ಕಾಸರಗೋಡು: ದಿಢೀರ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಮೂಕಂಪಾರೆಯ ಶ್ರುತಿ(17) ಮೃತಪಟ್ಟ ವಿದ್ಯಾರ್ಥಿನಿ. ಕುಂಬಳೆ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಅಕ್ಟೊಬರ್ 26ರಂದು ಈಕೆಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾಳೆ.