ಮಡಿಕೇರಿ: ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮನೆ ಮನೆ ಕಡೆಗೆ ಕಾಂಗ್ರೆಸ್ ನಡಿಗೆ ಅಭಿಯಾನವನ್ನು ಚುರುಕುಗೊಳಿಸಿದ್ದು, ಮಾದಾಪುರ ಜಿಲ್ಲಾ ಪಂಚಾಯ್ತಿ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಈ ವೇಳೆ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷರಾದ ಶಿವು ಮಾದಪ್ಪ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ನ ಉಸ್ತುವಾರಿ ಕಾನೆಹಿತ್ಲು ಮೊಣ್ಣಪ್ಪ ಮಾತನಾಡಿ, ಮನೆ ಮನೆ ಕಡೆಗೆ ಕಾಂಗ್ರೆಸ್ ನಡಿಗೆ ಕಾರ್ಯಕ್ರಮವನ್ನು ಮತ್ತಷ್ಟು ಬಿರುಸುಗೊಳಿಸಲಾಗುವುದೆಂದರು. ಅಭಿಯಾನ ಸಂದರ್ಭ ಪಕ್ಷದ ಪರವಾಗಿ ಜನರ ಬೆಂಬಲ ವ್ಯಕ್ತವಾಗುತ್ತಿದೆಯೆಂದು ಅವರು ಹೇಳಿದರು.