News Kannada
Sunday, September 25 2022

ಕರ್ನಾಟಕ

ಟಿಪ್ಪು ಜಯಂತಿ ಶಾಂತಿಯುತ ಆಚರಣೆಗೆ ಸಿದ್ಧತೆ: ಎಡಿಜಿಪಿ - 1 min read

Photo Credit :

ಟಿಪ್ಪು ಜಯಂತಿ ಶಾಂತಿಯುತ ಆಚರಣೆಗೆ ಸಿದ್ಧತೆ: ಎಡಿಜಿಪಿ

ಮಡಿಕೇರಿ: ಸರ್ಕಾರದ ನಿರ್ದೇಶನದಂತೆ ನ.10 ರಂದು ಯಾವುದೇ ಅಡೆತಡೆಯಿಲ್ಲದೆ ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಆಚರಿಸಲು ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಎಡಿಜಿಪಿ ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಟಿಪ್ಪು ಜಯಂತಿ ಸಂಬಂಧ ಜಿಲ್ಲೆಯಲ್ಲಿ ಪರ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವುದು ಸರ್ಕಾ ರದ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಅಗತ್ಯ ಬಂದೋ ಬಸ್ತ್ ಮಾಡಲಾಗಿದೆ ಎಂದು ಭಾಸ್ಕರ್ ರಾವ್ ಅವರು ಹೇಳಿದರು.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಅಧಿಕಾರ ಎಲ್ಲರಿಗೂ ಇದೆ. ಆದರೆ ಕಾನೂನು ವ್ಯಾಪ್ತಿ ಮೀರಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ವಿವರಿಸಿದರು.

ನಿಯಮ ಉಲ್ಲಂಘಿಸುವುದು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಸ್ವಯಂ ಪ್ರೇರಿತ ಬಂದ್ ಮಾಡುವುದು ಸರಿಯಲ್ಲ. ಸರ್ಕಾರದ ಕಾರ್ಯಕ್ರಮ ಸಂವಿಧಾನಾತ್ಮಕವಾಗಿ ನಡೆಯಲಿದೆ. ಶಾಲಾ-ಕಾಲೇಜುಗಳು ಎಂದಿನಂತೆ ನಡೆಯಲಿವೆ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಇದ್ದರು.

See also  ಚಾಮರಾಜೇಶ್ವರ ರಥಕ್ಕೆ ಬೆಂಕಿ: ಫೆ.20ರಂದು ಚಾಮರಾಜನಗರ ಬಂದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು