News Kannada
Saturday, October 01 2022

ಕರ್ನಾಟಕ

ಮಡಿಕೇರಿ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಲಿದೆ ನಗರಸಭೆ - 1 min read

Photo Credit :

ಮಡಿಕೇರಿ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಲಿದೆ ನಗರಸಭೆ

ಮಡಿಕೇರಿ: ಕಳೆದ ಒಂದು ವರ್ಷದಿಂದ ವಾಹನ ಚಾಲಕರಿಗೆ ದುಸ್ವಪ್ನವಾಗಿ ಕಾಡಿದ್ದ ಮಡಿಕೇರಿ ನಗರದ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯಕ್ಕೆ ನ.20ರಿಂದ ಚಾಲನೆ ದೊರೆಯಲಿದೆ.

ನಗರದ 23 ವಾರ್ಡ್ ಗಳ ಎಲ್ಲಾ ರಸ್ತೆಗಳ ಗುಂಡಿ ಮುಚ್ಚುವ ಕಾಮಗಾರಿ 9.80 ಲಕ್ಷ ರೂ.ಗಳಲ್ಲಿ ನಡೆಯಲಿದೆ. ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಗುತ್ತಿಗೆದಾರರಾದ ಫಯಾಜ್ ಹಾಗೂ ಸುಬ್ರಮಣಿ ತಲಾ 4.90 ಲಕ್ಷ ರೂ.ಗಳಲ್ಲಿ ರಸ್ತೆ ದುರಸ್ತಿ ಮಾಡಲಿದ್ದಾರೆ. ಮಳೆಗಾಲ ಕಳೆದರೂ ಒಂದು ವರ್ಷದಿಂದ ಗುಂಡಿ ಮುಚ್ಚುವ ಕಾರ್ಯಕ್ಕೆ ನಗರಸಭೆ ಕ್ರಮ ಕೈಗೊಂಡಿರಲಿಲ್ಲ. ಸಾರ್ವಜನಿಕರು ಹಾಗೂ ವಿರೋಧ ಪಕ್ಷಗಳ ಸದಸ್ಯರಿಂದ ತೀವ್ರ ಟೀಕೆಗೆ ಗುರಿಯಾದರೂ ರಸ್ತೆ ದುರಸ್ತಿಗೆ ಆಡಳಿತ ಮಂಡಳಿ ಮನಸ್ಸು ಮಾಡಿರಲಿಲ್ಲ. ದಸರಾ ಸಂದರ್ಭದಲ್ಲಿ ಹಾಕಿದ್ದ ತೇಪೆ ಮತ್ತೆ ಸುರಿದ ಅಕಾಲಿಕ ಮಳೆಗೆ ಕೊಚ್ಚಿ ಹೋಗಿತ್ತು. ನಗರದಲ್ಲಿ ವಾಹನಗಳು ಮಾತ್ರವಲ್ಲದೆ ಪಾದಚಾರಿಗಳು ಕೂಡ ಓಡಾಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆದರೆ ಯುಜಿಡಿ ಕಾಮಗಾರಿಯ ಅಡ್ಡಿ, ಆತಂಕಗಳಿಂದಾಗಿ ನಗರಸಭೆ ಕೂಡ ಅಸಹಾಯಕ ಪರಿಸ್ಥಿತಿಯನ್ನು ಎದುರಿಸುತ್ತಿತ್ತು. ಸಾರ್ವಜನಿಕರಿಂದ ನಿರಂತರ ಟೀಕೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ತಡವಾಗಿಯಾದರೂ ಎಚ್ಚೆತ್ತುಕೊಂಡ ನಗರಸಭೆ ಗುಂಡಿ ಮುಚ್ಚುವ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸೋಮವಾರದಿಂದ ದುರಸ್ತಿ ಕಾರ್ಯ ಆರಂಭಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದೆ.

ಯುಜಿಡಿ ಕಾಮಗಾರಿಯಿಂದ ಉಂಟಾಗಿರುವ ಗುಂಡಿಗಳನ್ನು ಯುಜಿಡಿ ಗುತ್ತಿಗೆದಾರರೇ ಮುಚ್ಚಲಿದ್ದಾರೆ ಎಂದು ತಿಳಿಸಿರುವ ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಉಳಿದ ಕಾಮಗಾರಿಯನ್ನು ಇಬ್ಬರು ಗುತ್ತಿಗೆದಾರರು ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಮುಂದಿನ ಒಂದು ತಿಂಗಳೊಳಗೆ ನಗರದ 23 ವಾರ್ಡ್ ಗಳ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

See also  ಮತ್ತೊಮ್ಮೆ ಅಮೇರಿಕಾದಿಂದ ಭಾರತಕ್ಕೆ ಬೆಂಬಲ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು