News Kannada
Saturday, October 08 2022

ಕರ್ನಾಟಕ

ಹೊನ್ನಾವರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ - 1 min read

Photo Credit :

ಹೊನ್ನಾವರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

ಕಾರವಾರ: ಎರಡು ಕೋಮಿನ ಗಲಭೆಯಿಂದ ಹತ್ಯೆಯಾದ ಬಳಿಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಗಲಭೆಯ ಹಿನ್ನೆಲೆಯಲ್ಲಿ ಪಟ್ಟಣ ಸಮೀಪದ ಕರ್ಕಿ, ಹಳದೀಪುರ ಹಾಗೂ ಕಾಸರಕೋಡಿನ ಎಲ್ಲ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಯಿತು.

ವ್ಯಾಪಾರ ವಹಿವಾಟುಗಳು, ಬಸ್ ಹಾಗೂ ಇತರ ವಾಹನ ಓಡಾಟ ಸಂಪೂರ್ಣ ಸ್ಥಗಿತಗೊಂಡಿದ್ದು ಸ್ವಘೋಷಿತ ಬಂದ್ ವಾತಾವರಣ ನಿರ್ಮಾಣಗೊಂಡಿದೆ.

ಶವ ಪತ್ತೆ
ಗಲಭೆಯ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಪಟ್ಟಣದ ತುಳಸಿನಗರದ ಪರೇಶ ಕಮಲಾಕರ ಮೇಸ್ತ ಎನ್ನುವ ಯುವಕ ಯುವಕನ ಮೃತದೇಹ ಗಲಾಟೆ ನಡೆದಿದ್ದ ಶನಿ ದೇವಸ್ಥಾನದ ಹಿಂಭಾಗದಲ್ಲಿರುವ ಶೆಟ್ಟಿಕೆರೆಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಇದರಿಂದಾಗಿ ಪರಿಸ್ಥಿತಿ ಇನ್ನಷ್ಟು ಹಾಳಾಗಿದ್ದು ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದೆ.

ಮೃತದೇಹವನ್ನು ಕೇಸರಿ ಧ್ವಜಗಳಿದ್ದ ವಾಹನದಲ್ಲಿಟ್ಟು ಮೆರವಣಿ ಮಾಡಲಾಯಿತು. ಸುಮಾರು 10 ಸಾವಿರ ಜನರು ಮೆರವಣಿಗೆಯಲ್ಲಿ ಭಾಗವಹಿಸಿದರು. ಮೆರವಣಿಗೆಯಲ್ಲಿ ಭಾಗವಹಿಸಿದ ಕೆಲವರು ಇನ್ನೊಂದು ಕೋಮಿನವರಿಗೆ, ರಾಜ್ಯ ಸರ್ಕಾರ ಹಾಗೂ ಪೊಲೀಸರಿಗೆ ಧಿಕ್ಕಾರ ಕೂಗಿದರು. ವಂದೇ ಮಾತರಂ, ಭಾರತ ಮಾತಾ ಕಿ ಜೈ ಘೋಷಣೆಯೊಂದಿಗೆ ಮೆರವಣಿಗೆ ಸಾಗಿತು.

ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶೋಭಾ ಕರಂದ್ಲಾಜೆ, ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಜೆ.ಡಿ.ನಾಯ್ಕ, ಯಶೋಧರ ನಾಯ್ಕ ಹಾಗೂ ಬಿಜೆಪಿ ಮುಖಂಡರು ಕೆಲ ಸಮಯ ಮೆರವಣಿಗೆಯಲ್ಲಿ ಭಾಗವಹಿಸಿದರು.

ಐಜಿಪಿ ಹೇಮಂತ ಲಿಂಬಾಲ್ಕರ, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಸ್ಥಳದಲ್ಲಿ ಹಾಜರಿದ್ದರು. ಸಾವಿರಾರು ಪೊಲೀಸರು ಪಟ್ಟಣದಲ್ಲಿ ಬೀಡು ಬಿಟ್ಟಿದ್ದು ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿತ್ತು.

See also  ಬೈಕಿಗೆ ಓಮ್ನಿ ಡಿಕ್ಕಿ: ಯುವಕ ಮೃತ್ಯು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು