News Kannada
Wednesday, October 05 2022

ಕರ್ನಾಟಕ

ಶೀಘ್ರವೇ ಶಾಲಾ ಶಿಕ್ಷಕರ ನೇಮಕಾತಿ: ಸಚಿವ ತನ್ವೀರ್ ಸೇಠ್ - 1 min read

Photo Credit :

ಶೀಘ್ರವೇ ಶಾಲಾ ಶಿಕ್ಷಕರ ನೇಮಕಾತಿ: ಸಚಿವ ತನ್ವೀರ್ ಸೇಠ್

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರ ಕೊರತೆಯನ್ನು ನೀಗಿಸಲು 18 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರದ ಅನುಮತಿ ದೊರೆತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 7900 ಪ್ರಾಥಮಿಕ ಶಿಕ್ಷಕರು 1627 ಪ್ರೌಢಶಾಲೆ ಶಿಕ್ಷಕರನ್ನು ನೇಮಿಸಲಾಗಿದ್ದು, ಈ ವರ್ಷ 4 ಸಾವಿರ, ಮುಂದಿನ ವರ್ಷ ಇನ್ನೂ ನಾಲ್ಕು ಸಾವಿರ ಶಿಕ್ಷಕರ ಹುದ್ದೆಗೆ ನೇಮಕಾತಿ ಮಾಡಲಾಗುತ್ತದೆ ಎಂದರು.

ನ.11ರಂದು ನಾಲ್ಕು ಸಾವಿರ ಶಿಕ್ಷಕರ ನೇಮಕಾತಿಗೆ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಜನವರಿ ಅಥವಾ ಫೆಬ್ರವರಿ ವೇಳೆಗೆ ನೇಮಕಾತಿ ಪೂರ್ಣಗೊಳಿಸಲಾಗುವುದು. ದೈಹಿಕ ಶಿಕ್ಷಕರು ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕೆಲವು ತಾಂತ್ರಿಕ ಸಮಸ್ಯೆಗಳಿದ್ದು, ಅವುಗಳನ್ನು ನಿವಾರಿಸಲು ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿ ತರಲಾಗುವುದು ಎಂದರು.

ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಅವರ ಸಮಿತಿ ನೀಡಿರುವ 21 ಶಿಫಾರಸ್ಸುಗಳ ವರದಿಯನ್ನು ಅನುಷ್ಠಾನಕ್ಕೆ ತರಲು ಚಿಂತನೆ ನಡೆಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಶೈಕ್ಷಣಿಕ ಇತಿಹಾಸದಲ್ಲಿ ಮೊದಲ ಬಾರಿಗೆ ಶಾಲೆ ಆರಂಭಕ್ಕೂ ಮುನ್ನವೇ ಪಠ್ಯ ಪುಸ್ತಕಗಳನ್ನು ನಿಗದಿತ ಸಮಯಕ್ಕೆ ನಮ್ಮ ಸರ್ಕಾರ ಪೂರೈಕೆ ಮಾಡಿದೆ. 1 ರಿಂದ 10ನೆ ತರಗತಿವರೆಗೆ ಪಠ್ಯ ಕ್ರಮವನ್ನು ಪರಿಷ್ಕರಣೆ ಮಾಡಿ ಪರಿಷ್ಕೃತ ಪಠ್ಯ ಕ್ರಮವುಳ್ಳ ಪುಸ್ತಕಗಳನ್ನು ನಿಗದಿತ ಅವಧಿಯೊಳಗೆ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದು ಹೇಳಿದರು.

ಮುದ್ರಣಾಲಯದಲ್ಲಿ ಸಮಸ್ಯೆ ಎದುರಾದಾಗ ಅದನ್ನು ನಿವಾರಿಸಲು ಅಧಿಕಾರಿಗಳ ಸಮಿತಿ ರಚಿಸಿ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಯಿತು ಎಂದು ಸಚಿವರು ತಿಳಿಸಿದರು.

ನೇಕಾರರ ಕೈಮಗ್ಗಗಳಿಂದ ನೇಯ್ದ ಬಟ್ಟೆಗಳ ಸಮವಸ್ತ್ರವನ್ನು ಮಕ್ಕಳಿಗೆ ಪೂರೈಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಮೂರು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.ಕೈ ಮಗ್ಗ ನೇಕಾರರು ಸಿದ್ಧಪಡಿಸುವ ಎಲ್ಲ ಬಟ್ಟೆಗಳನ್ನು ಸರ್ಕಾರ ಸಮವಸ್ತ್ರಕ್ಕಾಗಿ ಖರೀದಿಸಲು ಸಿದ್ಧವಿದೆ ಎಂದು ತಿಳಿಸಿದರು.

ಮಕ್ಕಳ ಕಲಿಕಾ ಸಾಮಥ್ರ್ಯ ಮತ್ತು ಶಿಕ್ಷಕರ ಬೋಧನಾ ಕೌಶಲ್ಯವನ್ನು ಪರೀಕ್ಷಿಸಲು ಕಳೆದ ವರ್ಷ 4 ರಿಂದ 6ನೆ ತರಗತಿ ವಿದ್ಯಾರ್ಥಿಗಳಿಗೆ ಸಾಮಥ್ರ್ಯ ಮಾಪನ ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ 4 ರಿಂದ 9ನೆ ತರಗತಿ ವಿದ್ಯಾರ್ಥಿಗಳಿಗೆ ನ.3 ರಿಂದ 9ರ ವರೆಗೆ ಪರೀಕ್ಷೆ ನಡೆಸಲಾಗುತ್ತದೆ.ಇದರಿಂದ ರಾಜ್ಯದ 38 ಲಕ್ಷ ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯವನ್ನು ಅಳೆದಂತಾಗುತ್ತದೆ ಎಂದು ತನ್ವೀರ್ ಸೇಠ್ ಹೇಳಿದರು.

ಈ ವರ್ಷದಿಂದ ಹೆಣ್ಣು ಮಕ್ಕಳಿಗೆ ಚೂಡಿದಾರ್ ಸಮವಸ್ತ್ರ ನೀಡಲಾಗುತ್ತಿದೆ. 8ನೇ ತರಗತಿಯ 5.24 ಲಕ್ಷ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡಲಾಗಿದೆ. ಮಕ್ಕಳ ಕಂಪ್ಯೂಟರ್ ಕಲಿಕೆಗೆ ಒತ್ತು ನೀಡಲಾಗಿದೆ. ಇಂಗ್ಲಿಷ್ ಭಾಷೆಯಲ್ಲಿರುವ ಕಲಿಕಾ ಮಾಹಿತಿ ನೀಡುವ ವಿಡಿಯೋಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಲಾಗುವುದು ಎಂದರು.

See also  ವಿವಾಹಕ್ಕೆ ಮುನ್ನವೇ ವರ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು