News Kannada
Thursday, October 06 2022

ಕರ್ನಾಟಕ

ಕೊಡಗಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀಸುಬ್ರಹ್ಮಣ್ಯ ಷಷ್ಠಿ ಆಚರಣೆ - 1 min read

Photo Credit :

ಕೊಡಗಿನಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀಸುಬ್ರಹ್ಮಣ್ಯ ಷಷ್ಠಿ ಆಚರಣೆ

ಮಡಿಕೇರಿ: ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶ್ರೀಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀಸುಬ್ರಮಣ್ಯ ಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಮಹಾಪೂಜೆ, ಮಹಾಮಂಗಳಾರತಿ ನಡೆಯಿತು. ನೆರೆದಿದ್ದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.

ನಗರದ ಅಶ್ವತ್ಥನಕಟ್ಟೆಯಲ್ಲೂ ನಾಗಾರಾಧನೆಯ ಮೂಲಕ ಷಷ್ಠಿಯನ್ನು ಆಚರಿಸಲಾಯಿತು. ಶಕ್ತಿ ದೇವತೆಗಳಾದ ಕುಂದುರುಮೊಟ್ಟೆ ಶ್ರೀಚೌಟಿ ಮಾರಿಯಮ್ಮ ದೇವಾಲಯ, ಶ್ರೀಕಂಚಿಕಾಮಾಕ್ಷಿಯಮ್ಮ, ಶ್ರೀದಂಡಿನ ಮಾರಿಯಮ್ಮ ಹಾಗೂ ಶ್ರೀಕೋಟೆಮಾರಿಯಮ್ಮ ದೇವಾಲದಲ್ಲಿರುವ ನಾಗಬನದಲ್ಲಿ ಶ್ರೀಸುಬ್ರಹ್ಮಣ್ಯ ಸ್ವಾಮಿ ಷಷ್ಠಿಯನ್ನು ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ನಗರದ ಶ್ರೀಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವ ದೇವಾಲಯದ ಆವರಣದಲ್ಲಿರುವ ಶ್ರೀಸುಬ್ರಹ್ಮಣ್ಯ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು.

ವಿಶೇಷ ಪಂಚಾಮೃತ ಅಭಿಷೇಕ ಸೇವೆ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚ ಕಜ್ಜಾಯ ಸೇವೆ, ಹಣ್ಣು ಕಾಯಿ ಪೂಜೆ, ಪುಷ್ಪಾರ್ಚನೆ, ಮಹಾ ಮಂಗಳಾರತಿ, ಭಜನಾ ಕಾರ್ಯಕ್ರಮ, ಸಿಡಿ ಮದ್ದು ಪ್ರದರ್ಶನ ಹಾಗೂ ಮಹಾಪೂಜೆ ನಡೆಯಿತು. ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಇದೇ ಸಂದರ್ಭ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂನ್ನು ಆಯೋಜಿಸಲಾಗಿತ್ತು.

ಜಿಲ್ಲೆಯ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳೆಯರು ಹಾಗೂ ಮಕ್ಕಳು ನಾಗರಕಲ್ಲಿಗೆ ಹಾಲೆರೆದು ಭಕ್ತಿ ಮೆರೆದರು.

See also  ಬಾಗಲಕೋಟೆ: ವಿಚಾರಣಾಧೀನ ಕೈದಿ ಅನುಮಾನಾಸ್ಪದ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು