News Kannada
Wednesday, September 28 2022

ಕರ್ನಾಟಕ

ಸರಕಾರದಿಂದ ವಿವಿಧ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು: ದೇಶಪಾಂಡೆ - 1 min read

Photo Credit :

ಸರಕಾರದಿಂದ ವಿವಿಧ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು: ದೇಶಪಾಂಡೆ

ಕಾರವಾರ: ಸರಕಾರ ಆರೋಗ್ಯ, ಶಿಕ್ಷಣ, ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಮ ಸೇರಿದಂತೆ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ತರುವಲ್ಲಿ ಸಾಕಷ್ಟು ಶ್ರಮಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್. ವಿ. ದೇಶಪಾಂಡೆ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಅಂಗವಾಗಿ
ಧ್ವಜಾರೋಹಣ ನಡೆಸಿ ಬಳಿಕ ಮಾತನಾಡಿದ ಅವರು, ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾಸೋದ್ಯಮದ ಮೂಲಭೂತ ಸೌಕರ್ಯ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಸುಮಾರು ೨೫೦ ಕೋಟಿ ರೂ. ನೀಡಲಾಗಿದೆ ಎಂದರು.

ಸರಕಾರ ಹಿಂದುಳಿದವರ, ದಿನ ದಲಿತರ, ಶೈಕ್ಷಣಿಕವಾಗಿ ಮಕ್ಕಳ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಿದೆ. ಜಿಲ್ಲೆಯಲ್ಲಿ ಹಣದ ಕೊರತೆಯಾಗದಂತೆ ಅಭಿವೃದ್ಧಿ ಕೆಲಸ ನಡೆಸಲಾಗುತ್ತಿದೆ. ಈಗಾಗಲೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ೧೦ ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗಿದೆ. ಸುಮಾರು ೬೦೦ ಗ್ರಾಮಗಳಿಗೆ ಕ್ರೀಡಾ ಸಾಮಗ್ರಿಗಳ ವಿತರಣೆ ಮಾಡಲಾಗುತ್ತಿದೆ. ಇಲ್ಲದೆ ಆಸ್ಪತ್ರೆ, ಸೇತುವೆಗಳ ಮಂಜೂರಿ, ರಸ್ತೆ ಕಾಮಗಾರಿ ನಡೆಸಲಾಗಿದೆ ಎಂದರು.

ಜಿಲ್ಲೆಯ ಕಲೆ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಕರಾವಳಿ ಉತ್ಸವವನ್ನು ನಡೆಸಲಾಗುತ್ತಿದೆ. ಇದಲ್ಲದೆ ಅಂತರರಾಷ್ಟ್ರೀಯ ಸ್ಕೂಬಾ ಡೈವಿಂಗ್ ಉತ್ಸವ, ಹಾರ್ನ್ಬೆಲ್ ಉತ್ಸವ, ಕದಂಬೋತ್ಸವ ನಡೆಸಲು ತಿರ್ಮಾನಿಸಲಾಗಿದೆ. ಅಲ್ಲದೆ ಜನರ ಬಹು ನೀರಿಕ್ಷಿತ ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗ, ಅಳ್ವಾವರ ಅಂಬೇವಾಡಿ ಪ್ಯಾಸೆಂಜರ್ ರೈಲು ಓಡಾಟ ಮತ್ತು ಸಿದ್ದಾಪುರ-ಶಿರಸಿಗೆ ರೈಲು ಸಂಪರ್ಕ ಕಲ್ಪಿಸುವ ಕುರಿತು ಕೇಂದ್ರ ರೈಲ್ವೆ ಸಚಿವರಿಗೆ ಒತ್ತಾಯಿಸಲಾಗುವುದು ಎಂದರು.

ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ಅನುದಾನ ಜನಸಂಖ್ಯೆ ಆಧಾರದ ಮೇಲೆ ಬಿಡುಗಡೆಯಾಗುತ್ತಿದ್ದು, ಇದು ಭೌಗೋಳಿಕವಾಗಿ ವಿಸ್ತಾರವಾಗಿರುವ ನಮ್ಮ ಜಿಲ್ಲೆಗೆ ಅನ್ಯಾಯವಾಗುತ್ತಿದೆ. ಈ ನಿಟ್ಟಿನಲ್ಲಿ ವಿಶೇಷವಾಗಿ ಪರಿಗಣಿಸಿ ಹೆಚ್ಚಿನ ಅನುದಾನಕ್ಕೆ ಒತ್ತಾಯಿಸಲಾಗುವುದು ಎಂದರು.

See also  ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು