News Kannada
Saturday, September 24 2022

ಕರ್ನಾಟಕ

ಪ್ರತಾಪ್ ಸಿಂಹ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ - 1 min read

Photo Credit :

ಪ್ರತಾಪ್ ಸಿಂಹ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ

ಸೋಮವಾರಪೇಟೆ: ಹುಣಸೂರಿನಲ್ಲಿ ಹನುಮಾನ್ ಜಯಂತಿ ಮೆರವಣಿಗೆ ವೇಳೆ ಮೈಸೂರು ಸಂಸದ ಪ್ರತಾಪ್ ಸಿಂಹರನ್ನು ಬಂಧಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಶಾಸಕ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕರು, ಹಿಂದೂಗಳ ಆರಾಧ್ಯ ದೇವತೆಯಾದ ಹನುಮನ ಜಯಂತಿಯನ್ನು ಆಚರಿಸಲು ಅಡ್ಡಪಡಿಸಿದ್ದಲ್ಲದೇ, ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸ್ಥಳಕ್ಕೆ ಆಗಮಿಸಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಬಂಧಿಸಿದ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು.

ರಾಜ್ಯದಲ್ಲಿ ಪ್ರಜಾಪ್ರಭುತ್ವದ ಸರ್ಕಾರ ಅಸ್ತಿತ್ವದಲ್ಲಿದೆಯೋ ಎಂಬ ಸಂಶಯ ಕಾಡುತ್ತಿದೆ. ಸಿದ್ದರಾಮಯ್ಯ ಅವರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಎಲ್ಲಾ ಧರ್ಮದವರಿಗೂ ಅವರವರ ಧಾರ್ಮಿಕ ಹಬ್ಬಗಳನ್ನು ಆಚರಿಸಲು ಅವಕಾಶವಿದೆ. ಹೀಗಿರುವಾಗ ಒಂದು ಕೋಮಿಗೆ ಮಾತ್ರ ಸೀಮಿತವಾದಂತೆ ಸಿದ್ದರಾಮಯ್ಯ ಅವರು ವರ್ತಿಸುತ್ತಿದ್ದಾರೆ. ಇದರ ಪರಿಣಾಮ ಮುಂದಿನ ಚುನಾವಣೆಯಲ್ಲಿ ಅನುಭವಿಸಲಿದ್ದಾರೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಮಾತನಾಡಿ, ಸಿದ್ದರಾಮಯ್ಯನವರು ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಟಿಪ್ಪು ಜಯಂತಿ ವಿರೋಧಿಸಿದರೂ ಜೈಲು, ಹನುಮ ಜಯಂತಿ ಆಚರಿಸಿದರೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಿಗೆ ಜೈಲಿಗೆ ತಳ್ಳುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರನ್ನು ಯಾವುದೇ ಪೂರ್ವ ಅನುಮತಿಯಿಲ್ಲದೇ ಬಂಧಿಸಿರುವುದು ಪ್ರಜಾತಂತ್ರ ವ್ಯವಸ್ಥೆಗೆ ಶೋಭೆ ತರುವುದಿಲ್ಲ. ಸಂಸದರಿಗೆ ನೀತಿಪಾಠ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಆಡಳಿತವಿದ್ದಾಗ ವಿಧಾನಸೌಧದ ಬಾಗಿಲಿಗೆ ಒದ್ದು ಅವಮಾನ ಮಾಡಿದ್ದೂ ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಅವರ ಮೇಲೆ ಹಲ್ಲೆ ನಡೆಸಿದಾಗ ಅವರು ಶಾಸಕರಾಗಿದ್ದರು ಎಂಬುದು ನೆನಪಿರಲಿಲ್ಲವೇ ಎಂದು ಕಟಕಿಯಾಡಿದರು.

ಪ್ರತಿಭಟನೆಯಲ್ಲಿ ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್ ಸೇರಿದಂತೆ ಬಿಜೆಪಿಯ ನೂರಾರು ಕಾರ್ಯಕರ್ತರು ಪಾಲ್ಗೊಂಡು ಪುಟ್ಟಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು.

See also  ಚುನಾವಣಾ ಕ್ರಮಗಳು: ಕೊಡಗಿನ 14 ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು