News Kannada
Tuesday, September 27 2022

ಕರ್ನಾಟಕ

ಪಡಿತರ ಅಂಗಡಿಯಲ್ಲಿ ವಂಚನೆ ಆರೋಪ : ಮಾಲೀಕನ ವಿರುದ್ಧ ಕ್ರಮಕ್ಕೆ ಒತ್ತಾಯ - 1 min read

Photo Credit :

ಪಡಿತರ ಅಂಗಡಿಯಲ್ಲಿ ವಂಚನೆ ಆರೋಪ : ಮಾಲೀಕನ ವಿರುದ್ಧ ಕ್ರಮಕ್ಕೆ ಒತ್ತಾಯ

ಮಡಿಕೇರಿ: ವೀರಾಜಪೇಟೆಯ ತೆಲುಗರ ಬೀದಿಯಲ್ಲಿರುವ ನ್ಯಾಯಬೆಲೆ ಅಂಗಡಿಯೊಂದರಲ್ಲಿ ನಿಗಧಿತ ಬೆಲೆಗಿಂತ ಹೆಚ್ಚಿನ ದರ ವಸೂಲಿ ಮಾಡಿ ಪಡಿತರ ಸಾಮಾಗ್ರಿಗಳನ್ನು ಪಡಿತರ ಚೀಟಿದಾರರಿಗೆ ವಿತರಿಸಲಾಗುತ್ತಿದ್ದು, ಅಂಗಡಿಯ ಮಾಲೀಕ ಕಾನೂನು ಬಾಹಿರವಾಗಿ ಆದಾಯಕ್ಕಿಂತಲೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಸ್ಥಳಿಯ ವಕೀಲರಾದ ಬಿ.ಈ. ಸೋಮ ಲೋಕನಾಥ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾರ್ವಜನಿಕವಾಗಿ ಬಹಿರಂಗವಾಗಿದ್ದ ಪಡಿತರ ಅಂಗಡಿಯ ಅವ್ಯವಹಾರದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದ ವೀರಾಜಪೇಟೆ ತಹಶೀಲ್ದಾರರು, ಆರು ತಿಂಗಳಾದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಕ್ರಮ ಆಸ್ತಿ ಗಳಿಕೆ ಕುರಿತು ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ಮತ್ತು ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ತೆಲುಗರ ಬೀದಿಯಲ್ಲಿರುವ ಮಂಜುನಾಥ ನ್ಯಾಯಬೆಲೆ ಅಂಗಡಿಯಲ್ಲಿ 38 ರೂ.ಗಳಿಗೆ ಮಾರಾಟ ಮಾಡಬೇಕಿದ್ದ ತೊಗರಿ ಬೆಳೆಯನ್ನು 60 ರೂ.ಗಳಿಗೆ ಮಾರಾಟ ಮಾಡುವುದನ್ನು ವಿರೋಧಿಸಿ ಕಳೆದ ಜೂ.26ರಂದು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು.

ಈ ಸಂದರ್ಭ ಸ್ಥಳಕ್ಕಾಗಮಿಸಿದ್ದ ವೀರಾಜಪೇಟೆ ತಹಶೀಲ್ದಾರರು ಸಾರ್ವಜನಿಕರ ಮೌಖಿಕ ದೂರನ್ನು ಆಲಿಸಿ ನ್ಯಾಯಬೆಲೆ ಅಂಗಡಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದರು. ಆದರೆ ಇದುವರೆಗೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಂಡಿರುವ ಬಗ್ಗೆ ಹಾಗೂ 2015-16 ಮತ್ತು 2016-17ರಲ್ಲಿ ಅಂಗಡಿ ಮಾಲೀಕರಿಗೆ ಸರಕಾರದಿಂದ ಪಾವತಿಸಿದ ವಾರ್ಷಿಕ ಅನುದಾನದ ಬಗ್ಗೆ ತನಗೆ ಮಾಹಿತಿ ನೀಡುವಂತೆ ತಶೀಲ್ದಾರರಿಗೆ ಅ.26ರಂದು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದೆ. ಆದರೆ ಇದುವರೆಗೆ ಅಧಿಕಾರಿಗಳಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದನ್ನು ಗಮನಿಸಿದರೆ ಅಧಿಕಾರಿಗಳು ಕೂಡ ನ್ಯಾಯಬೆಲೆ ಅಂಗಡಿಯ ಅವ್ಯವಹಾರದಲ್ಲಿ ಶಾಮೀಲಾಗಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ ಎಂದು ಸೋಮ ಲೋಕನಾಥ್ ಆರೋಪಿಸಿದರು.

ಮಂಜುನಾಥ ನ್ಯಾಯ ಬೆಲೆ ಅಂಗಡಿಯ ಮಾಲೀಕರು ನ್ಯಾಯ ಬೆಲೆ ಅಂಗಡಿಯ ಆದಾಯದಿಂದಲೇ ಕುಟುಂಬದ ಎಲ್ಲಾ ನಿರ್ವಹಣೆ ನಡೆಸಬೇಕಿದೆ. ಆದರೆ ಅಂಗಡಿ ಮಾಲೀಕರು, ಎರಡು ಕಡೆ ತಮ್ಮ ಹೆಸರಿನಲ್ಲಿ ಆಸ್ತಿ ಖರೀದಿಸಿ ನಾಲ್ಕು ಮನೆ ಮತ್ತು ಪತ್ನಿಯ ಹೆಸರಿನಲ್ಲಿ ಮತ್ತೊಂದು ಕಡೆ ಆಸ್ತಿ ಖರೀದಿಸಿ ಲಕ್ಷಾಂತರ ರೂ.ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಿದ್ದಾರೆ. ಇಷ್ಟೆಲ್ಲಾ ಖರ್ಚು ವೆಚ್ಚಗಳನ್ನು ಮಾಡಲು ಶಕ್ತರಾಗಿರುವ ಮಾಲೀಕರಿಗೆ ಬಿಪಿಎಲ್ ಪಡಿತರ ಚೀಟಿಯನ್ನು ಅಧಿಕಾರಿಗಳು ನೀಡಿದ್ದಾರೆ. ಒಂದು ನ್ಯಾಯ ಬೆಲೆ ಅಂಗಡಿಯ ಆದಾಯದಲ್ಲಿ ಸಾಮಾನ್ಯ ಜೀವನ ನಿರ್ವಹಣೆಯೇ ಕಷ್ಟವಾಗಿರುವ ಇಂದಿನ ದಿನಗಳಲ್ಲಿ ಇಷ್ಟೊಂದು ಐಷಾರಾಮಿ ಜೀವನ ನಡೆಸಲು ನ್ಯಾಯಯುತ ಆದಾಯದಿಂದ ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.

ಅಂಗಡಿ ಮಾಲೀಕರ ಅವ್ಯವಹಾರಕ್ಕೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಹಾಗೂ ಅಂಗಡಿ ಮಾಲೀಕರ ವಿರುದ್ಧ ಸರಕಾರ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ ಸೋಮ ಲೋಕನಾಥ್ ತಪ್ಪಿದಲ್ಲಿ ನ್ಯಾಯಾಂಗದ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದರು.

See also  ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರಿಗೆ ಜೀವ ಬೆದರಿಕೆ ಕರೆ

ವೀರಾಜಪೇಟೆ ನಾಗರಿಕ ವೇದಿಕೆಯ ಸಂಚಾಲಕ ಇ.ರ ದುರ್ಗಾಪ್ರಸಾದ್ ಮಾತನಾಡಿ, ಜಿಲ್ಲೆಯಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಇಂತಹ ಅವ್ಯವಹಾರಗಳು ನಡೆಯುತ್ತಿದ್ದು, ವೀರಾಜಪೇಟೆ ತೆಲುಗರ ಬೀದಿಯಲ್ಲಿರುವ ನ್ಯಾಯಬೆಲೆ ಅಂಗಡಿಯ ಅವ್ಯವಹಾರ ಕೇವಲ ಉದಾಹರಣೆ ಮಾತ್ರ ಎಂದು ಆರೋಪಿಸಿದರು. ಸಂಬಂಧಿಸಿದವರು ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ತೆಲುಗರ ಬೀದಿ ನಿವಾಸಿ ಲಕ್ಷ್ಮಣ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು