News Kannada
Monday, September 26 2022

ಕರ್ನಾಟಕ

ಮೀಸಲಾತಿ ಮೂಲಕವೇ ಅಭಿವೃದ್ಧಿ ಅಸಾಧ್ಯ: ಸಿಎಂ - 1 min read

Photo Credit :

ಮೀಸಲಾತಿ ಮೂಲಕವೇ ಅಭಿವೃದ್ಧಿ ಅಸಾಧ್ಯ: ಸಿಎಂ

ಮಂಡ್ಯ: ಮೀಸಲಾತಿ ಮೂಲಕವೇ ಎಲ್ಲವನ್ನೂ ಸಾಧಿಸಿ ಸಮಗ್ರ ಅಭಿವೃದ್ಧಿಯನ್ನು ಹೊಂದಲು ಸಾಧ್ಯವಾಗದು ಆದ್ದರಿಂದ ಶೋಷಿತ ವರ್ಗ ಆಧುನಿಕ ಜಗತ್ತಿನ ಸವಾಲುಗಳನ್ನು ಎದುರಿಸಲು ಸನ್ನದ್ಧರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಅಖಿಲ ಕರ್ನಾಟಕ ಅಂಬಿಗರ ಚೌಡಯ್ಯ ಮಹಾಸಭಾ ಹಾಗೂ ಮಂಡ್ಯ ಜಿಲ್ಲಾ ಗಂಗಾಮತಸ್ಥ (ಬೆಸ್ತ)ರ ಸಂಘದ ವತಿಯಿಂದ ಭಾನುವಾರ ನಡೆದ ಒಳನಾಡು ಮೀನುಗಾರರ ರಾಜ್ಯ ಮಟ್ಟದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಗಂಗಾಮತಸ್ಥ ಸಮುದಾಯದ 39 ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಾವು ಬದ್ಧರಾಗಿದ್ದೇವೆ. ಆದರೆ ಮೀಸಲಾತಿ ಒಂದರಿಂದಲೇ ಎಲ್ಲವನ್ನೂ ಸಾಧಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಾಣಬೇಕೆಂದರು.

ಜಾತಿ ವ್ಯವಸ್ಥೆಯಿಂದಾಗಿ ಅನ್ಯಾಯ, ಅವಮಾನಗಳು ನಡೆಯುತ್ತಿದ್ದು, ಎಲ್ಲಾ ಜಾತಿಗಳಿಗೂ ಸಮಾನ ಅವಕಾಶ ಸಿಗಬೇಕಾದರೆ, ಅಂಬೇಡ್ಕರ್, ಬಸವಣ್ಣ ಅವರ ಸಾಮಾಜಿಕ ನ್ಯಾಯಾದ ಸಿದ್ಧಾಂತಗಳು ಅನುಷ್ಠಾನಗೊಳ್ಳಬೇಕು. ಸಂವಿಧಾನದಲ್ಲಿರುವ ಸಾಮಾಜಿಕ ನ್ಯಾಯ ಜಾರಿಯಾಗಬೇಕು ಎಂದರು.

ನಾನು ಅಂಬೇಡ್ಕರ್ ಮತ್ತು ಬಸವಣ್ಣನವರ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದೇನೆ. ಬಸವಣ್ಣನವರ ಜನ್ಮ ದಿನದಂದೇ ಅಧಿಕಾರ ಸ್ವೀಕರಿಸಿರುವುದರಿಂದ ಅವರ ಕನಸಿನ ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸಲು ಬದ್ಧನಾಗಿದ್ದೇನೆ ಎಂದ ಅವರು, ನಾನು ಓಟ್ ಬ್ಯಾಂಕ್ಗಾಗಿ ಯಾವುದೇ ಯೋಜನೆಗಳನ್ನು ರೂಪಿಸುತ್ತಿಲ್ಲ. ಬದಲಾಗಿ ಎಲ್ಲಾ ವರ್ಗದವರ ನಡುವೆ ಇರುವ ಅಸಮಾನತೆಯನ್ನು ಹೋಗಲಾಡಿಸಿ ಸಮ ಸಮಾಜ ನಿರ್ಮಾಣ ಮಾಡುವುದು ನಮ್ಮ ಧ್ಯೇಯವಾಗಿದೆ ಎಂದು ಹೇಳಿದರು.

ಹಿಂದುಳಿದವರು, ದಲಿತರು, ರೈತರು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಕಾರ್ಮಿಕರೂ ಸೇರಿದಂತೆ ಎಲ್ಲ ವರ್ಗದ ಜನರ ಹಿತ ಕಾಯುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಎಲ್ಲ ವರ್ಗದವರೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಸ್ವಾತಂತ್ರ್ಯ ಇರುವಂತೆ ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಮುನ್ನಡೆಯನ್ನು ಹೊಂದಬೇಕು ಎಂದು ಆಶಿಸಿದರು.
ಕಾಯಕ ಸಮುದಾಯದವರು ತಮ್ಮ ಕುಲವೃತ್ತಿಯನ್ನು ಮುಂದುವರಿಸಿಕೊಂಡು ಹೋಗುವುದನ್ನು ನಾನು ಬೇಡ ಎನ್ನುವುದಿಲ್ಲ, ಆದರೆ, ಅವರ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವುದರ ಮೂಲಕ ಸಾಮಾಜಿಕ ಪರಿವರ್ತನೆಗೆ ನಾಂದಿಯಾಗಬೇಕು ಎಂದು ಹೇಳಿದರು

See also  ಒಂದೇ ಹುಡುಗಿಗಾಗಿ ಇಬ್ಬರು ಯುವಕರ ಮಾರಾಮಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು