News Kannada
Tuesday, October 04 2022

ಕರ್ನಾಟಕ

`ಜಾತ್ಯತೀತ ವಾದದಿಂದ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭವಿಷ್ಯ’ - 1 min read

Photo Credit :

`ಜಾತ್ಯತೀತ ವಾದದಿಂದ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭವಿಷ್ಯ'

ಮಡಿಕೇರಿ: ಜಾತ್ಯತೀತ ವಾದದಿಂದ ಮಾತ್ರ ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಭವಿಷ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಿ.ಎ.ಜೀ ವಿಜಯ, ಹಿಂದುತ್ವ ವಾದದ ಅತಿರೇಕದಿಂದ ಸಮಾಜದಲ್ಲಿ ಒಡಕು ಮೂಡುತ್ತಿರುವುದು ವಿಷಾದನೀಯವೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಮಡಿಕೇರಿ ನಗರ ಜಾತ್ಯತೀತ ಜನತಾ ದಳದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಾತಿ, ಧರ್ಮಗಳ ಹೆಸರಿನಲ್ಲಿ ಮತ ಗಳಿಕೆಗಾಗಿ ಸಮಾಜವನ್ನು ಛಿದ್ರಗೊಳಿಸಲಾಗುತ್ತಿದ್ದು, ದೇಶದ ಇತ್ತೀಚೆಗಿನ ಬೆಳವಣಿಗೆಯನ್ನು ಗಮನಿಸಿದರೆ ಆತಂಕ ಸೃಷ್ಟಿಯಾಗುತ್ತಿದೆ ಎಂದರು.

ದೇಶದ ಪ್ರಧಾನಿ ವಿದೇಶಗಳಿಗೆ ಭೇಟಿ ನೀಡಿ ಅಲ್ಲಿನ ಪ್ರತಿನಿಧಿಗಳನ್ನು ಅಪ್ಪಿಕೊಳ್ಳುವ ಮೂಲಕ ಸ್ನೇಹಹಸ್ತ ಚಾಚುತ್ತಿದ್ದಾರೆ. ಮುಸ್ಲಿಂ ರಾಷ್ಟ್ರಗಳಿಗೂ ಪ್ರಧಾನಿ ಭೇಟಿ ಮಾಡಿ ಇದೇ ವರ್ತನೆಯನ್ನು ಪ್ರದರ್ಶಿಸುತ್ತಿದ್ದಾರೆ. ಆದರೆ ಭಾರತದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷದ ಮನೋಭಾವನೆ ಹೆಚ್ಚಾಗುತ್ತಿರುವುದನ್ನು ಪ್ರಧಾನಿ ಗಮನಿಸುತ್ತಿಲ್ಲವೆಂದು ಟೀಕಿಸಿದರು. ದೇಶದಲ್ಲಿ ಇತರ ಜಾತಿಗಳ ಮಂದಿ ಇರಬಾರದೆಂದರೆ ತೈಲೋತ್ಪನ್ನಗಳನ್ನು ಒದಗಿಸುತ್ತಿರುವ ಮುಸ್ಲಿಂ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಕಡಿದುಕೊಳ್ಳಲು ಸಾಧ್ಯವೇ ಎಂದು ಬಿ.ಎ.ಜೀ ವಿಜಯ ಪ್ರಶ್ನಿಸಿದರು.

ಶಾಂತಿ, ಸಾಮರಸ್ಯ, ಸೌಹಾರ್ದತೆ ಹಾಗೂ ಜಾತ್ಯತೀತ ಮನೋಭಾವದಿಂದ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬಹುದೆ ಹೊರತು ಕೇವಲ ಹಿಂದುತ್ವ ವಾದದಿಂದ ಸಾಧ್ಯವಿಲ್ಲವೆಂದರು. ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಆ ನಂತರದ ವರ್ಷಗಳಲ್ಲಿ ಹಿಂದುತ್ವ ವಾದದ ಪ್ರತಿಪಾದನೆ ಇರಲಿಲ್ಲ, ಆದರೆ ಇತ್ತೀಚಿನ ವರ್ಷಗಳಲ್ಲಿ ಹಿಂದುತ್ವದ ವಾದ ಅತಿರೇಕಗೊಂಡಿರುವುದು ಯಾಕೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

See also  ಕೊಡಗಿನ10 ಸಾಕಾನೆಗಳು ಉತ್ತರಾಖಾಂಡ್ ಗೆ ರವಾನೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು