News Kannada
Monday, September 26 2022

ಕರ್ನಾಟಕ

ರವಿ ಬೆಳಗೆರೆ ಫಾರ್ಮ್ ಹೌಸ್ ನಲ್ಲಿ ಸಿಸಿಬಿ ಪೊಲೀಸರ ಶೋಧ - 1 min read

Photo Credit :

ರವಿ ಬೆಳಗೆರೆ ಫಾರ್ಮ್ ಹೌಸ್ ನಲ್ಲಿ ಸಿಸಿಬಿ ಪೊಲೀಸರ ಶೋಧ

ಕಾರವಾರ: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಆರೋಪದಡಿ ಬಂಧಿಸಲಾಗಿರುವ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳೆಗೆರೆ ವಿರುದ್ಧದ ತನಿಖೆ ತೀವ್ರಗೊಂಡಿದ್ದು, ಶನಿವಾರ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ಜಗಲಪೇಟ್‌ನಲ್ಲಿರುವ ಅವರ ನಿವಾಸಕ್ಕೆ ತೆರಳಿ ಸಿಸಿಬಿ ಪೊಲೀಸರು ಶೋಧ ನಡೆಸಿದ್ದಾರೆ.

ಸಿಸಿಬಿ ಸಿಪಿಐ ಕುಮಾರ್, ಎಚ್. ಡಿ. ಕುಲಕರ್ಣಿ ಹಾಗೂ ಮೂವರು ಸಿಬ್ಬಂದಿಗಳನ್ನೊಳಗೊಂಡ ತಂಡ ಜಗಲಪೇಟ್‌ದಲ್ಲಿರುವ ಬರ್ಭುಜ ಫಾರ್ಮ್ ಹೌಸ್ ಮೇಲೆ ದಾಳಿ ನೆಡೆಸಿ ಶೋಧ ನಡೆಸಿದ್ದಾರೆ. ರವಿ ಬೆಳಗೆರೆ ಬೆಡ್ ರೂಮ್, ಕಪಾಟು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಿದರು. ಅಲ್ಲದೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ಹಾಗೂ ಇನ್ನೊಬ್ಬ ಕೆಲಸಗಾರ ಚಂದ್ರಕಾಂತ ಅವರನ್ನು ತನಿಖೆಗೆ ಒಳಪಡಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ರವಿ ಬೆಳಗೆರೆ ಬಂಧನಕ್ಕೂ ಮೂರು ದಿನಗಳ ಹಿಂದೆ ಇದೇ ನಿವಾಸದಲ್ಲಿ ತಂಗಿದ್ದರು ಎನ್ನಲಾಗಿದೆ. ಈ ಕಾರಣದಿಂದ ಮನೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಹೆಚ್ಚಿನ ಮಾಹಿತಿಗಾಗಿ ನಾಲ್ಕು ತಾಸಿಗೂ ಹೆಚ್ಚು ಕಾಲ ಶೋಧ ನಡೆಸಿ, ಬೆಂಗಳೂರಿಗೆ ವಾಪಸ್ಸಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

See also  ಕೆರೆಗೆ ಈಜಲು ಇಳಿದ ಬಾಲಕರಿಬ್ಬರು ಜಲಸಮಾಧಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು