News Kannada
Sunday, September 25 2022

ಕರ್ನಾಟಕ

ನಗರಸಭಾ ಅಧ್ಯಕ್ಷರ ವಿರುದ್ಧ ಗರಂ ಆದ ಬಿಜೆಪಿ ಸದಸ್ಯರು - 1 min read

Photo Credit :

ನಗರಸಭಾ ಅಧ್ಯಕ್ಷರ ವಿರುದ್ಧ ಗರಂ ಆದ ಬಿಜೆಪಿ ಸದಸ್ಯರು

ಮಡಿಕೇರಿ: ಮಡಿಕೇರಿ ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಅವರು ಈ ಹಿಂದೆ ಭ್ರಷ್ಟಾಚಾರದ ಕುರಿತು ನೀಡಿದ ಪತ್ರಿಕಾ ಹೇಳಿಕೆ ಇಂದು ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಬಿಜೆಪಿ ಸದಸ್ಯರ ಸಹನೆಯನ್ನು ಕೆಣಕಿತು.

ನಗರಸಭಾ ಸಭಾಂಗಣದಲ್ಲಿ ಕಾವೇರಮ್ಮ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯ ಆರಂಭದಲ್ಲೇ ವಿಷಯ ಪ್ರಸ್ತಾಪಿಸಿದ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಬಿಜೆಪಿಯ ಕೆ.ಎಸ್.ರಮೇಶ್ ಹಾಗೂ ಇತರ ಬಿಜೆಪಿ ಸದಸ್ಯರು ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡರು. ನಗರದ ಸಮಸ್ಯೆಗಳ ಬಗ್ಗೆ ನಾವು ಅಸಮಾಧಾನ ವ್ಯಕ್ತಪಡಿಸಿ ಪತ್ರಿಕಾಗೋಷ್ಠಿಯಲ್ಲಿ ನಿಮ್ಮ ರಾಜೀನಾಮೆಗಾಗಿ ಒತ್ತಾಯಿಸಿದ್ದೆವು. ಆದರೆ ನೀವು ಭ್ರಷ್ಟಾಚಾರಕ್ಕೆ ಬೆಂಬಲ ನೀಡದ ಕಾರಣ ನನ್ನ ರಾಜೀನಾಮೆಯನ್ನು ಕೇಳುತ್ತಿದ್ದಾರೆ ಎಂದು ನಮ್ಮ ಮೇಲೆ ಗಂಭೀರ ಆರೋಪ ಮಾಡಿದ್ದೀರಿ. ಯಾರು ಭ್ರಷ್ಟಾಚಾರ ಮಾಡಿದ್ದಾರೆ ಎನ್ನುವುದನ್ನು ಸಾಬೀತುಪಡಿಸಿ ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದರು. ಬಾವಿಗಳಿದ ಸದಸ್ಯರು ಅಧ್ಯಕ್ಷರು ಸ್ಪಷ್ಟೀಕರಣ ನೀಡುವವರೆಗೆ ಇಲ್ಲಿಂದ ಕದಲುವುದಿಲ್ಲವೆಂದು ಎಚ್ಚರಿಕೆ ನೀಡಿದರು.

ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಅವರಿಗೆ ಕಾಂಗ್ರೆಸ್ ಸದಸ್ಯರುಗಳಾದ ಹೆಚ್.ಎಂ.ನಂದಕುಮಾರ್ ಹಾಗೂ ಪ್ರಕಾಶ್ ಆಚಾರ್ಯ ಬೆಂಬಲ ಸೂಚಿಸಿದರು. ಉಭಯ ಕಡೆಗಳಲ್ಲಿ ಪರಸ್ಪರ ಮಾತಿನ ಚಕಮಕಿ ನಡೆಯಿತು.
ಅಧ್ಯಕ್ಷರು ಮಾತನಾಡಿ ಪತ್ರಿಕೆಯ ಮೂಲಕವೇ ಸ್ಪಷ್ಟೀಕರಣ ನೀಡುತ್ತೇನೆ, ಸಭೆಯಲ್ಲಿ ಈ ಬಗ್ಗೆ ಮಾತನಾಡುವುದಿಲ್ಲವೆಂದರು.

ಇದರಿಂದ ತೃಪ್ತರಾಗದ ಬಿಜೆಪಿ ಸದಸ್ಯರು ವೇದಿಕೆಯ ಬಳಿಯೇ ಅಸಮಾಧಾನ ವ್ಯಕ್ತಪಡಿಸಿದರಾದರೂ ಉಳಿದ ಕೆಲವು ಸದಸ್ಯರು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು. ನಂತರ ಮಧ್ಯಾಹ್ನದವರೆಗೆ ನಡೆದ ಸಭೆ ಕೇವಲ ಆರೋಪ ಪ್ರತ್ಯಾರೋಪಗಳಿಗೆ ಸೀಮಿತವಾಯಿತೇ ಹೊರತು ಜನಹಿತದ ಯಾವುದೇ ನಿರ್ಣಯಗಳಾಗಲಿಲ್ಲ.

See also  ಬಂಡೀಪುರದಲ್ಲಿ ಪ್ರವಾಸಿಗರಿಗೆ ಹುಲಿಗಳ ದರ್ಶನ..
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು