News Kannada
Saturday, September 24 2022

ಕರ್ನಾಟಕ

ಮಹಾಮಸ್ತಕಾಭಿಷೇಕ ಪ್ರಯುಕ್ತ ಮೈಸ್ಟಾಂಪ್ ಬಿಡುಗಡೆ - 1 min read

Photo Credit :

ಮಹಾಮಸ್ತಕಾಭಿಷೇಕ ಪ್ರಯುಕ್ತ ಮೈಸ್ಟಾಂಪ್ ಬಿಡುಗಡೆ

ಹಾಸನ: ಮಹಾಮಸ್ತಕಾಭಿಷೇಕ ಮಹೋತ್ಸವ ನಿಮಿತ್ತ ಶ್ರವಣಬೆಳಗೊಳದ ಶ್ರೀ ಕಾನಜಿ ಯಾತ್ರಿಕಾಶ್ರಮದಲ್ಲಿ ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ಮೈಸ್ಟಾಂಪ್, ವಿಶೇಷ ಅಂಚೆ ಲಕೋಟೆ ಹಾಗೂ ವಿಶೇಷ ದಿನಾಂಕ ಮುದ್ರೆಗಳನ್ನು  ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಬಿಡುಗಡೆ ಮಾಡಿದರು.

ಈ ಸ್ಟಾಂಪ್ ನ ವಿಶೇಷ ಏನೆಂದರೆ, ಇದರಲ್ಲ್ಲಿ ಸ್ಮೃತಿಚಿಹ್ನೆ, ರೈಲ್ವೆ ಇಂಜಿನ್ ಮತ್ತು ಮಹಾಮಸ್ತಕಾಭಿಷೇಕ ಮಹೋತ್ಸವ-2018ರ ಲಾಂಛನ ಚಿಹ್ನೆಯಿದ್ದು ಸಾವಿರಾರು ವರ್ಷದ ಇತಿಹಾಸವನ್ನು ನೆನಪಿಸುತ್ತಿದೆ.

ಈ ವೇಳೆ ಮಾತನಾಡಿದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು, ಯಾತ್ರಾತ್ರಿಗಳಿಗೆ ಹಾಗೂ ಪ್ರವಾಸಿಗರಿಗೆ ಅಂಚೆ ಚೀಟಿಗಳು ಸುಲಭ ರೀತಿಯಲ್ಲಿ ದೊರೆಯುವಂತೆ ವಿಂಧ್ಯಾಗಿರಿ ಬೆಟ್ಟದ ಕೆಳ ಭಾಗದಲ್ಲೇ ಮಾರಾಟದ ವ್ಯವಸ್ಥೆ ಮಾಡಬೇಕು ಎಂದರು.

ಇದೇ ವೇಳೆ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕುಮಾರ್ ಅವರಿಗೆ ಪತ್ರ ಬರೆಯುವ ಮೂಲಕ ವಿಶೇಷವಾಗಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಆಹ್ವಾನಿಸಲಾಯಿತು.

ದಕ್ಷಿಣ ಕರ್ನಾಟಕ ಪ್ರಾಂತ್ಯದ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ಮಾತನಾಡಿ, ಮೈಸ್ಟಾಂಪ್ ಇತ್ತೀಚೆಗೆ ಆರಂಭಗೊಂಡ ಯೋಜನೆ. ಈ ವಿಶೇಷ ಸಂದರ್ಭದಲ್ಲಿ ಸಂಸ್ಥೆಯ ಲಾಂಛನ ಬಿಡುಗಡೆ ಮಾಡಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಂತೋಷದ ಸಮಯವನ್ನು ಬಹುಕಾಲ ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಡುವುದು ಎಂದು ಹೇಳಿದರು.

ಮಹಾಮಸ್ತಕಾಭಿಷೇಕ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳ ಉಪ ಸಮಿತಿ ಅಧ್ಯಕ್ಷ ಎಸ್.ಎನ್.ಅಶೋಕ್ ಕುಮಾರ್ ಮಾತನಾಡಿ, 1981ರ ಮಹಾಮಸ್ತಕಾಭಿಷೇಕ ಸಮಯದಲ್ಲಿ 1 ರೂ. ಬೆಲೆಯ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿತ್ತು. ಈಗ 36 ವರ್ಷಗಳ ನಂತರ ಮತ್ತೆ ಬಿಡುಗಡೆ ಮಾಡುತ್ತಿರುವುದು ವಿಶೇಷವಾಗಿದೆ. 1910ರ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ ಅಷ್ಟು ಪ್ರಬಲವಾಗಿರಲಿಲ್ಲ. ಅಂದು ನಡೆದ ಮಹಾಮಸ್ತಕಾಭಿಷೇಕ ವರದಿಯನ್ನು ಮದ್ರಾಸ್ ಮೇಲ್ ಪತ್ರಿಕೆಗೆ ಪಾರಿವಾಳ ಬಳಸಿ ಸಮಾಚಾರವನ್ನು ಮದ್ರಾಸಿಗೆ ಕಳಿಸಿಕೊಟ್ಟಿದ್ದರು. ಅದು ಅಂದಿನ ಸಂಜೆ ಪತಿಕೆಯಲ್ಲಿ ಪ್ರಕಟವಾಗಿತ್ತು ಎಂದು ನೆನಪಿಸಿಕೊಂಡರು.

ಕಾರ್ಯಕ್ರಮದಲ್ಲಿ ಖ್ಯಾತ ಅಂಚೆ ಚೀಟಿ ಸಂಗ್ರಹಕಾರ ಮಹಾವೀರ ಕುಂದೂರು, ಮಹಾಮಸ್ತಕಾಭಿಷೇಕ ಮಹೋತ್ಸವ ರಾಷ್ಟ್ರೀಯ ಸಮಿತಿ ಕಾರ್ಯಾಧ್ಯಕ್ಷ ಎಸ್. ಜಿತೇಂದ್ರ ಕುಮಾರ್, ಹಾಸನದ ಸೂಪರಿಟೆಂಡೆಂಟ್ ಪೋಸ್ಟ್ ಆಫೀಸರ್ ಎಸ್. ಸದಾನಂದ, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಅಂಚೆ ಪಾಲಕರು ಹಾಗೂ ಶಾಲಾ ವಿದ್ಯಾರ್ಥಿಗಳು ಇದ್ದರು.

See also  ಭಾರತೀ ನಗರದಲ್ಲಿ ಯುವಕನನ್ನು ಅಟ್ಟಾಡಿಸಿ ಕೊಲೆಗೈದ ಹಂತಕರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು