News Kannada
Monday, September 26 2022

ಕರ್ನಾಟಕ

ಸ್ಮಶಾನ ವಿವಾದ: ಬುಡಕಟ್ಟು ಆಯೋಗದ ಅಧ್ಯಕ್ಷ ಮುನಿಯಪ್ಪ ಭೇಟಿ - 1 min read

Photo Credit :

ಸ್ಮಶಾನ ವಿವಾದ: ಬುಡಕಟ್ಟು ಆಯೋಗದ ಅಧ್ಯಕ್ಷ ಮುನಿಯಪ್ಪ ಭೇಟಿ

ಮಡಿಕೇರಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನ.13ರಂದು ನಡೆಯುವ ಸಭೆಯಲ್ಲಿ ಪಾಲೇಮಾಡಿನ ಸ್ಮಶಾನ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದೆಂದು ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟು ಆಯೋಗದ ಅಧ್ಯಕ್ಷ ಎ.ಮುನಿಯಪ್ಪ ತಿಳಿಸಿದ್ದಾರೆ.

ಹೊದ್ದೂರು ಗ್ರಾಮದ ಪಾಲೇಮಾಡುವಿನಲ್ಲಿ ಸ್ಮಶಾನದ ಜಾಗಕ್ಕಾಗಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಅವರು ವಿವಾದಿತ ಸ್ಥಳವನ್ನು ಪರಿಶೀಲಿಸಿದರು.

ಕಳೆದ ಹದಿನೈದು ದಿನಗಳಿಂದ ಪಾಲೇಮಾಡು ನಿವಾಸಿಗಳು ಸ್ಮಶಾನ ಜಾಗಕ್ಕೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲಾಡಳಿತದಿಂದ ಸೂಕ್ತ ಸ್ಪಂದನೆ ದೊರೆತ್ತಿಲ್ಲವೆಂದು ಪ್ರತಿಭಟನಾಕಾರರು ಆರೋಪಿಸಿದರು.

ಬಹುಜನ ಕಾರ್ಮಿಕರ ಸಂಘದ ರಾಜ್ಯ ಕಾರ್ಯದರ್ಶಿ ಮೊಣ್ಣಪ್ಪ ಮಾತನಾಡಿ, ಜಿಲ್ಲಾಡಳಿತ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ಹಿಂದೆ ಅನೇಕ ಬಾರಿ ಇದೆ ಸ್ಮಶಾನಕ್ಕೆ ಅಹೋರಾತ್ರಿ ಧರಣಿ, ಉಪವಾಸ ಸತ್ಯಗ್ರಹವನ್ನು ಕೈಗೊಂಡು ನಿವಾಸಿಗಳು ಹೋರಾಟ ನಡೆಸಿದರೂ ಜಿಲ್ಲಾಡಳಿತ ಗಮನ ಹರಿಸುತ್ತಿಲ್ಲವೆಂದು ಆರೋಪಿಸಿದರು.  

ಆಯೋಗದ ಅಧ್ಯಕ್ಷ ಎ.ಮುನಿಯಪ್ಪ ಮಾತನಾಡಿ, ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

ಆಯೋಗದ ಅಧ್ಯಕ್ಷ ಎ. ಮುನಿಯಪ್ಪ ಭೇಟಿ ನೀಡಿ,  ಸ್ಮಶಾನ ಜಾಗ, ಶವಸಂಸ್ಕಾರ ನಡೆಸಿದ ಸ್ಥಳ, ಅಂಗನವಾಡಿ ಕೇಂದ್ರ, ನಿವಾಸಿಗಳು ವಾಸವಿರುವ ಗುಡಿಸಲುಗಳನ್ನು ಪರಿಶೀಲಿಸಿದರು.  

ಈ ಸಂದರ್ಭ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಯಾದೇವಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಚೆನ್ನಬಸವಯ್ಯ ಮೊದಲಾದವರಿದ್ದರು.

See also  ಮಾ.20 ರಂದು ಶಿವಮೊಗ್ಗದಲ್ಲಿ ನಡೆಯಲಿರುವ ರೈತ ಮಹಾಪಂಚಾಯತ್ ಗೆ ಉತ್ತಮ ರೆಸ್ಪಾನ್ಸ್:  ರೈತ ಮುಖಂಡ ಬಸವರಾಜಪ್ಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು