News Kannada
Tuesday, October 04 2022

ಕರ್ನಾಟಕ

ರಾಜ್ಯಾದ್ಯಂತ ವೈದ್ಯರ ಮುಷ್ಕರ: ಹುನಗುಂದದಲ್ಲಿ ಹೆರಿಗೆ ಮಾಡಲು ನಿರಾಕರಿಸಿದ ಆಸ್ಪತ್ರೆ - 1 min read

Photo Credit :

ರಾಜ್ಯಾದ್ಯಂತ  ವೈದ್ಯರ ಮುಷ್ಕರ: ಹುನಗುಂದದಲ್ಲಿ ಹೆರಿಗೆ ಮಾಡಲು ನಿರಾಕರಿಸಿದ ಆಸ್ಪತ್ರೆ

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಕರ್ನಾಟಕ ಖಾಸಗಿ ವೈದ್ಯಕೀಯ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಇಂದು ರಾಜ್ಯಾದಾದ್ಯಂತ ಮುಷ್ಕರಕ್ಕೆ ಇಳಿದಿದ್ದಾರೆ. ಮುಷ್ಕರದಿಂದಾಗಿ ಹುನಗುಂದ ತಾಲೂಕಿನ ಇಳಕಲ್ಲ ಪಟ್ಟಣದಲ್ಲಿ ಹೆರಿಗೆಗಾಗಿ ಬಂದ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿರುವ ಅಮಾನವೀಯ ಘಟನೆ ನಡೆದಿದೆ.

ತಾಂಡಾದ ಚೈತ್ರಾ(25) ಎಂಬುವರು ಚಿಕಿತ್ಸೆ ಸಿಗದೇ ಪರದಾಡುತ್ತಿರುವ ಮಹಿಳೆ. ಚೈತ್ರಾಅವರು ಪ್ರತಿ ತಿಂಗಳು ಪರೀಕ್ಷೆ ಮಾಡಿಸಿಕೊಂಡಿರುವ ಇಳಕಲ್ಲಿನ ಖಾಸಗಿ ಆಸ್ಪತ್ರೆಯಲ್ಲೇ ಹೆರಿಗೆಗಾಗಿ ಕರೆತರಲಾಗಿತ್ತು. ಆದರೆ ಇದೀಗ ಖಾಸಗಿ ವೈದ್ಯರ ಮುಷ್ಕರದಿಂದಾಗಿ ಹೆರಿಗೆ ಮಾಡಲು ವೈದ್ಯರು ನಿರಾಕರಿಸಿದ್ದು ಚೈತ್ರ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಳೆದ ಜುಲೈನಲ್ಲಿ ಮುಷ್ಕರಕ್ಕೆ ಇಳಿದಿದ್ದ ವೈದ್ಯರು ಈಗ ಮತ್ತೆ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಹೊರಟ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ.

ಮುಷ್ಕರದಿಂದ ಇಂದು ಎಲ್ಲ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದೆ. ಒಪಿಡಿ, ಒಟಿ ಸಂಪೂರ್ಣ ಸ್ಥಗಿತವಾಗಲಿದೆ. ಕೇವಲ ಆಕ್ಸಿಡೆಂಟ್ ಹಾಗೂ ಗರ್ಭಿಣಿಯರ ಕೇಸ್ ಮಾತ್ರ ಆಟೆಂಡ್ ಮಾಡೋದಾಗಿ ವೈದ್ಯರು ಹೇಳಿದ್ದಾರೆ.

See also  ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಕೊಲೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು