News Kannada
Sunday, October 02 2022

ಕರ್ನಾಟಕ

ಭ್ರಷ್ಟಾಚಾರ ಪ್ರೋತ್ಸಾಹಿಸದೆ ಪ್ರಾಮಾಣಿಕ ಸೇವೆ ಮಾಡಿ - 1 min read

Photo Credit :

ಭ್ರಷ್ಟಾಚಾರ ಪ್ರೋತ್ಸಾಹಿಸದೆ ಪ್ರಾಮಾಣಿಕ ಸೇವೆ ಮಾಡಿ

ಮಡಿಕೇರಿ: ಸರ್ಕಾರದ ಕೆಲಸ ದೇವರ ಕೆಲಸವಾಗಿದ್ದು, ಸರ್ಕಾರಿ ಕಚೇರಿಗಳಿಗೆ ಬರುವವರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರನ್ನು ಸತಾಯಿಸದೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಆರ್.ಕೆ.ಜಿ.ಎಂ.ಎಂ.ಮಹಾಸ್ವಾಮೀಜಿ ಅವರು ಸಲಹೆ ನೀಡಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ‘ಜಾಗೃತಿ ಅರಿವು’ ಸಪ್ತಾಹದ ಅಂಗವಾಗಿ ನಡೆದ ಕಾನೂನು ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕ ಸೇವೆ ಮಹತ್ತರವಾಗಿದ್ದು, ಭ್ರಷ್ಟಾಚಾರಕ್ಕೆ ಪ್ರೋತ್ಸಾಹಿಸದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕರು ಸರ್ಕಾರಿ ಕಚೇರಿಗಳನ್ನು ಅವಲಂಬಿಸಿದ್ದಾರೆ. ಜೊತೆಗೆ ಸರ್ಕಾರಿ ಕಚೇರಿಗಳು ಸಹ ಸಾರ್ವಜನಿಕರಿಗಾಗಿ ಇರುವುದು ಎಂಬುದನ್ನು ಮರೆಯಬಾರದು. ಆದ್ದರಿಂದ ತಕ್ಷಣ ಕೆಲಸವಾಗಲಿ ಎಂಬ ಉದ್ದೇಶದಿಂದ ಲಂಚ ಕೊಡುವುದು ಸರಿಯಲ್ಲ ಮತ್ತು ಪಡೆಯುವುದು ಸಹ ತಪ್ಪಾಗುತ್ತದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಯೋಚಿಸಬೇಕಿದೆ ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಸಲಹೆ ಮಾಡಿದರು.

ಸಾರ್ವಜನಿಕ ಸೇವೆಯಲ್ಲಿರುವವರು ಹಣದ ಆಸೆ ಆಮಿಷಕ್ಕೆ ಬಲಿಯಾದರೆ ಜೀವನ ಪೂರ್ತಿ ನರಳಬೇಕಾಗುತ್ತದೆ. ಆದ್ದರಿಂದ ಲಂಚದಿಂದ ದೂರವಿರಬೇಕು. ಲಂಚ ಪಡೆಯುವುದು ಸಾಬೀತಾದರೆ ಕನಿಷ್ಠ 4 ವರ್ಷಕ್ಕೂ ಹೆಚ್ಚು ಶಿಕ್ಷೆ ಇದೆ ಎಂದು ನ್ಯಾಯಾಧೀಶರು ಹೇಳಿದರು.

See also  ಕೊಡಗಿನಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು