News Kannada
Thursday, October 06 2022

ಕರ್ನಾಟಕ

ನ.30ರಂದು ಚಿಕ್ಕಮಗಳೂರಿಗೆ ಸಿಎಂ ಸಿದ್ಧರಾಮಯ್ಯ ಭೇಟಿ - 1 min read

Photo Credit :

ನ.30ರಂದು ಚಿಕ್ಕಮಗಳೂರಿಗೆ ಸಿಎಂ ಸಿದ್ಧರಾಮಯ್ಯ ಭೇಟಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ಹಾಗೂ ಕೊಪ್ಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನ.30ರಂದು ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಎಂ.ಸಿ. ಶಿವಾನಂದ ಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರುಗಳು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ನೇತೃತ್ವದಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಜಿಲ್ಲೆಗೆ ಬರುವಂತೆ ಆಹ್ವಾನಿಸಲಾಯಿತು. ನ.30ರಂದು ನರಸಿಂಹರಾಜಪುರದಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿಗಳು ಸಂಜೆ ಕೊಪ್ಪದಲ್ಲಿ ನಡೆಯುವ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದರೆಂದು ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ.

ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಜಿಲ್ಲೆಯ 5 ಕ್ಷೇತ್ರಗಳನ್ನು ಗೆಲ್ಲುವ ಎಲ್ಲಾ ತಯಾರಿಯನ್ನು ನಡೆಸಬೇಕೆಂದು ಜಿಲ್ಲಾ ಕಾಂಗ್ರೆಸ್ ಆಧ್ಯಕ್ಷರಿಗೆ ಸೂಚಿಸಿದರು ಮತ್ತು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ನಿಮ್ಮೆಲ್ಲರ ಕೋರಿಕೆಯಂತೆ ಹಿಂದೆಯೂ ಸ್ಪಂದಿಸಿದ್ದು ಮುಂದೆಯೂ ಜಿಲ್ಲೆಯ ಜನರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದರು.

See also  ವಿನಯ ಕುಲಕರ್ಣಿ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡ ಡಿ ಕೆ ಶಿವಕುಮಾರ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

179
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು