪುಷ್ಪಲತಾ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಸ್ಥಳಕ್ಕೆ ಆಂಬ್ಯುಲೆನ್ಸ್ ಕಳುಹಿಸುವಂತೆ ದೂರವಾಣಿ ಮೂಲಕ 2 ದಿನಗಳಿಂದ ಮನವಿ ಮಾಡಿದರೂ ಅಧಿಕಾರಿ ಅಮಾನೀಯ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಈ ಅಧಿಕಾರಿ ಕಾರ್ಯ ನಿರ್ವಹಿಸಿದ ಸ್ಥಳಗಳಲ್ಲಿ ಕರ್ತವ್ಯಲೋಪ ಎಸಗಿ ವಿಚಾರಣೆಯನ್ನು ಕೂಡ ಎದುರಿಸುತ್ತಿದ್ದಾರೆ. ಇವರಿಂದಾಗಿ ಇಲಾಖೆಗೆ ಮಾತ್ರವಲ್ಲದೆ ಆಡಳಿತ ವ್ಯವಸ್ಥೆಗೂ ಕೆಟ್ಟ ಹೆಸರು ಬರುತ್ತಿದೆ ಎಂದು ಆರೋಪಿಸಿರುವ ಪುಷ್ಪಲತಾ, ಅಧಿಕಾರಿ ಬಿ.ಎಂ.ಪ್ರಕಾಶ್ ಅವರನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರ ಬಳಿ ಮನವಿ ಮಾಡಿ ಅಧಿಕಾರಿ ವಿರುದ್ಧ ಕ್ರಮಕ್ಕಾಗಿ ಒತ್ತಾಯಿಸಲಾಗುವುದೆಂದು ತಿಳಿಸಿದ್ದಾರೆ.

See also  ಬಕ್ರೀದ್ ನಿಮಿತ್ತ ಅಕ್ರಮವಾಗಿ ಗೋವುಗಳ ಸಾಗಾಟ ತಡೆಗೆ ಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು