News Kannada
Tuesday, September 27 2022

ಕರ್ನಾಟಕ

ವೀರನಾಡು ರಕ್ಷಣಾ ವೇದಿಕೆಯಿಂದ ನ.19ರಂದು ಕಬಡ್ಡಿ ಪಂದ್ಯಾವಳಿ - 1 min read

Photo Credit :

ವೀರನಾಡು ರಕ್ಷಣಾ ವೇದಿಕೆಯಿಂದ ನ.19ರಂದು ಕಬಡ್ಡಿ ಪಂದ್ಯಾವಳಿ

ಮಡಿಕೇರಿ: ಕನ್ನಡ ರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ವೀರನಾಡು ರಕ್ಷಣಾ ವೇದಿಕೆ ವತಿಯಿಂದ ನವೆಂಬರ್ 19ರಂದು ನಗರದ ಗಾಂಧಿ ಮೈದಾನದಲ್ಲಿ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ ನಡೆಯಲಿದೆ ಎಂದು ವೇದಿಕೆ ಅಧ್ಯಕ್ಷರಾದ ಹರೀಶ್ ಜಿ. ಆಚಾರ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸಕ್ತ ತಂಡಗಳು ಹೆಸರನ್ನು ನ.18ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು. ಪಂದ್ಯಾವಳಿ ನಿಗದಿತ ದಿನದಂದು ಬೆಳಗ್ಗೆ 10 ಗಂಟೆಯಿಂದ ಸಂಜೆಯವರೆಗೆ ನಡೆಯಲಿದೆ. ಜಿಲ್ಲಾ ವ್ಯಾಪ್ತಿಯ 25 ರಿಂದ 30 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಪ್ರವೇಶ ಶುಲ್ಕವನ್ನು ಪ್ರತಿ ತಂಡಕ್ಕೆ ಸಾವಿರ ರೂ.ನಿಗದಿಪಡಿಸಿರುವುದಾಗಿ ಹೇಳಿದರು.

ಪಂದ್ಯಾವಳಿ ವಿಜೇತ ತಂಡಕ್ಕೆ 10 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ 5 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ, ತೃತೀಯ ಬಹುಮಾನವಾಗಿ 3 ಸಾವಿರ ರೂ. ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದೆಂದು ಹರೀಶ್ ಆಚಾರ್ಯ ತಿಳಿಸಿದರು.

ರಾಜ್ಯೋತ್ಸವ ಕಾರ್ಯಕ್ರಮ
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ವೀರನಾಡು ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳು ನವೆಂಬರ್ 26ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಅಂದು ಕನ್ನಡ ನಾಡು, ನುಡಿಯ ಹಾಡುಗಳು, ನೃತ್ಯ ವೈವಿಧ್ಯ, ಏಕಪಾತ್ರಾಭಿನಯ ಸೇರಿದಂತೆ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು ನ.20 ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬೇಕು, ವಯಸ್ಸಿನ ಮಿತಿ ಇರುವುದಿಲ್ಲವೆಂದರು.

See also  ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4,976
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು